ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಜನಗಣತಿಗೆ ಬಿಡುವುದಿಲ್ಲ: ಸಚಿವ ಮಧು ಬಂಗಾರಪ್ಪ

Date:

ಪರೀಕ್ಷಾ ಸಮಯದಲ್ಲಿ ಪ್ರೌಢಶಾಲಾ ಶಿಕ್ಷಕರನ್ನು ಯಾವುದೇ ಕಾರಣಕ್ಕೂ ಜನಗಣತಿ ಇತ್ಯಾದಿ ಬಾಹ್ಯ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಈ ವಿಚಾರವಾಗಿ ಸಚಿವ ಸಂಪುಟದಲ್ಲಿ ಚರ್ಚೆ ನಡೆಸುತ್ತೇನೆ. ಒಂದು ವೇಳೆ ಅಂತಹ ಪರಿಸ್ಥಿತಿ ಎದುರಾದರೆ ಎಂತಹ ಹೋರಾಟಕ್ಕಾದರೂ ನಾನು ಸಿದ್ಧ. ನಿಮ್ಮೊಂದಿಗೆ ನಾನಿದ್ದೇನೆ, ನಾವೆಲ್ಲರೂ ಸೇರಿ ಹೋರಾಟ ಮಾಡೋಣ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಶಿಕ್ಷಕರಿಗೆ ಭರವಸೆ ನೀಡಿದರು.

- Advertisement -

ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2026-27ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸುಧಾರಣೆಗಾಗಿ ವಿಷಯವಾರು ಬೆಂಗಳೂರಿನ ಸ್ಟೆಲ್ಲಾ ಮೆರಿಸ್‌ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಬೆಂಗಳೂರು ಉತ್ತರ ವಲಯದ ಸಂಪನ್ಮೂಲ ಶಿಕ್ಷಕರ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಪರೀಕ್ಷಾ ಸಮಯ ಹತ್ತಿರವಾಗುತ್ತಿದ್ದು, ಪೂರ್ವಭಾವಿ ಪರೀಕ್ಷೆಗಳನ್ನು ನಡೆಸಿ ಅವರನ್ನು ಸಜ್ಜುಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಈ ಸಂದರ್ಭದಲ್ಲಿ ಶಿಕ್ಷಕರನ್ನು ಇತರ ಕಾರ್ಯಗಳಿಗೆ ನಿಯೋಜಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವೇ ನಮಗೆ ಮುಖ್ಯ. ಶಿಕ್ಷಕರು ಯಾವುದೇ ಒತ್ತಡವಿಲ್ಲದೆ ಬೋಧನಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಈಗಾಗಲೇ ಧಾರವಾಡದ ಐಐಟಿಯಲ್ಲಿ ಮಿಷನ್ 60+ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಮಿಷನ್ 70+ ಗುರಿಯೊಂದಿಗೆ ಕಾರ್ಯನಿರ್ವಹಿಸಬೇಕು. ನಮ್ಮ ಶಿಕ್ಷಕರ ಸಾಮರ್ಥ್ಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದ್ದು, ಈ ಗುರಿಯನ್ನು ಸಾಧಿಸುವ ಶಕ್ತಿ ಅವರಿಗಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100ರಷ್ಟು ಫಲಿತಾಂಶ ಸಾಧಿಸುವ ನಿಟ್ಟಿನಲ್ಲಿ ಎಲ್ಲರೂ ಶ್ರಮಿಸಬೇಕು ಎಂದರು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ದ್ವಿಭಾಷಾ ನೀತಿ ಅತ್ಯಂತ ಮಹತ್ವದ್ದಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರಲಾಗುವುದು. ಮಕ್ಕಳು ಕನ್ನಡದ ಜೊತೆಗೆ ಇಂಗ್ಲಿಷ್ ಭಾಷೆಯಲ್ಲಿಯೂ ಉತ್ತಮ ಜ್ಞಾನ ಹೊಂದಬೇಕು. ಕನ್ನಡ ಭಾಷೆಯ ಮೇಲಿನ ಹಿಡಿತದ ಜೊತೆಗೆ ಇಂಗ್ಲಿಷ್ ಕಲಿಕೆಯೂ ಅವರಿಗೆ ಭವಿಷ್ಯದಲ್ಲಿ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಲಿದೆ ಎಂದು ತಿಳಿಸಿದರು.

ಈ ಬಾರಿಯೂ ಉತ್ತಮ ಫಲಿತಾಂಶ ಸಾಧಿಸುವ ಮೂಲಕ ಶೇ.100ರಷ್ಟು ಫಲಿತಾಂಶದ ಗುರಿ ತಲುಪಬೇಕು. ಈ ಕಾರ್ಯಾಗಾರವು ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿಸುವುದರ ಜೊತೆಗೆ ಮಕ್ಕಳ ಕಲಿಕೆಗೆ ಪೂರಕವಾಗಲಿ ಎಂದು ಆಶಿಸಿದರು. ಶಿಕ್ಷಕರನ್ನು ಯಾವುದೇ ಸಂದರ್ಭದಲ್ಲಿಯೂ ಕೈಬಿಡುವ ಪ್ರಶ್ನೆಯೇ ಇಲ್ಲ. ಎಸ್‌ಐಆರ್ ವಿಚಾರವನ್ನು ನನಗೆ ಬಿಡಿ. ನೀವು ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವತ್ತ ಗಮನಹರಿಸಿ. ಶಿಕ್ಷಣವೆಂಬುದು ಹಣ ಕೊಟ್ಟು ಖರೀದಿಸುವ ವಸ್ತುವಲ್ಲ; ಅದನ್ನು ನಿಜವಾದ ಅರ್ಥದಲ್ಲಿ ಶಿಕ್ಷಕರಿಂದಲೇ ಪಡೆಯಲು ಸಾಧ್ಯ. ಶಿಕ್ಷಕರ ಬಗ್ಗೆ ನನಗೆ ಅಪಾರ ಗೌರವವಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಷ್ಮಿ ಮಹೇಶ್, ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಅನಿತಾ ಡಿಸೋಜಾ, ಸಚಿವರ ಆಪ್ತ ಕಾರ್ಯದರ್ಶಿ ಕಿಶೋರ್ ಕುಮಾರ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಹಾಗೂ ಸಂಪನ್ಮೂಲ ಶಿಕ್ಷಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ತುಳು ಅಧಿಕೃತ ಭಾಷೆ : ಸರ್ಕಾರದ ಆದೇಶವನ್ನು ಸ್ವಾಗತಿಸಿದ ತುಳು ಅಕಾಡೆಮಿ

ರಾಜ್ಯದ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳು ಭಾಷೆಯನ್ನು ಜಾರಿಗೊಳಿಸಿದ ಸಚಿವ ಸಂಪುಟ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ...

ಬಾಗಲಕೋಟೆ |ಯುವಜನತೆ ಸಂವಿಧಾನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ;ಡಾ ಜಿ ಜಿ ಹಿರೇಮಠ

ಪ್ರಜಾಪ್ರಭುತ್ವದ ಭದ್ರ ಬುನಾದಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೆ ಹಕ್ಕು ಹಾಗೂ...

ಮಹಿಳಾ ಮೀಸಲಾತಿ ವಿವಾದ: ಅಮಿತ್ ಶಾ ಅವರಿಗೆ ‘ನೆನಪಿನ ಶಕ್ತಿ ಕುಂದಿದೆ’ ಎಂದ ಪಿ ಚಿದಂಬರಂ

ಮಹಿಳಾ ಮೀಸಲಾತಿ ಜಾರಿ ವಿಚಾರವಾಗಿ ಕಾಂಗ್ರೆಸ್ ನಿಲುವನ್ನು ಕೇಂದ್ರ ಗೃಹ ಸಚಿವ...