ಸೊರಬ | ಸ್ಥಳದಲ್ಲೇ ಸಮಸ್ಯೆ ಪರಿಹರಿಸುವಂತೆ ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ಸೂಚನೆ

Date:

ಸೊರಬ ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳಿಗೆ ಅಲೆದಾಡುವ ಪರಿಸ್ಥಿತಿಗೆ ತೆರೆ ಎಳೆಯುವ ಉದ್ದೇಶದಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು.

- Advertisement -

ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಬೆಯಲ್ಲಿ ಮಾತನಾಡಿದ ಅವರು, “ಹಿರಿಯ ಅಧಿಕಾರಿಗಳು, ಶಾಸಕರು ಮತ್ತು ಸಚಿವರೇ ಜನರಿರುವಲ್ಲಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬುದು ಮುಖ್ಯಮಂತ್ರಿಗಳ ಆಶಯ. ಇದರಿಂದ ಜನರ ಶ್ರಮದ ಹಣ ಮತ್ತು ಸಮಯ ಉಳಿಯುವುದರ ಜೊತೆಗೆ, ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಸಿಗಲಿದೆ” ಎಂದು ತಿಳಿಸಿದರು.

ಪ್ರಜಾಸೇವಾ ಆಂದೋಲನವು ಜನರ ಹಕ್ಕು, ಅಗತ್ಯ ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಉತ್ತಮ ಆಡಳಿತಕ್ಕೆ ದಾರಿ ಮಾಡಿಕೊಡುವ ಸಾಮಾಜಿಕ ಕಾರ್ಯಕ್ರಮ ಎಂದ ಸಚಿವರು, ಸಾರ್ವಜನಿಕ ಸೇವೆಗಳ ಗುಣಮಟ್ಟ, ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಜನಸಹಭಾಗಿತ್ವಕ್ಕೆ ಇದು ಉತ್ತೇಜನ ನೀಡುತ್ತದೆ ಎಂದರು. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳನ್ನು ತಲುಪುವಂತೆ ಮಾಡುವಲ್ಲಿ ಹಾಗೂ ನಾಗರಿಕರಲ್ಲಿ ಜಾಗೃತಿ ಮೂಡಿಸುವಲ್ಲಿಯೂ ಈ ಸಭೆ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...
503156

ಭ್ರಷ್ಟಾಚಾರ, ಅನ್ಯಾಯ, ಅಸಮಾನತೆ ಮತ್ತು ಆಡಳಿತಾತ್ಮಕ ವಿಳಂಬದ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸುವ ಜೊತೆಗೆ, ಹಕ್ಕು ಹಾಗೂ ಕರ್ತವ್ಯಗಳ ಅರಿವನ್ನೂ ಇಂತಹ ಕಾರ್ಯಕ್ರಮಗಳು ಬೆಳೆಸುತ್ತವೆ. “ಜನರಿಗಾಗಿ ಆಡಳಿತ, ಜನರೊಂದಿಗೆ ಆಡಳಿತ” ಎಂಬ ಪ್ರಜಾಪ್ರಭುತ್ವದ ಆಶಯವನ್ನು ಬಲಪಡಿಸಲು ಆಂದೋಲನ ನೆರವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಯೋಜನೆಗಳ ಕುರಿತು ಮಾಹಿತಿ ನೀಡಲು 20ಕ್ಕೂ ಹೆಚ್ಚು ಮಾಹಿತಿ ಕೇಂದ್ರಗಳನ್ನು ತೆರೆಯಲಾಗಿತ್ತು. ಅಹವಾಲು ಸ್ವೀಕರಿಸಲು ಹಲವು ಕೌಂಟರ್‌ಗಳನ್ನು ವ್ಯವಸ್ಥೆಗೊಳಿಸಲಾಗಿತ್ತು. ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಿತ ಇಲಾಖೆಗಳಿಗೆ ರವಾನಿಸಲಾಗುವುದು, ಅರ್ಜಿದಾರರು ಇದ್ದಲ್ಲಿಯೇ ಕೈಗೊಂಡ ಕ್ರಮದ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು:

ಭೂ ಸುಧಾರಣೆ ಕಾಯ್ದೆಯಡಿ ಉಪವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಬೇಕು.ಪೊಲೀಸ್ ಇಲಾಖೆ ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು; ಜನಸಾಮಾನ್ಯರ ಮೇಲಿನ ದಬ್ಬಾಳಿಕೆ, ದುಂಡಾವರ್ತನೆಗೆ ರಕ್ಷಣೆ ನೀಡಬೇಕು.ಎರಡು ವರ್ಷಗಳ ಹಿಂದೆ ನಿರ್ಮಾಣವಾದ ದ್ಯಾವನಹಳ್ಳಿ ಶಾಲೆಗೆ ತುರ್ತಾಗಿ ಶೌಚಾಲಯ ನಿರ್ಮಿಸಿಕೊಡಬೇಕು.ಕೆ.ಜಿ. ಕೊಪ್ಪದಲ್ಲಿ ಸುಮಾರು 60 ಎಕರೆ ಕಂದಾಯ ಭೂಮಿ ಒತ್ತುವರಿಯಾಗಿ, ಅಲ್ಲಿನ ಗಿಡಗಳನ್ನು ಕಟಾವು ಮಾಡಲಾಗಿದೆ. ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ತುರ್ತು ಕ್ರಮ ಕೈಗೊಂಡು ವರದಿ ನೀಡಬೇಕು.ಮೈಸಾವಿ, ಹಾಲಗಳಲೆ ಸೇರಿದಂತೆ ಹಲವು ಗ್ರಾಮಗಳಲ್ಲಿ ರೇಷ್ಮೆ ಕೃಷಿಗೆ ವಿಪುಲ ಅವಕಾಶವಿದ್ದು, ಹಲವು ರೈತರು ಆಸಕ್ತಿ ತೋರಿದ್ದಾರೆ. ರೇಷ್ಮೆ ಬೆಳೆ ಕ್ಷೇತ್ರ ವಿಸ್ತರಣೆಗೆ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು.

ಸಭೆಯಲ್ಲಿ ರಸ್ತೆ ಅಭಿವೃದ್ಧಿ, ಸ್ಕಾಲರ್‌ಶಿಪ್, ಕಂದಾಯ, ಶಿಕ್ಷಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ವಿಷಯಗಳ ಕುರಿತು ನೂರಾರು ಅರ್ಜಿಗಳು ಸಲ್ಲಿಕೆಯಾದವು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಕ್ರಿಕೆಟ್‌ಗೆ ಎಂ.ಎಸ್. ಧೋನಿ ವಿದಾಯ: 2027ರ ಆವೃತ್ತಿಗೆ ಸಿಎಸ್‌ಕೆ ತಂಡದ ಮೆಂಟರ್ ಆಗಿ ನೇಮಕ

ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡದ ನೆಚ್ಚಿನ ನಾಯಕ, ಹಾಗೂ ವಿಶ್ವ...

ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮಹಿಳಾ ಮೀಸಲು ಅಂಗೀಕಾರದ ನಿರೀಕ್ಷೆ ಇದೆ: ಸಿಎಂ ಡಿ ಕೆ ಶಿವಕುಮಾರ್

ಮಹಿಳಾ ಮೀಸಲಾತಿಯಿಂದ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬದಲಾವಣೆ ಮಹಿಳೆಯರಿಲ್ಲದ ಪ್ರಜಾಪ್ರಭುತ್ವ ರೆಕ್ಕೆಯಿಲ್ಲದ ಹಕ್ಕಿಯಂತೆ ಮಹಿಳಾ...

ಮಂಗಳೂರು | ತುಳು ಸಾಹಿತ್ಯ ಜಗತ್ತಿಗೆ ತಲುಪಲಿ: ಗಣೇಶ್ ಎಸ್ ರಾವ್

ಪ್ರಾದೇಶಿಕ ಭಾಷೆಯ ಸಾಹಿತ್ಯ ಜಾಗತಿಕ ಭಾಷೆಗೆ ಅನುವಾದಗೊಂಡರೆ ದೇಶೀಯ ಸಾಂಸ್ಕೃತಿಕ ಮೌಲ್ಯಗಳು,...

ಮುಂಡಗೋಡ | ಭಾರತ-ನೇಪಾಳ ಅಂಧ ಮಹಿಳೆಯರ ಟಿ20 ಸರಣಿಗೆ ರಂಜಿತಾ ಹಾವೇರಿ ಆಯ್ಕೆ

ಭಾರತ ಮತ್ತು ನೇಪಾಳ ನಡುವೆ ನಡೆಯಲಿರುವ ಐದು ಪಂದ್ಯಗಳ ದ್ವಿಪಕ್ಷೀಯ ಅಂಧ...