ತಾಳಿಕೋಟೆ | ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯ ಖಂಡನೀಯ: ದಲಿತ ವಿದ್ಯಾರ್ಥಿ ಪರಿಷತ್

Date:

ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯ ಅಕ್ರಮಗಳ ವಿರುದ್ಧ ಕ್ರಮ ಕೈಗೊಳ್ಳುವುದು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ 20 ದಿನಗಳ ಉಪವಾಸ ಸತ್ಯಾಗ್ರಹದ ಬಳಿಕ ನಡೆದ ‘ಸಂಸತ್ ಚಲೋ’ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳ ಮೇಲೆ ನಡೆಸಲಾದ ದೌರ್ಜನ್ಯವನ್ನು ದಲಿತ ವಿದ್ಯಾರ್ಥಿ ಪರಿಷತ್ ತೀವ್ರವಾಗಿ ಖಂಡಿಸಿದೆ.

- Advertisement -

ಈ ಕುರಿತು ತಾಳಿಕೋಟೆ ತಾಲೂಕು ಅಧ್ಯಕ್ಷ ಗುರುಪ್ರಸಾದ್ ಬಿಜಿ ಪ್ರತಿಕ್ರಿಯಿಸಿ, “ಸಾವಿರಾರು ವಿದ್ಯಾರ್ಥಿಗಳು ಸಂವಿಧಾನಬದ್ಧವಾಗಿ, ಶಾಂತಿಯುತವಾಗಿ ತಮ್ಮ ಹಕ್ಕಿಗಾಗಿ ಧ್ವನಿ ಎತ್ತಿದ್ದಾಗ ಸರ್ಕಾರ ಸಂವಾದದ ಬದಲು ಲಾಠಿಯನ್ನು ಉತ್ತರವಾಗಿ ಬಳಸಿದೆ. ಇದು ಪ್ರಜಾಪ್ರಭುತ್ವದ ಹರಣವಾಗಿದ್ದು, ಪ್ರಶ್ನಿಸುವ ಹಕ್ಕನ್ನೇ ದಮನಿಸುವ ಅಪಾಯಕಾರಿ ಬೆಳವಣಿಗೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ನೀಟ್ ಅಕ್ರಮದಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಸರ್ಕಾರ ಹೊಣೆಗಾರಿಕೆ ಸ್ವೀಕರಿಸುವ ಬದಲು ಪ್ರತಿಭಟನಾಕಾರರನ್ನು ಹತ್ತಿಕ್ಕುವ ದಾರಿಯನ್ನು ಹಿಡಿದಿದೆ ಎಂದು ಆರೋಪಿಸಿದರು.

ಕೇಂದ್ರ ಸರ್ಕಾರ ತಕ್ಷಣವೇ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು. ನೀಟ್ ಅಕ್ರಮದ ಕುರಿತು ಪಾರದರ್ಶಕ ಹಾಗೂ ನ್ಯಾಯಸಮ್ಮತ ತನಿಖೆ ನಡೆಸಬೇಕು. ಈ ಹಗರಣ ಮತ್ತು ಅದರ ಪರಿಣಾಮಗಳಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಗಳ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು. ಬಲಪ್ರಯೋಗದ ಬದಲು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ಗುರುಪ್ರಸಾದ್ ಬಿಜಿ ಒತ್ತಾಯಿಸಿದರು.

ಪ್ರಜಾಪ್ರಭುತ್ವದಲ್ಲಿ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನ ಮೂಲಭೂತ ಹಕ್ಕಾಗಿದ್ದು, ಅದನ್ನು ಲಾಠಿ ಮತ್ತು ದಮನದ ಮೂಲಕ ಹತ್ತಿಕ್ಕುವ ಯಾವುದೇ ಪ್ರಯತ್ನವನ್ನು ದೇಶದ ಜನತೆ ಒಪ್ಪುವುದಿಲ್ಲ ಎಂದು ದಲಿತ ವಿದ್ಯಾರ್ಥಿ ಪರಿಷತ್ ಎಚ್ಚರಿಕೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...