ಅಭಿವೃದ್ಧಿಗೆ ಸಹಕಾರ, ಮರುವಿಂಗಡಣೆಗೆ ಧಿಕ್ಕಾರ: ಟಿವಿಕೆ ಸರ್ಕಾರದ ನಿಲುವು ಸ್ಪಷ್ಟನೆ

Date:

ತಮಿಳುನಾಡು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದೊಂದಿಗೆ ಸಕಾರಾತ್ಮಕವಾಗಿ ಸಹಕರಿಸಲಾಗುವುದು, ಆದರೆ ರಾಜ್ಯದ ಪ್ರಾತಿನಿಧ್ಯವನ್ನು ಮೊಟಕುಗೊಳಿಸುವ ‘ಕ್ಷೇತ್ರ ಮರುವಿಂಗಡಣೆ’ ಪ್ರಕ್ರಿಯೆಯನ್ನು ನಮ್ಮ ಸರ್ಕಾರ ಸಾರಾಸಗಟಾಗಿ ತಿರಸ್ಕರಿಸುತ್ತದೆ ಎಂದು ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಸರ್ಕಾರದ ಸಚಿವ ಅರುಣ್ ರಾಜ್ ಸ್ಪಷ್ಟಪಡಿಸಿದ್ದಾರೆ.

- Advertisement -

ನೂತನ ಸರ್ಕಾರದ ನೀತಿ ನಿರೂಪಣೆ ಮತ್ತು ರಾಜಕೀಯ ನಿಲುವಿನ ಕುರಿತು ಚೆನ್ನೈನಲ್ಲಿ ಮಾತನಾಡಿದ ಅವರು, ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ದಶಕಗಳ ಕಾಲ ಹುಸಿ ದ್ರಾವಿಡ ಸಿದ್ಧಾಂತವನ್ನು ಪ್ರತಿಪಾದಿಸುತ್ತಾ, ಅಧಿಕಾರ ಅನುಭವಿಸಿದ ಈ ಎರಡೂ ಸಾಂಪ್ರದಾಯಿಕ ಪಕ್ಷಗಳನ್ನು ತಮಿಳುನಾಡಿನ ಪ್ರಜ್ಞಾವಂತ ಮತದಾರರು ಈ ಬಾರಿಯ ಚುನಾವಣೆಯಲ್ಲಿ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ಇದು ಭ್ರಷ್ಟಾಚಾರ ಮುಕ್ತ ಮತ್ತು ನೈಜ ಆಡಳಿತಕ್ಕೆ ಸಿಕ್ಕ ಜಯವಾಗಿದೆ” ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? NTA ಹಗರಣಗಳ ಸರಮಾಲೆ; ಕಳಚಿದೆ ಮೋದಿ ಸರ್ಕಾರದ ಹೊಣೆಗೇಡಿತನದ ಮುಖವಾಡ!

ಜನಸಂಖ್ಯೆ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಾಡುವ ಭವಿಷ್ಯದ ಪ್ರಸ್ತಾಪವನ್ನು ಕಟುವಾಗಿ ಟೀಕಿಸಿದ ಸಚಿವರು, “ಕುಟುಂಬ ಯೋಜನೆ ಮತ್ತು ಜನಸಂಖ್ಯಾ ನಿಯಂತ್ರಣವನ್ನು ಯಶಸ್ವಿಯಾಗಿ ಜಾರಿಗೊಳಿಸಿದ ತಮಿಳುನಾಡಿನಂತಹ ದಕ್ಷಿಣ ಭಾರತದ ರಾಜ್ಯಗಳಿಗೆ ಕ್ಷೇತ್ರ ಮರುವಿಂಗಡಣೆಯಿಂದ ತೀವ್ರ ಅನ್ಯಾಯವಾಗಲಿದೆ. ನಮ್ಮ ರಾಜ್ಯದ ಸಂಸದೀಯ ಬಲವನ್ನು ಕುಗ್ಗಿಸುವ ಇಂತಹ ಯಾವುದೇ ಅಸಮಾನತೆಯ ನಡೆಯನ್ನು ಟಿವಿಕೆ ಸರ್ಕಾರ ಎಂದಿಗೂ ಒಪ್ಪುವುದಿಲ್ಲ. ರಾಜ್ಯದ ಹಕ್ಕುಗಳ ರಕ್ಷಣೆಯಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ” ಎಂದು ಹೇಳಿದರು.

“ನಮ್ಮದು ಜನಪರ ಮತ್ತು ಪ್ರಗತಿಪರ ರಾಜಕಾರಣ. ತಮಿಳುನಾಡಿನ ಮೂಲಸೌಕರ್ಯ, ಶಿಕ್ಷಣ, ಉದ್ಯಮ ಮತ್ತು ಉದ್ಯೋಗ ಸೃಷ್ಟಿಗಾಗಿ ನಾವು ಒಕ್ಕೂಟ ಸರ್ಕಾರದೊಂದಿಗೆ ಕೈಜೋಡಿಸುತ್ತೇವೆ ಮತ್ತು ಅನುದಾನ ತರುತ್ತೇವೆ. ಆದರೆ, ಭಾಷೆ, ಸಂಸ್ಕೃತಿ ಮತ್ತು ರಾಜ್ಯದ ಸ್ವಾಯತ್ತತೆಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ಟಿವಿಕೆ ಪಕ್ಷವು ನೈಜ ಜಾತ್ಯತೀತ ಮತ್ತು ಸಮಾನತೆಯ ಸಿದ್ಧಾಂತದಡಿ ಕಾರ್ಯನಿರ್ವಹಿಸಲಿದ್ದು, ಹಿಂದಿನ ಸರ್ಕಾರಗಳಂತೆ ದ್ರಾವಿಡದ ಮುಖವಾಡ ಧರಿಸಿ ಜನರನ್ನು ವಂಚಿಸುವುದಿಲ್ಲ” ಎಂದು ಸಚಿವ ಅರುಣ್ ರಾಜ್ ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...