ತೆರಿಗೆ ವಂಚನೆ ಪ್ರಕರಣ: ಡಿಕೆ ಶಿವಕುಮಾರ್‌ ವಿದೇಶ ಪ್ರವಾಸಕ್ಕೆ ಕೋರ್ಟ್‌ ಅನುಮತಿ

Date:

ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಷರತ್ತುಗಳ ಅನ್ವಯ ನಿರ್ಬಂಧ ಎದುರಿಸುತ್ತಿದ್ದ ಕರ್ನಾಟಕದ ಉಪಮುಖ್ಯಮಂತ್ರಿ, ಸಚಿವ ಡಿ ಕೆ ಶಿವಕುಮಾರ್ ಅವರಿಗೆ ಬೆಂಗಳೂರಿನ ನ್ಯಾಯಾಲಯ ದೊಡ್ಡ ರಿಲೀಫ್ ನೀಡಿದೆ. ಮುಂದಿನ ಎರಡು ವರ್ಷಗಳ ಅವಧಿಗೆ ವಿವಿಧ ದೇಶಗಳಿಗೆ ಅಧಿಕೃತ ಹಾಗೂ ವೈಯಕ್ತಿಕ ಉದ್ಯಮದ ನಿಮಿತ್ತ ಪ್ರವಾಸ ಕೈಗೊಳ್ಳಲು ಕೋರ್ಟ್ ಷರತ್ತುಬದ್ಧ ಅನುಮತಿ ನೀಡಿದೆ.

- Advertisement -

ಬೆಂಗಳೂರಿನ ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ಕೆ ಎನ್ ಶಿವಕುಮಾರ್, ಈ ಮಹತ್ವದ ಆದೇಶ ಹೊರಡಿಸಿದ್ದು, ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ್ದಾರೆ. ಈ ಆದೇಶದನ್ವಯ ಡಿಕೆ ಶಿವಕುಮಾರ್ ಅಮೆರಿಕ, ಯುರೋಪ್ ದೇಶಗಳು, ಯುನೈಟೆಡ್ ಕಿಂಗ್‌ಡಮ್ (ಯುಕೆ), ಆಸ್ಟ್ರೇಲಿಯಾ, ರಷ್ಯಾ ಮತ್ತು ಅರಬ್ ರಾಷ್ಟ್ರಗಳಿಗೆ ಮುಂದಿನ 2 ವರ್ಷಗಳ ಅವಧಿಯಲ್ಲಿ ಭೇಟಿ ನೀಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರತಿಯೊಂದು ವಿದೇಶಿ ಪ್ರವಾಸದ ವೇಳಾಪಟ್ಟಿ ಮತ್ತು ಸಂಪೂರ್ಣ ವಿವರಗಳನ್ನು ತನಿಖಾ ಸಂಸ್ಥೆಗೆ ಮುಂಚಿತವಾಗಿಯೇ ಡಿಕೆ ಶಿವಕುಮಾರ್ ಲಿಖಿತ ರೂಪದಲ್ಲಿ ನೀಡಬೇಕು. ನ್ಯಾಯಾಲಯವು ಸೂಚಿಸಿದಾಗಲೆಲ್ಲಾ ಅವರು ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು. ಒಂದು ವೇಳೆ ಈ ಯಾವುದೇ ಷರತ್ತುಗಳನ್ನು ಉಲ್ಲಂಘಿಸಿದರೆ, ಪ್ರವಾಸದ ಅನುಮತಿಯನ್ನು ರದ್ದುಗೊಳಿಸುವಂತೆ ಕೋರಿ ತನಿಖಾ ಸಂಸ್ಥೆ ಅಥವಾ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲು ಸ್ವತಂತ್ರವಾಗಿದೆ ಎಂಬ ಷರತ್ತುಗಳನ್ನು ವಿಧಿಸಿ ಕೋರ್ಟ್‌ ಅನುಮತಿ ನೀಡಿದೆ.

ಡಿಕೆ ಶಿವಕುಮಾರ್ ಅವರ ಅರ್ಜಿ ಪ್ರಾಮಾಣಿಕ ಹಾಗೂ ನ್ಯಾಯಸಮ್ಮತವಾಗಿದೆ ಎಂದು ಅಭಿಪ್ರಾಯಪಟ್ಟ ನ್ಯಾಯಾಧೀಶರು, “ಅರ್ಜಿದಾರರು ತಮ್ಮ ವೈಯಕ್ತಿಕ ಉದ್ಯಮದ ಅಭಿವೃದ್ಧಿಗಾಗಿ ಹಾಗೂ ತಮಗೆ ಹಂಚಿಕೆಯಾಗಿರುವ ಬೆಂಗಳೂರು ಅಭಿವೃದ್ಧಿ ಮತ್ತು ಸಣ್ಣ ನೀರಾವರಿ ಖಾತೆಗಳ ಯೋಜನೆಗಳ ಅಧ್ಯಯನಕ್ಕಾಗಿ ವಿದೇಶಗಳಿಗೆ ಭೇಟಿ ನೀಡುವ ಅಗತ್ಯವಿದೆ. ಈ ಹಿಂದೆಯೂ ಅವರು ದುಬೈ ಸೇರಿದಂತೆ ಹಲವು ದೇಶಗಳಿಗೆ ಕೋರ್ಟ್ ಅನುಮತಿ ಪಡೆದೇ ಭೇಟಿ ನೀಡಿದ್ದರು. 2024 ರಲ್ಲೂ ಅವರಿಗೆ ಒಂದು ವರ್ಷದ ಅವಧಿಗೆ ವಿದೇಶ ಪ್ರವಾಸದ ಅನುಮತಿ ನೀಡಲಾಗಿತ್ತು. ಅಲ್ಲದೆ, ಇದೇ ಪ್ರಕರಣದ ಇತರ ಸಹ ಆರೋಪಿಗಳು ಸುಪ್ರೀಂ ಕೋರ್ಟ್‌ನಿಂದ ವಿಚಾರಣೆಗೆ ತಡೆಯಾಜ್ಞೆ ತಂದಿರುವುದರಿಂದ, ಸದ್ಯಕ್ಕೆ ವಿಚಾರಣೆಗೆ ಇವರ ದೈಹಿಕ ಹಾಜರಾತಿ ಅತ್ಯಗತ್ಯವೇನಲ್ಲ” ಎಂದು ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ರಷ್ಯಾ-ಉಕ್ರೇನ್ ವಾರ್‌: ವಿನಾಶಕಾರಿ ಕ್ಷಿಪಣಿ ದಾಳಿಯ ಎಚ್ಚರಿಕೆ; ಕೀವ್ ತೊರೆಯಲು ವಿದೇಶಿಗರಿಗೆ ರಷ್ಯಾ ಗಡುವು

2017ರ ಆಗಸ್ಟ್ 2 ರಂದು ಬೆಂಗಳೂರು-ಮೈಸೂರು ಹೆದ್ದಾರಿಯ ಈಗಲ್ಟನ್ ಗಾಲ್ಫ್ ರೆಸಾರ್ಟ್ ಸೇರಿದಂತೆ ಡಿಕೆ ಶಿವಕುಮಾರ್‌ ಒಡೆತನದ ನಿವಾಸಗಳ ಮೇಲೆ ಆದಾಯ ತೆರಿಗೆ (ಐಟಿ) ಇಲಾಖೆ ದಾಳಿ ನಡೆಸಿತ್ತು. ಈ ವೇಳೆ ಸುಮಾರು ₹8.83 ಕೋಟಿ ನಗದು ವಶಪಡಿಸಿಕೊಳ್ಳಲಾಗಿತ್ತು ಮತ್ತು ಪ್ರಮುಖ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಲಾಗಿದೆ ಎಂದು ಐಟಿ ಇಲಾಖೆ ಆರೋಪಿಸಿತ್ತು. ಈ ದಾಳಿಯ ಆಧಾರದ ಮೇಲೆ ಡಿ.ಕೆ. ಶಿವಕುಮಾರ್, ಸಚಿನ್ ನಾರಾಯಣ್, ಸುನಿಲ್ ಕುಮಾರ್ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ಎನ್. ರಾಜೇಂದ್ರ ಅವರ ವಿರುದ್ಧ ಐಟಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ತೆರಿಗೆ ವಂಚನೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆಯುವಾಗ, ಕೋರ್ಟ್ ಅನುಮತಿ ಇಲ್ಲದೆ ದೇಶ ಬಿಟ್ಟು ಹೋಗಬಾರದು ಎಂಬ ಷರತ್ತು ವಿಧಿಸಲಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...