ಶಿವಮೊಗ್ಗ | ಮಧ್ಯ ಕರ್ನಾಟಕಕ್ಕೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಮನವಿ

Date:

ಮಂಗಳೂರಿನಲ್ಲಿ ಕರಾವಳಿ ಭಾಗದ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಿ ವ್ಯಾಪ್ತಿಗೆ ಶಿವಮೊಗ್ಗ ಜಿಲ್ಲೆ ಸೇರಿಸುವ ಮಾಹಿತಿ ಇದ್ದು, ಕರಾವಳಿಯ ಮಂಗಳೂರು ಪೀಠವು ಮಧ್ಯ ಕರ್ನಾಟಕದ ಭಾಗವಾದ ಶಿವಮೊಗ್ಗ ಜನಸಾಮಾನ್ಯರಿಗೆ ಸಂಪರ್ಕಕ್ಕೆ ಕಠಿಣವಾಗಿದ್ದು, ಈ ಪ್ರಸ್ತಾವನೆಯಲ್ಲಿ ಶಿವಮೊಗ್ಗ ಜಿಲ್ಲೆ ಕೈಬಿಟ್ಟು, ದಾವಣಗೆರೆ ಹಾವೇರಿ ಶಿವಮೊಗ್ಗ ಚಿತ್ರದುರ್ಗ ಸೇರಿದಂತೆ ಈ ಭಾಗದ ಮಧ್ಯ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಸಂಚಾರಿ ಪೀಠವನ್ನು ಸ್ಥಾಪಿಸುವ ಮೂಲಕ ಮಂಗಳೂರಿಗೆ ಸೇರಿಸುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ವಕೀಲರು ಇತರ ಶಿವಮೊಗ್ಗದ ಸಂಘಸಂಸ್ಥೆಗಳ ಸಹಯೋಗದಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

- Advertisement -
1004388668

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದ ವಕೀಲರು “ಕರ್ನಾಟಕ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಹೈದರಾಬಾದ್ ಕರ್ನಾಟಕ ಹಾಗೂ ಉತ್ತರ ಕರ್ನಾಟಕದ ಜನರಿಗಾಗಿ ಕಲಬುರಗಿ ಮತ್ತು ಧಾರವಾಡಗಳಲ್ಲಿ ಸಂಚಾರಿ ಪೀಠಗಳನ್ನು ಯಶಸ್ವಿಯಾಗಿ ಸ್ಥಾಪಿಸಲಾಗಿರುವ ಮಾದರಿಯಲ್ಲಿ ಬೆಂಗಳೂರಿನಿಂದ ಸುಮಾರು 250 ರಿಂದ 300 ಕಿ.ಮೀ ದೂರವಿರುವ ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಲಕ್ಷಾಂತರ ಜನರಿಗೂ ಸಹ ಸುಲಭವಾಗಿ, ಶೀಘ್ರವಾಗಿ ಮತ್ತು ಕೈಗೆಟುಕುವ ವೆಚ್ಚದಲ್ಲಿ ನ್ಯಾಯಾಲಯದ ಸೌಲಭ್ಯವನ್ನು ತಲುಪಿಸಲು ಶಿವಮೊಗ್ಗ ಜಿಲ್ಲೆಯಲ್ಲಿ ಸಂಚಾರಿ ಪೀಠದ ಸ್ಥಾಪನೆ ಮಾಡಬೇಕು. ಹಾಗೂ ಪ್ರಸ್ತಾವಿತ ಮಂಗಳೂರಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಹೈಕೋರ್ಟ್ ಸಂಚಾರಿ ಪೀಠಕ್ಕೆ ಸೇರಿಸುವ ಪ್ರಸ್ತಾವನೆ ಕೈಬಿಡಬೇಕು” ಎಂದು ಮುಖ್ಯಮಂತ್ರಿಯವರಲ್ಲಿ ಮನವಿ ನೀಡಿ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ನ್ಯಾಯಮೂರ್ತಿ ಜಸ್ವಂತ್ ಸಿಂಗ್ ಸಮಿತಿಯ ಮಾರ್ಗಸೂಚಿಗಳ ಅನ್ವಯ ಸಂಚಾರಿ ಪೀಠದ ಸ್ಥಾಪನೆಗೆ ಅಗತ್ಯವಿರುವ ಎಲ್ಲಾ ಅರ್ಹತೆಗಳನ್ನು ಮಧ್ಯ ಕರ್ನಾಟಕ ಭಾಗವು ಸಂಪೂರ್ಣವಾಗಿ ಹೊಂದಿದೆ. ಈ ಭಾಗದಿಂದ ವಾರ್ಷಿಕವಾಗಿ ದಾಖಲಾಗುವ ಪ್ರಕರಣಗಳ ಸಂಖ್ಯೆ ಪೀಠ ಸ್ಥಾಪನೆಗೆ ಪೂರಕವಾಗಿದೆ” ಎಂದು ಹಿರಿಯ ವಕೀಲರ ತಂಡ ಅಭಿಪ್ರಾಯಪಟ್ಟಿತು.

“ಶಿವಮೊಗ್ಗ ಜಿಲ್ಲಾ ವಕೀಲರ ಸಂಘ ಹಾಗೂ ಈ ಭಾಗದ ಎಲ್ಲಾ ಚುನಾಯಿತ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕ ಸಂಘ-ಸಂಸ್ಥೆಗಳು ಬೆಂಬಲ ಮತ್ತು ಸಹಮತ ನೀಡಿರುತ್ತಾರೆ. ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ಮಧ್ಯ ಕರ್ನಾಟಕ ಭಾಗದ ಕೇಂದ್ರಸ್ಥಾನವಾದ ಶಿವಮೊಗ್ಗದಲ್ಲಿ ಉಚ್ಚ ನ್ಯಾಯಾಲಯದ ಸಂಚಾರಿ ಪೀಠವನ್ನು ಸ್ಥಾಪಿಸಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭೂಮಾಪಕರ, ರಸಗೊಬ್ಬರ ಸಮಸ್ಯೆ ಬಗೆಹರಿಸದಿದ್ದರೆ ಹೋರಾಟ: ಹೆಚ್ ಆರ್ ಬಸವರಾಜಪ್ಪ

ಶಿವಮೊಗ್ಗ ಜಿಲ್ಲೆಯ ಹಿರಿಯ ವಕೀಲರನ್ನೊಳಗೊಂಡ ಜಿಲ್ಲಾ ವಕೀಲರ ತಂಡದಲ್ಲಿ ಹಿರಿಯ ವಕೀಲರಾದ ಕೆ.ಬಸಪ್ಪಗೌಡ, ಜಿ.ಆರ್.ರಾಘವೇಂದ್ರ, ಕೆ.ಪಿ.ಶ್ರೀಪಾಲ, ಲಕ್ಷ್ಮಿಕಾಂತ ಚಿಮನೂರು, ಶ್ರೀನಿವಾಸ, ಹಾಗೂ ಹೈ ಕೋರ್ಟ್ ವಕೀಲರಾದ ಹರೀಶ್, S V ಪ್ರಕಾಶ್, ಚಂದ್ರಕಾಂತ್ ಪಾಟೀಲ್, ಅನಿತಾ ಪಾಟೀಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು...