ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

Date:

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿಗೆ ಇದೀಗ ಬಡ್ತಿ ನೀಡಲಾಗಿದೆ. ಆರೋಪ ಹೊತ್ತಿರುವ ಕನ್ನಾಟ್ ಪ್ಲೇಸ್ ವಿಭಾಗದ ಎಸಿಪಿ (ACP) ವಿವೇಕ್ ಭಗತ್ ಅವರನ್ನು ‘ಹೆಚ್ಚುವರಿ ಡಿಸಿಪಿ’ಯಾಗಿ (Additional DCP) ಮುಂಬಡ್ತಿ ನೀಡಿ ಸೋಮವಾರ ಆದೇಶ ಹೊರಡಿಸಲಾಗಿದೆ.

- Advertisement -

​ಈ ಕುರಿತು ಸ್ಪಷ್ಟನೆ ನೀಡಿರುವ ಹಿರಿಯ ಪೊಲೀಸ್ ಅಧಿಕಾರಿಗಳು, ಇದೊಂದು ‘ವಾಡಿಕೆಯ ಪ್ರಕ್ರಿಯೆ’ (Routine order) ಎಂದು ಸಮರ್ಥಿಸಿಕೊಂಡಿದ್ದಾರೆ. ಅಧಿಕಾರಿಗಳ ಬಡ್ತಿಗೆ ಸಂಬಂಧಿಸಿದ ಕಡತಗಳನ್ನು ಬಹಳ ಹಿಂದೆಯೇ ರವಾನಿಸಲಾಗಿತ್ತು. ಅದರಂತೆ ವಿವೇಕ್ ಭಗತ್ ಅವರೊಂದಿಗೆ ಇತರ 11 ಅಧಿಕಾರಿಗಳಿಗೂ ಬಡ್ತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಶನಿವಾರ ಜಂತರ್ ಮಂತರ್‌ನಲ್ಲಿ ಚುನಾವಣಾ ಆಯೋಗದ ವಿರುದ್ಧ ನಡೆದ ಪ್ರತಿಭಟನೆ ವೇಳೆ ಮೂವರು ಮಹಿಳಾ ಪತ್ರಕರ್ತೆಯರು ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದರು. “ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುತ್ತಿದ್ದರು, ಆದರೆ ಸ್ಥಳದಲ್ಲಿ ಯಾವುದೇ ಮಹಿಳಾ ಪೊಲೀಸ್ ಸಿಬ್ಬಂದಿ ಇರಲಿಲ್ಲ. ಈ ಬಗ್ಗೆ ನಾನು ಎಸಿಪಿ ವಿವೇಕ್ ಭಗತ್ ಅವರನ್ನು ಪ್ರಶ್ನಿಸಿದಾಗ, ಅವರು ನನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಹಿಂದಕ್ಕೆ ತಳ್ಳಿದರು” ಎಂದು ಸಂತ್ರಸ್ತ ಪತ್ರಕರ್ತೆಯೊಬ್ಬರು ಆರೋಪಿಸಿದ್ದರು.

​ಈ ಆರೋಪಗಳ ಬೆನ್ನಲ್ಲೇ ಶನಿವಾರ ಸಂಜೆ ಹಲವಾರು ಸ್ವತಂತ್ರ ಪತ್ರಕರ್ತರು ಹಾಗೂ ಸಾಮಾಜಿಕ ಜಾಲತಾಣಗಳ ಪ್ರಭಾವಿಗಳು (Influencers) ಸಂಸತ್ ಮಾರ್ಗ ಪೊಲೀಸ್ ಠಾಣೆ ಎದುರು ಜಮಾಯಿಸಿ, ಆರೋಪಿ ಎಸಿಪಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ಎಫ್‌ಐಆರ್ (FIR) ದಾಖಲಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

​ಸದ್ಯ ದೆಹಲಿ ಪೊಲೀಸರು ‘ಎಕ್ಸ್’ (ಟ್ವಿಟರ್) ಖಾತೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ಮಹಿಳಾ ಪತ್ರಕರ್ತೆಯರ ದೂರುಗಳನ್ನು ಸ್ವೀಕರಿಸಲಾಗಿದ್ದು, ನ್ಯಾಯಸಮ್ಮತ ಹಾಗೂ ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ‘ಕ್ರೈಂ ಬ್ರ್ಯಾಂಚ್’ಗೆ ವರ್ಗಾಯಿಸಲಾಗಿದೆ” ಎಂದು ತಿಳಿಸಿದ್ದಾರೆ. ಆದರೆ, ಆರೋಪಿತ ಅಧಿಕಾರಿಗೆ ಬಡ್ತಿ ನೀಡಿರುವುದನ್ನು ತೀವ್ರವಾಗಿ ಖಂಡಿಸಿರುವ ‘ಕಾಕ್ರೋಚ್ ಜನತಾ ಪಾರ್ಟಿ’, “ಲೈಂಗಿಕ ದೌರ್ಜನ್ಯ ಎಸಗಿದ್ದಕ್ಕೆ ಈ ಬಡ್ತಿಯೇ ಬಹುಮಾನವೇ?” ಎಂದು ಕಿಡಿಕಾರಿದೆ.

ಈ ಘಟನೆಯನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ದೆಹಲಿ ಪೊಲೀಸರ ಕಾರ್ಯವೈಖರಿಯ ವಿರುದ್ಧ ಹರಿಹಾಯ್ದಿದ್ದಾರೆ.

​”ಪತ್ರಕರ್ತೆಯೊಬ್ಬರು ಪೊಲೀಸ್ ಅಧಿಕಾರಿಯ ವಿರುದ್ಧ ದುರ್ವರ್ತನೆಯ ಆರೋಪ ಮಾಡಿದ್ದಾರೆ. ಎಫ್‌ಐಆರ್ ದಾಖಲಿಸಬೇಕೆಂಬ ಒಂದೇ ಬೇಡಿಕೆಯಿಟ್ಟುಕೊಂಡು ನೂರಾರು ಪತ್ರಕರ್ತರು ಗಂಟೆಗಟ್ಟಲೆ ಧರಣಿ ನಡೆಸಿದ್ದಾರೆ. ದೂರು ಬಂದಾಗ ಎಫ್‌ಐಆರ್ ದಾಖಲಿಸುವುದು ಪೊಲೀಸರ ಕನಿಷ್ಠ ಕರ್ತವ್ಯವಲ್ಲವೇ? ಅವರು ಅದನ್ನೂ ಮಾಡಿಲ್ಲ” ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

​ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿ, “ರಕ್ಷಣೆ ನೀಡಬೇಕಾದ ಪೊಲೀಸರೇ ಮಹಿಳೆಯರಲ್ಲಿ ಭಯ ಹುಟ್ಟಿಸುತ್ತಿದ್ದಾರೆ. ಕಾಲೇಜು ವಿದ್ಯಾರ್ಥಿನಿಯರಿಂದ ಹಿಡಿದು ಪತ್ರಕರ್ತೆಯರವರೆಗೆ ಎಲ್ಲೆಡೆ ಮಹಿಳೆಯರು ಅಭದ್ರತೆ ಎದುರಿಸುತ್ತಿದ್ದಾರೆ. ಹತ್ತಾರು ಪತ್ರಕರ್ತರು ಪ್ರತಿಭಟಿಸಿದರೂ ಎಫ್‌‌ಐಆರ್ ದಾಖಲಿಸಿಲ್ಲ, ಯಾವುದೇ ಕಠಿಣ ಕ್ರಮವನ್ನೂ ಕೈಗೊಂಡಿಲ್ಲ. ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಮಹಿಳೆಯರೊಂದಿಗೂ ಪೊಲೀಸರು ಅಸಭ್ಯವಾಗಿ ವರ್ತಿಸುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪತ್ರಕರ್ತರ ಮೇಲಿನ ಪೊಲೀಸರ ವರ್ತನೆ ಕುರಿತು ದೆಹಲಿಯ ‘ಪ್ರೆಸ್ ಕ್ಲಬ್ ಆಫ್ ಇಂಡಿಯಾ’ (PCI) ತೀವ್ರ ಆಘಾತ ಮತ್ತು ಬೇಸರ ವ್ಯಕ್ತಪಡಿಸಿದೆ. “ಪ್ರಜಾಪ್ರಭುತ್ವದಲ್ಲಿ ಇಂತಹ ವರ್ತನೆಗಳನ್ನು ಸಾಮಾನ್ಯವೆಂದು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಪತ್ರಕರ್ತರು ಯಾವುದೇ ಭಯ, ಆಕ್ರಮಣಶೀಲತೆ ಮತ್ತು ಬೆದರಿಕೆಗಳಿಲ್ಲದೆ ಮುಕ್ತವಾಗಿ ತಮ್ಮ ಕರ್ತವ್ಯ ನಿಭಾಯಿಸಲು ಅವಕಾಶ ನೀಡಬೇಕು. ರಾಷ್ಟ್ರದ ರಾಜಧಾನಿಯಲ್ಲೇ ಮಾಧ್ಯಮ ಸ್ವಾತಂತ್ರ್ಯಕ್ಕೆ ಈ ರೀತಿಯ ಅಡ್ಡಿಯಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ದೆಹಲಿ ಪೊಲೀಸರು ತಕ್ಷಣವೇ ಮಹಿಳಾ ಪತ್ರಕರ್ತೆಯ ದೂರಿನ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದೆ.

65368
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ, ಇಬ್ಬರು ಕೇಂದ್ರ ಸಚಿವರಿಗೆ ಕೊಕ್

ಉತ್ತರ ಪ್ರದೇಶದಿಂದ ತೆರವಾಗಲಿರುವ ಎಂಟು ರಾಜ್ಯಸಭಾ ಸ್ಥಾನಗಳಿಗೆ ಬಿಜೆಪಿ ಸೋಮವಾರ (ಅ....

ಆರೋಪಿಯ IQ ಕಡಿಮೆ ಇದ್ದ ಮಾತ್ರಕ್ಕೆ ವಿಚಾರಣೆಯಿಂದ ಹೊರಗಿಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್

ಕಡಿಮೆ ಬುದ್ಧಿಮತ್ತೆ (IQ) ಅಥವಾ ಬೌದ್ಧಿಕ ಅಸಮರ್ಥತೆ ಇದೆ ಎಂಬ ಕಾರಣವೊಂದರಿಂದಲೇ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ; NSUIನಿಂದ ವಿನೂತನ ‘ಜೀವಂತ ಶವ’ ಪ್ರತಿಭಟನೆ

ಮತದಾರರ ಹಕ್ಕುಗಳು ಮತ್ತು ಚುನಾವಣಾ ಪ್ರಕ್ರಿಯೆಯ ಮೇಲಿನ ಬೆದರಿಕೆಗಳನ್ನು ಖಂಡಿಸಿ, ಮುಖ್ಯ...

ಸಾಗರ | ತಾಲೂಕು ಮಟ್ಟದ ಪ್ರಜಾಸೇವೆ ಸಭೆ; 500ಕ್ಕೂ ಹೆಚ್ಚು ಅರ್ಜಿಗಳ ಸ್ವೀಕಾರ

ಸಾಗರ ತಾಲೂಕಿನಲ್ಲಿ ಮನೆ ಬಾಗಿಲಿಗೆ ಬಂತು ಸರ್ಕಾರ–ಸೇವೆಗೆ ಇರಲಿದೆ ಸಹಕಾರ ಎಂಬ...