ಶಿಕ್ಷಕರ ನೇಮಕಾತಿ ನಿಗದಿತ ವೇಳೆಗೆ ಪೂರ್ಣಗೊಳಿಸಲು ಸಚಿವ ಮಧು ಬಂಗಾರಪ್ಪ ಸೂಚನೆ

Date:

ಸರ್ಕಾರಿ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಿ, ಜನವರಿಯೊಳಗೆ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಇಲಾಖೆಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

- Advertisement -

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಗುರುವಾರ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಮಾರ್ಚ್–ಏಪ್ರಿಲ್ ತಿಂಗಳೊಳಗೆ ನೇಮಕಾತಿ ಆದೇಶಗಳನ್ನು ನೀಡಬೇಕು. ಜೂನ್‌ನಲ್ಲಿ ಶಾಲೆಗಳು ಆರಂಭವಾಗುವ ವೇಳೆಗೆ ಹೊಸ ಶಿಕ್ಷಕರು ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುವಂತಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್ ಅವರಿಗೆ ನಿರ್ದೇಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನ ದಿನ | ಸಂವಿಧಾನಕ್ಕೆ ಮೋದಿ ಸರ್ಕಾರ ಮತ್ತು...

ಭಾರತವು ಸಂವಿಧಾನ ದಿನವನ್ನು ಆಚರಿಸುತ್ತಿರುವ ಈ ಸಂದರ್ಭದಲ್ಲಿ, ದೇಶದ ಪ್ರಜಾಸತ್ತಾತ್ಮಕ ವ್ಯವಸ್ಥೆ ಮತ್ತು ಸಂವಿಧಾನದ ಮೂಲ ಆಶಯಗಳು ಅಭೂತಪೂರ್ವ ಬಿಕ್ಕಟ್ಟಿಗೆ ಸಿಲುಕಿವೆ. 2014ರಲ್ಲಿ ಅಧಿಕಾರಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಸಭೆಯಲ್ಲಿ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಶಿಕ್ಷಕರು ಮತ್ತು ಸಿಬ್ಬಂದಿ ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಕುರಿತು ಸುದೀರ್ಘ ಚರ್ಚೆ ನಡೆಸಲಾಯಿತು. ಅನುದಾನಿತ ನೌಕರರ ಸಮಸ್ಯೆಗಳ ಬಗ್ಗೆ ಚರ್ಚೆಸಭೆಯಲ್ಲಿ ಪ್ರಮುಖವಾಗಿ 01-04-2006ಕ್ಕೂ ಮೊದಲು ಅಧಿಸೂಚನೆಗೊಂಡು ನಂತರ ನೇಮಕಾತಿ ಆದೇಶ ಪಡೆದ ಅನುದಾನಿತ ನೌಕರರನ್ನು ಸರ್ಕಾರಿ ನೌಕರರ ಮಾದರಿಯಲ್ಲಿ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸುವುದು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸಂಬಂಧಿಸಿದಂತೆ ಕಾಲ್ಪನಿಕ ವೇತನ ಕುರಿತು ಹೈಕೋರ್ಟ್ ನೀಡಿರುವ ಆದೇಶ ಅನುಷ್ಠಾನಗೊಳಿಸುವುದು ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ 2015ರ ನಂತರ ತೆರವಾಗಿರುವ ಹುದ್ದೆಗಳನ್ನು ವಿಳಂಬವಿಲ್ಲದೆ ಭರ್ತಿ ಮಾಡುವ ಕುರಿತು ಚರ್ಚಿಸಲಾಯಿತು.

ಅದೇ ರೀತಿ, ಅನುದಾನಿತ ಪ್ರಾಥಮಿಕ ಶಾಲೆಗಳಲ್ಲಿ 1998ರಿಂದ ಖಾಲಿ ಉಳಿದಿರುವ ಹುದ್ದೆಗಳನ್ನು ಭರ್ತಿ ಮಾಡುವುದು, ಶಾಲೆಗಳ ಮಾನ್ಯತೆ ನವೀಕರಣ ಪ್ರಕ್ರಿಯೆಯನ್ನು ಸರಳೀಕರಿಸಲು ನೇಮಕಗೊಂಡ ಸದನದ ಸಮಿತಿಯ ವರದಿ ಜಾರಿಗೊಳಿಸುವುದು ಹಾಗೂ ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಪದೋನ್ನತಿ ಹೊಂದಿದ ಶಿಕ್ಷಕರು ಮತ್ತು ಉಪನ್ಯಾಸಕರಿಗೆ 15, 20 ಹಾಗೂ 25 ವರ್ಷಗಳ ಕಾಲಮಿತಿ ಬಡ್ತಿ ನೀಡುವಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಬಗ್ಗೆ ಚರ್ಚೆ ನಡೆಯಿತು.

ಸರ್ಕಾರಿ ನೌಕರರಿಗೆ ಇರುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುದಾನಿತ ನೌಕರರಿಗೂ ವಿಸ್ತರಿಸುವುದು, ಸರ್ಕಾರಿ ಮಹಿಳಾ ನೌಕರರಿಗೆ ನೀಡಲಾಗುತ್ತಿರುವ ಋತುಚಕ್ರ ರಜೆಯನ್ನು ಅನುದಾನಿತ ಮಹಿಳಾ ಸಿಬ್ಬಂದಿಗೂ ಕಲ್ಪಿಸುವುದು ಹಾಗೂ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರಿಗೆ ಬೋಧನಾ ಕಾರ್ಯದ ಜತೆಗೆ ದಾಖಲೆ ನಿರ್ವಹಣೆ ಮತ್ತು ಆನ್‌ಲೈನ್ ದಾಖಲೆಗಳ ಅಪ್‌ಲೋಡ್‌ನಿಂದ ಉಂಟಾಗುತ್ತಿರುವ ಹೆಚ್ಚುವರಿ ಹೊರೆ ಕಡಿಮೆ ಮಾಡುವ ಬಗ್ಗೆಯೂ ಚರ್ಚಿಸಲಾಯಿತು.

ಇದಲ್ಲದೆ, ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ಉಪನ್ಯಾಸಕರ ನೇಮಕಾತಿ ಮಾಡುವುದು, 1995ರ ನಂತರ ಸ್ಥಾಪನೆಯಾದ ಕನ್ನಡ ಮಾಧ್ಯಮ ಶಾಲೆಗಳಿಗೆ ಅನುದಾನ ಒದಗಿಸುವುದು, ಅನುದಾನಿತ ಶಾಲೆಗಳಿಗೂ ದ್ವಿಭಾಷಾ ನೀತಿ ವಿಸ್ತರಿಸುವುದು ಹಾಗೂ ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಪ್ರವೇಶಕ್ಕೆ ವಿಧಿಸಲಾಗುವ ದಂಡವನ್ನು ರದ್ದುಗೊಳಿಸುವಂತೆ ಸದಸ್ಯರು ಮನವಿ ಮಾಡಿದರು.ಸಭೆಯಲ್ಲಿ ಪ್ರಸ್ತಾಪವಾದ ಎಲ್ಲ ವಿಷಯಗಳಿಗೂ ಸಚಿವ ಮಧು ಬಂಗಾರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿ, ಸಂಬಂಧಪಟ್ಟ ಅಧಿಕಾರಿಗಳು ತ್ವರಿತವಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಶಿಕ್ಷಕರಿಗೆ ಆರೋಗ್ಯ ವಿಮೆ ಕಲ್ಪಿಸಲು ಮನವಿ:

ಅನುದಾನರಹಿತ ಶಾಲಾ-ಕಾಲೇಜುಗಳ ಶಿಕ್ಷಕರಿಗೂ ಸರ್ಕಾರದಿಂದ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಎ.ಪಿ. ರಂಗನಾಥ್ ಅವರು ಸಚಿವರಿಗೆ ಮನವಿ ಮಾಡಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಕುರಿತು ಲಿಖಿತ ಮನವಿ ಸಲ್ಲಿಸುವಂತೆ ತಿಳಿಸಿ, ಆರೋಗ್ಯ ಇಲಾಖೆಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಎಸ್.ಎಲ್. ಭೋಜೇಗೌಡ, ಶಶೀಲ್ ಜಿ. ನಮೋಶಿ, ಎ.ಪಿ. ರಂಗನಾಥ್, ಡಾ. ಧನಂಜಯ ಸರ್ಜಿ, ಹನಮಂತ ನಿರಾಣಿ, ಕೆ. ವಿವೇಕಾನಂದ, ಶಾಲಾ ಶಿಕ್ಷಣ ಇಲಾಖೆ ಆಯುಕ್ತ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಇಲಾಖೆಯ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಸಂವಿಧಾನದ ಮೌಲ್ಯಗಳು ಸಮಾನತೆ, ನ್ಯಾಯ ಮತ್ತು ಭ್ರಾತೃತ್ವದ ಸಮಾಜ ನಿರ್ಮಾಣಕ್ಕೆ ದಾರಿ ;ವಿಠಲ ಕಟಕಧೋಂಡ

ಭಾರತೀಯ ಸಂವಿಧಾನವು ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಭ್ರಾತೃತ್ವದ ಮೌಲ್ಯಗಳನ್ನು ಒಳಗೊಂಡಿದ್ದು,...

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು ಮೈತ್ರಿ ಧರ್ಮದ ಹೊಸ ಪಾಠ

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ,...

ಟ್ರಂಪ್ ಸೆಡ್ಡು ಹೊಡೆದ ಕಿಮ್: ಮತ್ತಷ್ಟು ಅಣ್ವಸ್ತ್ರ ನಿರ್ಮಾಣಕ್ಕೆ ಕರೆ

ಇತ್ತೀಚಿನ ಏಷ್ಯಾ ಪ್ರವಾಸದ ವೇಳೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದ...

ಅಮೆರಿಕದೊಂದಿಗೆ ಶೀಘ್ರ ವ್ಯಾಪಾರ ಒಪ್ಪಂದಕ್ಕೆ ಬದ್ಧ: ಹೆಚ್ಚುವರಿ ಉತ್ಪಾದನಾ ಸಾಮರ್ಥ್ಯದ ಆರೋಪ ತಳ್ಳಿಹಾಕಿದ ಭಾರತ

ಅಮೆರಿಕದೊಂದಿಗೆ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಶೀಘ್ರದಲ್ಲೇ ಅಂತಿಮಗೊಳಿಸಲು ಬದ್ಧವಾಗಿರುವುದಾಗಿ ಕೇಂದ್ರ ಸರ್ಕಾರ...