ಹಾರ್ಮುಜ್ ಜಲಸಂಧಿ : ಭಾರತೀಯ ಹಡಗುಗಳಿಗೆ ಜಲಾಂತರ್ಗಾಮಿ ಬಾಂಬ್ ಬೆದರಿಕೆ‌

Date:

ಹಾರ್ಮುಜ್ ಜಲಸಂಧಿಯಲ್ಲಿ ಮೂಲಕ ಸಂಚಾರಕ್ಕೆ ಇರಾನ್ ಅವಕಾಶ ಮಾಡಿಕೊಟ್ಟಿದ್ದರೂ, ಜಿಪಿಎಸ್‌ ಸಮಸ್ಯೆ, ಜಲಾಂತರ್ಗಾಮಿ ಬಾಂಬ್ ಗಳ ಬೆದರಿಕೆ ಮತ್ತು ಸ್ಪಷ್ಟವಾದ ಪಥದರ್ಶಕ ನಿರ್ವಹಣಾ ವ್ಯವಸ್ಥೆ ಇಲ್ಲದಿರುವುದನ್ನು ಒಳಗೊಂಡು ಅನೇಕ ಸಮಸ್ಯೆಗಳಿಂದಾಗಿ ಭಾರತಕ್ಕೆ ಕಚ್ಚಾ ತೈಲಗಳನ್ನು ಹೊತ್ತು ತರುವುದಕ್ಕೆ ಸವಾಲು ಎದುರಿಸುವಂತಾಗಿದೆ.

“ಸೆಪಹ್ ನೌಕಾಪಡೆಯ ಮಾಹಿತಿಯನ್ನು ಎಲ್ಲಾ ಹಡಗುಗಳ ನಾವಿಕರು ಗಮನಿಸಿ. ಹಾರ್ಮುಜ್ ಜಲಸಂಧಿಯ ಮೂಲಕ ಹಡಗುಗಳ ಸಂಚಾರ ನಿಷೇಧಿಸಿದೆ. ಮುಂದಿನ ನೋಟಿಸ್ ನೀಡುವವರೆಗೆ ಜಲಸಂಧಿಯ ಮೂಲಕ ಯಾವುದೇ ಹಡಗುಗಳನ್ನು ಹೋಗಲು ಅವಕಾಶ ನೀಡಲಾಗುವುದಿಲ್ಲ” ಎಂದು ಸಾಗರ ವಾಹಿನಿಗಳ ಮೂಲಕ ಮತ್ತು ರೇಡಿಯೊ ಮೂಲಕ ಜಲಸಂಧಿ ಮೂಲಕ ಹಾದುಹೋಗದಂತೆ ಪದೇ ಪದೇ ಎಚ್ಚರಿಕೆ ನೀಡಲಾಗುತ್ತಿದೆ. ಇರಾನ್ ನ ಇಸ್ಲಾಮಿಕ್ ರೆವಲ್ಯೂಶನರಿ ಗಾರ್ಡ್ ಕಾರ್ಪ್ಸ್ (IRGC) ನೌಕಾಪಡೆಯಿಂದ ಈ ಸಂದೇಶಗಳು ಬರುತ್ತಿವೆ ಎಂದು ಹಡಗುಗಳ ಸಿಬ್ಬಂದಿ ತಿಳಿಸಿದ್ದಾರೆ.

- Advertisement -

ಮಾತ್ರವಲ್ಲದೆ, ಈ ಕಾರಣದಿಂದಾಗಿ ಗೊಂದಲ ಸೃಷ್ಟಿಯಾಗಿದೆ ಎಂದು ಕ್ಯಾಪ್ಟನ್ ಗಳು ಹೇಳುತ್ತಾರೆ, ಉಪಗ್ರಹ ಆಧರಿತ ವ್ಯವಸ್ಥೆಯನ್ನು ಅವಲಂಬಿಸಲು ಸಾಧ್ಯವಾಗದೇ ಇರುವುದರಿಂದ ವ್ಯಕ್ತಿಗತ ಪಥದರ್ಶನ ವ್ಯವಸ್ಥೆಯನ್ನು ಅವಲಂಬಿಸುವುದು ಅನಿವಾರ್ಯವಾಗಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ : ‘ವಿಶ್ವಗುರು’ವಿನ ನಿಜ ಬಣ್ಣ ಬಯಲು ಮಾಡಿದ ಮಧು ಕಿಶ್ವರ್: ಸುದ್ದಿ ಮಾಡದ ಮಡಿಲ ಮಾಧ್ಯಮಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕೆಮಿಕಲ್ ಟ್ಯಾಂಕ‌ರ್ ಕಮಾಂಡಿಂಗ್ ನಲ್ಲಿ 28 ವರ್ಷದ ಅನುಭವ ಹೊಂದಿರುವ ಕ್ಯಾಪ್ಟನ್ ಮನೀಶ್ ಕುಮಾ‌ರ್ ಅವರು ನಿರ್ದೇಶಿಸುವ ಹಡಗು ಪ್ರಸ್ತುತ ಹಾರ್ಮುಝ್ ಜಲಸಂಧಿಯನ್ನು ದಾಟಲು ಕಾಯುತ್ತಿದ್ದು “ಜಿಪಿಎಸ್ ಸಮಸ್ಯೆಯಿಂದಾಗಿ ಪಥದರ್ಶನ ವ್ಯವಸ್ಥೆಗೆ ತೀರಾ ಧಕ್ಕೆಯಾಗಿದೆ. ಹಡಗಿನ ಸ್ಥಳದ ಗುರುತು ನಿರ್ಧರಿಸುವುದು ಕಷ್ಟನಿಸಿದೆ. ಇಂತಹ ಕಿರಿದಾದ ಜಲಸಂಧಿಯಲ್ಲಿ ಸ್ಥಳದ ಗುರುತು ಪತ್ತೆ ಮಾಡಲು ಸಾಧ್ಯವಾಗದಿದ್ದಲ್ಲಿ ಹಡಗುಗಳು ಅಪಘಾತಕ್ಕೀಡಾಗುವ ಸಾಧ್ಯತೆ ಇದೆ” ಎಂದು ಕೂಡ ಅವರು ಆತಂಕವನ್ನು ವ್ಯಕ್ತಪಡಿಸುತ್ತಾರೆ.

ಹಡಗುಗಳು ಜಿಪಿಎಸ್ ವ್ಯವಸ್ಥೆಯನ್ನು ಅವಲಂಬಿಸಿದ್ದು, ಇಂತಹ ಸನ್ನಿವೇಶಗಳಲ್ಲಿ ಜಿಪಿಎಸ್ ವ್ಯತ್ಯಯ ಅಪಾಯಕಾರಿ ಸ್ಥಿತಿಯನ್ನು ಸೃಷ್ಟಿಸುತ್ತದೆ ಎಂದು ವಿಶ್ಲೇಷಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

ಮಳೆ ಅಬ್ಬರ: ಉತ್ತರ ಪ್ರದೇಶದಲ್ಲಿ 10 ಮಂದಿ ಸಾವು; ಒಡಿಶಾದಲ್ಲಿ ಪ್ರವಾಹ

ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಉತ್ತರ ಪ್ರದೇಶ...

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...