ಚುನಾವಣೆ ಹೊಸ್ತಿಲಲ್ಲೇ ಟಿಎಂಸಿಗೆ ಆಘಾತ: ಕಲ್ಲಿದ್ದಲು ಹಗರಣದಲ್ಲಿ ಐ-ಪ್ಯಾಕ್ ಮುಖ್ಯಸ್ಥನನ್ನು ಬಂಧಿಸಿದ ಇ.ಡಿ

Date:

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಕೇವಲ ಕೆಲವೇ ದಿನಗಳು ಬಾಕಿ ಇರುವಂತೆಯೇ, ರಾಜ್ಯದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ರೂಪಿಸುತ್ತಿರುವ ಪ್ರಮುಖ ರಾಜಕೀಯ ಸಲಹಾ ಸಂಸ್ಥೆಯಾದ ‘ಐ-ಪ್ಯಾಕ್’ (I-PAC – Indian Political Action Committee) ನಿರ್ದೇಶಕ ಹಾಗೂ ಸಹ-ಸಂಸ್ಥಾಪಕ ವಿನೇಶ್ ಚಾಂಡೇಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.

- Advertisement -

ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ (PMLA) ಪ್ರಕರಣದಡಿ ಏಪ್ರಿಲ್ 13ರ ಸೋಮವಾರ ತಡರಾತ್ರಿ ನವದೆಹಲಿಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮಂಗಳವಾರ ದೆಹಲಿಯ ವಿಶೇಷ ನ್ಯಾಯಾಲಯವು ಹೆಚ್ಚಿನ ವಿಚಾರಣೆಗಾಗಿ ಅವರನ್ನು 10 ದಿನಗಳ ಇ.ಡಿ. ಕಸ್ಟಡಿಗೆ ಒಪ್ಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

​ನವೆಂಬರ್ 2020ರಲ್ಲಿ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ಇ.ಡಿ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಪಶ್ಚಿಮ ಬಂಗಾಳದ ಅಸನ್ಸೋಲ್ ಸುತ್ತಮುತ್ತಲಿನ ಕುನುಸ್ಟೋರಿಯಾ ಮತ್ತು ಕಾಜೋರಾ ಪ್ರದೇಶಗಳಲ್ಲಿನ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಕಲ್ಲಿದ್ದಲು ಕಳ್ಳಸಾಗಣೆ ಹಗರಣ ಇದಾಗಿದೆ. ಇ.ಡಿ. ನೀಡಿರುವ ಅಧಿಕೃತ ಹೇಳಿಕೆಯ ಪ್ರಕಾರ, ಈ ಕಲ್ಲಿದ್ದಲು ಕಳ್ಳಸಾಗಣೆ ಜಾಲದೊಂದಿಗೆ ನಂಟು ಹೊಂದಿರುವ ‘ಹವಾಲಾ’ ದಳ್ಳಾಳಿಯೊಬ್ಬ ಐ-ಪ್ಯಾಕ್‌ನ ಅಧಿಕೃತ ನೋಂದಾಯಿತ ಕಂಪನಿಯಾದ ‘ಇಂಡಿಯನ್ ಪ್ಯಾಕ್ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್’ಗೆ ಹತ್ತಾರು ಕೋಟಿ ರೂಪಾಯಿಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾನೆ ಎಂಬ ಆರೋಪವಿದೆ.

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

​ಈ ಬಂಧನಕ್ಕೂ ಮುನ್ನ, ಏಪ್ರಿಲ್ 2ರಂದು ವಿನೇಶ್ ಚಾಂಡೇಲ್ ಅವರ ದೆಹಲಿ ನಿವಾಸ, ಐ-ಪ್ಯಾಕ್‌ನ ಮತ್ತೊಬ್ಬ ಸಹ-ಸಂಸ್ಥಾಪಕ ಹಾಗೂ ನಿರ್ದೇಶಕ ರಿಷಿ ರಾಜ್ ಸಿಂಗ್ ಅವರ ಬೆಂಗಳೂರು ನಿವಾಸ ಹಾಗೂ ಆಮ್ ಆದ್ಮಿ ಪಕ್ಷದ ಮಾಜಿ ಸಂವಹನ ಉಸ್ತುವಾರಿ ವಿಜಯ್ ನಾಯರ್ ಅವರ ಮುಂಬೈ ನಿವಾಸಗಳ ಮೇಲೆ ಇ.ಡಿ. ಏಕಕಾಲದಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿತ್ತು. ಇದಕ್ಕೂ ಮೊದಲು, ಜನವರಿ 8ರಂದು ಕೋಲ್ಕತ್ತಾದಲ್ಲಿರುವ ಐ-ಪ್ಯಾಕ್ ಕಚೇರಿ ಹಾಗೂ ಸಂಸ್ಥಾಪಕ ಪ್ರತೀಕ್ ಜೈನ್ ಅವರ ನಿವಾಸದ ಮೇಲೂ ದಾಳಿ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದಾಳಿ ನಡೆಯುತ್ತಿದ್ದ ಸ್ಥಳಕ್ಕೆ ಖುದ್ದಾಗಿ ಆಗಮಿಸಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

​2021ರಿಂದಲೂ ಟಿಎಂಸಿ ಹಾಗೂ ಪಶ್ಚಿಮ ಬಂಗಾಳ ಸರ್ಕಾರಕ್ಕೆ ಐ-ಪ್ಯಾಕ್ ರಾಜಕೀಯ ಸಲಹೆ ಹಾಗೂ ಚುನಾವಣಾ ತಂತ್ರಗಾರಿಕೆ ಸೇವೆಗಳನ್ನು ಒದಗಿಸುತ್ತಿದೆ. ಏಪ್ರಿಲ್ 23 ಮತ್ತು 29ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಕೇವಲ 10 ದಿನಗಳಿರುವಾಗ ಈ ಬಂಧನವಾಗಿರುವುದು ರಾಜಕೀಯ ಬಿರುಗಾಳಿ ಎಬ್ಬಿಸಲಿದೆ.

“ಚುನಾವಣಾ ಹೊಸ್ತಿಲಲ್ಲಿ ಐ-ಪ್ಯಾಕ್ ಸಹ-ಸಂಸ್ಥಾಪಕನ ಬಂಧನವು ಆತಂಕಕಾರಿಯಾಗಿದ್ದು, ಇದು ನ್ಯಾಯಸಮ್ಮತ ಮತ್ತು ಮುಕ್ತ ಚುನಾವಣೆಯ ಕಲ್ಪನೆಯನ್ನೇ ಬುಡಮೇಲು ಮಾಡುತ್ತದೆ” ಎಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ‘ಎಕ್ಸ್’ ಖಾತೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಚುನಾವಣಾ ಕಾರ್ಯತಂತ್ರಗಳಿಗೆ ಅಡ್ಡಿಪಡಿಸುತ್ತಿದೆ ಎಂದು ಟಿಎಂಸಿ ಆರೋಪಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...