ಶಿವಮೊಗ್ಗ | ತೀರ್ಥಹಳ್ಳಿಯ ಸಮೃದ್ಧಿ, ಸಹ್ಯಾದ್ರಿ, ಶರಾವತಿ ಸಹಕಾರ ಸಂಘಗಳಲ್ಲಿ ಅವ್ಯವಹಾರ ಆರೋಪ

Date:

ತೀರ್ಥಹಳ್ಳಿಯ ಸಮೃದ್ಧಿ ತೋಟಗಾರಿಕಾ ಸಹಕಾರ ಸಂಘ, ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ಹಾಗೂ ಶರಾವತಿ ಪತ್ತಿನ ಸಹಕಾರ ಸಂಘಗಳಲ್ಲಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿದ್ದು, ಇದಕ್ಕೆ ಅಮಾಯಕ ಸದಸ್ಯರು ಬಲಿಯಾಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಸಹಕಾರ ಸಂಘಗಳ ಸಂತ್ರಸ್ತ ಸದಸ್ಯರ ಒಕ್ಕೂಟದ ಅಧ್ಯಕ್ಷ ಕಾನೀನ ಕಡಿದಾಳ ವಿಹಂಗಮ ಆಗ್ರಹಿಸಿದರು.

- Advertisement -

ಸೋಮವಾರ ಶಿವಮೊಗ್ಗ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ತೀರ್ಥಹಳ್ಳಿ ಸಮೃದ್ಧಿ ತೋಟಗಾರಿಕಾ ಉತ್ಪನ್ನ ಮತ್ತು ಮಾರಾಟ ಸಹಕಾರಿ ಸಂಘ, ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘ ಹಾಗೂ ಶರಾವತಿ ಪತ್ತಿನ ಸಹಕಾರ ಸಂಘಗಳಲ್ಲಿ ಸದಸ್ಯರಿಗೆ ವಂಚನೆ ಮಾಡಲಾಗಿದೆ. ಸಾಲ ಮಂಜೂರಾತಿ ವೇಳೆ ಖಾಲಿ ಸ್ಟಾಂಪ್ ಪೇಪರ್ ಮತ್ತು ಬಿಳಿ ಹಾಳೆಗಳಲ್ಲಿ ಸಹಿ ಪಡೆದು ದುರುಪಯೋಗಪಡಿಸಿಕೊಳ್ಳಲಾಗಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಕೋವಿಡ್ ಅವಧಿಯಲ್ಲಿ ಸಾಲ ಮರುಪಾವತಿ ವಿಳಂಬವಾದ ಪರಿಸ್ಥಿತಿಯನ್ನು ಬಳಸಿಕೊಂಡು ಖಾಲಿ ಚೆಕ್‌ಗಳಲ್ಲಿ ಹೆಚ್ಚಿನ ಮೊತ್ತ ನಮೂದಿಸಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಲಾಗುತ್ತಿದೆ. ಸದಸ್ಯರು ಸಾಲದ ವಿವರಗಳು ಹಾಗೂ ದಾಖಲೆಗಳನ್ನು ಕೇಳಿದರೂ ನೀಡದೆ ಕಿರುಕುಳ ನೀಡಲಾಗುತ್ತಿದೆ” ಎಂದು ದೂರಿದರು.

“ಸಂಘಗಳ ಆಡಳಿತ ಮಂಡಳಿ ಚುನಾವಣೆಗಳು ಕೇವಲ ನೆಪಮಾತ್ರಕ್ಕೆ ನಡೆಯುತ್ತಿದ್ದು, ಕುಟುಂಬದ ಸದಸ್ಯರನ್ನೇ ನಿರ್ದೇಶಕರನ್ನಾಗಿ ಮಾಡಲಾಗಿದೆ. ನಕಲಿ ದಾಖಲೆಗಳ ಆಧಾರದ ಮೇಲೆ ಹೆಚ್ಚಿನ ಸಾಲ ತೋರಿಸಿ ಮೀಟರ್ ಬಡ್ಡಿ ವಸೂಲಿ ಮಾಡಲಾಗುತ್ತಿದೆ. ಷೇರು ಸದಸ್ಯರ ಆಸ್ತಿಗಳನ್ನು ಕಬಳಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಸಂತ್ರಸ್ತೆ ಅನ್ನಪೂರ್ಣ ಆರ್. ಜವಳಿ ಮಾತನಾಡಿ, “ಸಹ್ಯಾದ್ರಿ ವಿವಿಧೋದ್ದೇಶ ಅಡಿಕೆ ಬೆಳೆಗಾರರ ಮಾರಾಟ ಸಹಕಾರ ಸಂಘದಲ್ಲಿ ಅನುಮತಿಯಿಲ್ಲದೆ ಚಿಟ್‌ಫಂಡ್ ವ್ಯವಹಾರ ನಡೆಸಲಾಗುತ್ತಿದೆ. ನಾನೂ ಕೂಡ ಈ ಚೀಟಿಯ ಚಿಟ್‌ಫಂಡ್‌ನಲ್ಲಿ ಹಣಹಾಕಿ ಮೋಸ ಹೋಗಿದ್ದೇನೆ ನನ್ನಂತೆ ಹಲವರು ಚಿಟ್‌ಫಂಡ್‌ಗೆ ಹಣಹಾಕಿ ಕಳೆದುಕೊಂಡಿದ್ದಾರೆ ಎಂಬುದು ಬಯಲಾಗಬೇಕಾಗಿದೆ. ಚಿಟ್‌ಫಂಡ್‌ನಲ್ಲಿ ಹಣ ಹೂಡಿಕೆ ಮಾಡಿದ ಅನೇಕರು ಮೋಸ ಹೋಗಿದ್ದು, ಹಣ ಕೇಳಿದರೆ ಖಾಲಿ ಚೆಕ್‌ಗಳಿಗೆ ಸಹಿ ಪಡೆದಿರುವುದನ್ನು ದುರುಪಯೋಗಪಡಿಸಿಕೊಂಡು ಸುಳ್ಳು ಕೇಸು ದಾಖಲಿಸಲಾಗುತ್ತಿದೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಬೇಸೂರು ಅಣುಸ್ಥಾವರ ನಿರ್ಮಾಣಕ್ಕೆ ಬೆಂಬಲವಿಲ್ಲ: ಕೆಡಿಪಿ ಸಭೆಯಲ್ಲಿ ಶಾಸಕರ ನಿರ್ಣಯ

“ಈ ಮೂರು ಸಹಕಾರ ಸಂಘಗಳ ಅವ್ಯವಹಾರಗಳ ಕುರಿತು ಸಹಕಾರ ಇಲಾಖೆಗೆ ಮುಖ್ಯಮಂತ್ರಿಗಳೂ ಸೂಚಿಸಿದ್ದು, ಸಹಕಾರ ಸಂಘಗಳ ನಿಬಂಧಕರು ಹಾಗೂ ಇಲಾಖೆ ವಿಳಂಬ ಮಾಡದೆ ಸಮಗ್ರ ತನಿಖೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಚೆಕ್ ಬೌನ್ಸ್ ನಲ್ಲಿ ಸಿಲುಕಿರುವ ಅಮಾಯಕ ಸಂತ್ರಸ್ತರಿಗೆ ನೆರವು ನೀಡಬೇಕು” ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಆರ್. ಪೂಜಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...