ಶಿವಮೊಗ್ಗ | ಸೂಡಾ ನೂತನ ಅಧ್ಯಕ್ಷರಿಗೆ ಶುಭಕೋರಿದ ಸಚಿವ ಮಧು ಬಂಗಾರಪ್ಪ; ಪಕ್ಷ ಸಂಘಟನೆಗೆ ಕರೆ

Date:

ಶಿವಮೊಗ್ಗ–ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ನೂತನ ಅಧ್ಯಕ್ಷರಾದ ಸಿ.ಜಿ. ಮಧುಸೂದನ್ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

- Advertisement -

ಈ ಸಂದರ್ಭದಲ್ಲಿ ಸಚಿವ ಮಧು ಬಂಗಾರಪ್ಪ ಅವರು ಸೂಡಾ ನೂತನ ಅಧ್ಯಕ್ಷ ಮಧುಸೂದನ್ ಅವರಿಗೆ ಶುಭ ಹಾರೈಸಿ, ಅವರ ನಾಯಕತ್ವದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ಅವಳಿ ನಗರಗಳು ಮೂಲಸೌಕರ್ಯ, ಸುಸಂಘಟಿತ ನಗರ ಯೋಜನೆ ಹಾಗೂ ಸಮಗ್ರ ಅಭಿವೃದ್ಧಿಯಲ್ಲಿ ಹೊಸ ಎತ್ತರಕ್ಕೇರಲಿ ಎಂದು ಆಶಿಸಿದರು.ಮಧುಸೂದನ್ ಅವರು ಸಚಿವರನ್ನು ಸನ್ಮಾನಿಸಲು ಮುಂದಾದಾಗ, “ನೀವೆಲ್ಲ ಯುವಕರು, ರಾಜಕೀಯದಲ್ಲಿ ಇನ್ನಷ್ಟು ಬೆಳೆಯಬೇಕು. ಈ ಸನ್ಮಾನ ನನಗಲ್ಲ, ನಿಮಗೆ ಸಲ್ಲಬೇಕು” ಎಂದು ಪ್ರೀತಿಯಿಂದ ಹೇಳಿದ ಸಚಿವರು, ಮಧುಸೂದನ್ ಅವರನ್ನು ಸನ್ಮಾನಿಸಿ ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿರುಪತಿ ಕೇಶಮುಂಡನ : ಭಕ್ತರ ನಂಬಿಕೆಯೂ, ಕೋಟ್ಯಂತರ ರೂಪಾಯಿ...

ಕೂದಲಿನ ಸೌಂದರ್ಯ ಪ್ರಜ್ಞೆ, ತಳಮಳಗಳ ಭಾವನೆಗಳೇ ಇಂದು ಜಾಗತಿಕವಾಗಿ ಕೋಟ್ಯಂತರ ರೂಪಾಯಿ ಉದ್ದಿಮೆಗಳಿಗೆ ಮೂಲ ಬಂಡವಾಳವಾಗಿದೆ. ಭಾರತದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ಅದು ಭಕ್ತಿಯ ರೂಪವನ್ನೂ ಪಡೆದುಕೊಂಡಿದೆ. ಅದಕ್ಕೆ ಉದಾಹರಣೆಯೆಂದರೆ...

“ನಾನು ಬಿಜೆಪಿಯ ಗುಲಾಮನಲ್ಲ, ಅಂಬೇಡ್ಕರ್‌ವಾದಿ”- ರಾಮದಾಸ್‌ ಅಠಾವಳೆ ಹೇಳಿಕೆಯ...

ತಾವು ಬಿಜೆಪಿಯ ಸದಸ್ಯರಲ್ಲ, ಕೇವಲ ಅಂಬೇಡ್ಕರ್‌ವಾದಿ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ನೀಡಿರುವ ಹೇಳಿಕೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಚರ್ಚೆಗೆ ನಾಂದಿ ಹಾಡಿದೆ. ಕಾಂಗ್ರೆಸ್ ಸ್ಪಂದಿಸದ ಕಾರಣಕ್ಕೆ ಎನ್‌ಡಿಎ ಸೇರಿದೆ ಎನ್ನುತ್ತಾರೆ...

ಬರಗಾಲ | ಕಾಡಿನಿಂದ ನಾಡಿನತ್ತ ವನ್ಯಜೀವಿಗಳು: ಮನುಷ್ಯರ ಜೀವಕ್ಕೆ...

ಹಳೇ ಮೈಸೂರು ಕಾಡು ಪ್ರಾಣಿಗಳ ಆವಾಸಸ್ಥಾನ. ಆದರೆ, ಇಂದು ಆ ಕಾಡಿನಂಚಿನಲ್ಲಿ ಬದುಕುತ್ತಿರುವ ಮನುಷ್ಯರಿಗೂ ಕಾಡಿನೊಳಗಿನ ವನ್ಯಜೀವಿಗಳಿಗೂ ನಡುವಿನ ಅಂತರ ಕಡಿಮೆಯಾಗುತ್ತಿದೆ. ಆಹಾರ ಮತ್ತು ನೀರು ಅರಸಿ ಕಾಡಿನಿಂದ ನಾಡಿನತ್ತ ಬರುತ್ತಿರುವ ಆನೆ,...
555626

ಯುವ ನಾಯಕತ್ವಕ್ಕೆ ಪ್ರೋತ್ಸಾಹ ನೀಡುವಲ್ಲಿ ತಾವು ಸದಾ ಮುಂದೆ ಎಂಬುದನ್ನು ಪ್ರಚುರಪಡಿಸಿದರು.2002ರಲ್ಲಿ ಎನ್‌ಎಸ್‌ಯುಐ ಸಂಘಟನೆಯ ಮೂಲಕ ರಾಜಕೀಯದಲ್ಲಿ ಸಕ್ರಿಯರಾದ ಸಿ.ಜಿ. ಮಧುಸೂದನ್ ಅವರು, 2010ರಲ್ಲಿ ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಸೂಡಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಅವರ ರಾಜಕೀಯ ಪಯಣದ ಮಹತ್ವದ ಘಟ್ಟವಾಗಿದೆ.ಬಳಿಕ ಮಧುಸೂದನ್ ಹಾಗೂ ಶಿವಮೊಗ್ಗದಿಂದ ಆಗಮಿಸಿದ್ದ ಮುಖಂಡರೊಂದಿಗೆ ಉಪಾಹಾರ ಸೇವಿಸುತ್ತಾ ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಯುವ ನಾಯಕರು ಸಂಘಟಿತವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

“ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎಷ್ಟು ಗಟ್ಟಿಯಾಗಿ ಕಟ್ಟಿಬೆಳೆಸುತ್ತೀರೋ, ಅಷ್ಟು ಪಕ್ಷದ ಶಕ್ತಿ ವೃದ್ಧಿಯಾಗುತ್ತದೆ. ರಾಹುಲ್ ಗಾಂಧಿ ಅವರ ಎಸ್‌ಐಆರ್‌ (ವಿಶೇಷ ತೀವ್ರ ಪರಿಷ್ಕರಣೆ) ವಿರುದ್ಧದ ಹೋರಾಟಕ್ಕೆ ಯುವಕರು ಶಕ್ತಿ ತುಂಬಬೇಕು. ಯುವಕರ ಕೈಗೆ ಅಧಿಕಾರ ನೀಡಬೇಕು ಎಂಬುದು ರಾಹುಲ್ ಗಾಂಧಿ ಅವರ ಆಶಯ. ಆ ಆಶಯಕ್ಕೆ ತಕ್ಕಂತೆ ಯುವ ನಾಯಕರು ನಡೆದುಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕೀಶ್ ಬಾನು, ಮಾಜಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನ ಕುಮಾರ್, ಜವಳಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಗೌಡ, ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ, ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಕ್ಷಾಂತರ ನಿಷೇಧ ಕಾಯ್ದೆ ಸುಧಾರಣೆಗಾಗಿ ಪಿಐಎಲ್‌; ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಪಕ್ಷಾಂತರ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಸಮಗ್ರ ಸುಧಾರಣೆಗಳನ್ನು ತರಬೇಕೆಂದು ಕೋರಿ ಸಲ್ಲಿಸಲಾಗಿರುವ...

ಸರ್ಕಾರಿ ಶಾಲೆಯಲ್ಲಿ ದಲಿತ ಸಿಬ್ಬಂದಿ ಮೇಜಿನ ಮೇಲೆ ಮಲ ವಿಸರ್ಜನೆ ಆರೋಪ; ಭುಗಿಲೆದ್ದ ಆಕ್ರೋಶ

ವೈಜ್ಞಾನಿಕ ಚಿಂತನೆ, ಸಾಮಾಜಿಕ ಅರಿವು, ಸಮಾನತೆ-ಸಹಬಾಳ್ವೆಯ ಪಾಠ ಕಲಿಸುವ ಶಿಕ್ಷಣ ಸಂಸ್ಥೆಗಳಲ್ಲೇ...

ಹೂಡಿಕೆ ಆಕರ್ಷಣೆ; ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧ: ಸಿಎಂ‌ ಡಿ ಕೆ‌ ಶಿವಕುಮಾರ್

ರಾಜ್ಯದಲ್ಲಿ ಹೂಡಿಕೆ ಆಕರ್ಷಸಿ, ಬೆಂಗಳೂರಿನಿಂದ ಹೊರಗೂ ಕೈಗಾರಿಕಾ ಬೆಳವಣಿಗೆಗೆ ಬದ್ಧವಾಗಿದ್ದೇವೆ ಎಂದು...

100 ವರ್ಷಗಳ ಸಹಾರನ್‌ಪುರ ಮಸೀದಿ ಧ್ವಂಸ: ಅರ್ಜಿ ವಿಚಾರಣೆಗೆ ‘ಸುಪ್ರೀಂ’ ನಕಾರ; ಹೈಕೋರ್ಟ್ ಮೊರೆ ಹೋಗಲು ಸೂಚನೆ

ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲೆಯಲ್ಲಿ 100 ವರ್ಷಗಳಷ್ಟು ಹಳೆಯದಾದ ಮಸೀದಿಯನ್ನು ಧ್ವಂಸಗೊಳಿಸಿರುವುದು,...