ಬಸವಣ್ಣನವರ ಕನಸಿನ ಸಮಸಮಾಜ ಇನ್ನೂ ನಿರ್ಮಾಣವಾಗಿಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬಸವಣ್ಣನವರು 12ನೇ ಶತಮಾನದಲ್ಲಿಯೇ ಜಾತಿರಹಿತ, ವರ್ಗರಹಿತ ಮತ್ತು ಲಿಂಗಭೇದವಿಲ್ಲದ ಸಮಸಮಾಜ ನಿರ್ಮಾಣದ ಕನಸು ಕಂಡಿದ್ದರು. ಆದರೆ ಸುಮಾರು 900 ವರ್ಷಗಳ ನಂತರವೂ ಅವರ ಕನಸಿನ ಸಮಾಜ ನಿರ್ಮಾಣವಾಗಿಲ್ಲ. ಇಂದಿಗೂ ಜಾತಿ ವ್ಯವಸ್ಥೆ, ಅಸಮಾನತೆ, ಅಸ್ಪೃಶ್ಯತೆ ಮತ್ತು ಧಾರ್ಮಿಕ ಸಂಘರ್ಷಗಳು ಮುಂದುವರಿದಿವೆ. ಸಮಾಜದಲ್ಲಿನ ಈ ಅನಿಷ್ಟಗಳನ್ನು ತೊಡೆದುಹಾಕಿ ಮಾನವೀಯತೆಯಿಂದ ಕೂಡಿದ ಸಮಸಮಾಜ ನಿರ್ಮಾಣ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಸಭಾ ಹಾಗೂ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ಮೈಸೂರು ಜಿಲ್ಲೆಯ ಕೆ.ಆರ್. ನಗರದಲ್ಲಿ ಅಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, 2013ರ ಮೇ 13ರಂದು ಬಸವ ಜಯಂತಿಯ ದಿನವೇ ತಾವು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದನ್ನು ಸ್ಮರಿಸಿದರು. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಆಯ್ಕೆಯಾದ ನಂತರ ಬಸವ ಜಯಂತಿಯಂದೇ ಅಧಿಕಾರ ಸ್ವೀಕರಿಸುವ ಅವಕಾಶ ದೊರೆಯಿತು. ಅದು ಕಾಕತಾಳೀಯವಾಗಿದ್ದರೂ ತಮಗೆ ಸಂತೋಷ ತಂದ ಸಂಗತಿಯಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

12ನೇ ಶತಮಾನದಲ್ಲಿ ಬಸವಣ್ಣನವರು ಸಮಾಜದಲ್ಲಿದ್ದ ಅಸಮಾನತೆ, ಜಾತಿ ತಾರತಮ್ಯ, ಅಸ್ಪೃಶ್ಯತೆ ಮತ್ತು ಅನೇಕ ಅನಿಷ್ಟಗಳ ವಿರುದ್ಧ ಸಾಮಾಜಿಕ ಕ್ರಾಂತಿ ನಡೆಸಿದರು. ಸಮಾಜದಲ್ಲಿನ ಅನಿಷ್ಟಗಳನ್ನು ತೊಡೆದುಹಾಕಲು ಇತಿಹಾಸದುದ್ದಕ್ಕೂ ಅನೇಕ ಸಮಾಜ ಸುಧಾರಕರು, ದಾರ್ಶನಿಕರು ಮತ್ತು ಸಂತರು ಪ್ರಯತ್ನಿಸಿದ್ದಾರೆ. ಜೈನ ಮತ್ತು ಬೌದ್ಧ ಧರ್ಮಗಳ ಉದಯವೂ ಸಾಮಾಜಿಕ ಪರಿವರ್ತನೆಯ ಚಿಂತನೆಗಳೊಂದಿಗೆ ಸಂಬಂಧ ಹೊಂದಿದೆ. ಇದೇ ರೀತಿಯಲ್ಲಿ ಬಸವಣ್ಣನವರು ಹಾಗೂ ಬಸವಾದಿ ಶರಣರು ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದರು. ಬಸವಣ್ಣನವರು ಯಾವುದೇ ಒಂದು ಜಾತಿ ಅಥವಾ ಗುಂಪಿಗೆ ಸೀಮಿತವಾದವರಲ್ಲ. ಅವರು ಎಲ್ಲ ಮನುಷ್ಯರೂ ಸಮಾನರು ಎಂಬ ತತ್ವವನ್ನು ಪ್ರತಿಪಾದಿಸಿದವರು. ಜಾತಿ, ವರ್ಗ ಮತ್ತು ಲಿಂಗಭೇದವಿಲ್ಲದ ಮಾನವೀಯ ಸಮಾಜ ನಿರ್ಮಾಣವಾಗಬೇಕು ಎಂಬುದು ಅವರ ಆಶಯವಾಗಿತ್ತು. ಆದರೆ ಶತಮಾನಗಳು ಕಳೆದರೂ ಸಮಾಜದಲ್ಲಿ ಜಾತಿ ವ್ಯವಸ್ಥೆ ಮತ್ತು ತಾರತಮ್ಯಗಳು ಮುಂದುವರಿದಿರುವುದು ವಿಷಾದನೀಯ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ದೊರೆಯಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನ ಜಾರಿಗೆ ಬಂದು ಹಲವು ದಶಕಗಳಾಗಿವೆ. ಬಸವಣ್ಣನವರು ಪ್ರತಿಪಾದಿಸಿದ್ದ ಸಮಾನತೆ ಮತ್ತು ಮಾನವೀಯತೆಯ ಆಶಯಗಳು ಸಂವಿಧಾನದಲ್ಲಿಯೂ ಪ್ರತಿಫಲಿಸಿವೆ. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಸಂವಿಧಾನದ ಪ್ರಮುಖ ಮೌಲ್ಯಗಳಾಗಿವೆ. ಸುಮಾರು 2,500 ವರ್ಷಗಳ ಹಿಂದೆ ಬುದ್ಧರು, 900 ವರ್ಷಗಳ ಹಿಂದೆ ಬಸವಣ್ಣನವರು ಪ್ರತಿಪಾದಿಸಿದ್ದ ವಿಚಾರಗಳನ್ನು ಅಂಬೇಡ್ಕರ್ ಅವರ ಸಂವಿಧಾನದಲ್ಲಿಯೂ ಕಾಣಬಹುದು. ಪ್ರತಿಯೊಬ್ಬ ಭಾರತೀಯನೂ ಸಂವಿಧಾನವನ್ನು ತಿಳಿದುಕೊಳ್ಳಬೇಕು ಮತ್ತು ಅದರ ಆಶಯಗಳನ್ನು ಅರ್ಥಮಾಡಿಕೊಳ್ಳಬೇಕು. ಇಂದಿಗೂ ಅನೇಕ ಜನರಿಗೆ ಸಂವಿಧಾನದ ಕುರಿತು ಸಮರ್ಪಕ ಅರಿವಿಲ್ಲ. ಈ ಕಾರಣದಿಂದಲೇ ತಾವು ಮುಖ್ಯಮಂತ್ರಿಯಾಗಿದ್ದಾಗ ಪ್ರತಿಯೊಂದು ಶಾಲೆ ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸುವ ಕೆಲಸ ಮಾಡಿದ್ದಾಗಿ ಅವರು ತಿಳಿಸಿದರು.

ಸಂವಿಧಾನದ ಆಶಯಗಳ ಅನುಷ್ಠಾನವಿಲ್ಲದೆ ಪ್ರಜಾಪ್ರಭುತ್ವ ಯಶಸ್ವಿಯಾಗಲು ಸಾಧ್ಯವಿಲ್ಲ. ಬಸವಣ್ಣನವರು ಮತ್ತು ಅಂಬೇಡ್ಕರ್ ಅವರು ಬಯಸಿದ್ದ ಸಮಾನತೆಯ ಸಮಾಜ ನಿರ್ಮಾಣವಾಗಬೇಕಾದರೆ ಸಂವಿಧಾನದ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಕೇವಲ ಮಾತುಗಳಿಗೆ ಸೀಮಿತವಾಗದೆ ಸಮಾಜದಲ್ಲಿ ಅನುಷ್ಠಾನಗೊಳ್ಳಬೇಕು. ಬಸವಣ್ಣನವರ ಕಾಯಕ ಮತ್ತು ದಾಸೋಹ ತತ್ವಗಳನ್ನು ವಿವರಿಸಿದ ಅವರು, “ಕಾಯಕವೇ ಕೈಲಾಸ” ಎಂಬುದು ಕೇವಲ ಘೋಷಣೆಯಲ್ಲ. ಪ್ರತಿಯೊಬ್ಬರೂ ಶ್ರಮಿಸಿ ಉತ್ಪಾದನೆಯಲ್ಲಿ ಪಾಲ್ಗೊಳ್ಳಬೇಕು ಎಂಬುದು ಕಾಯಕದ ತತ್ವವಾಗಿದೆ. ಉತ್ಪಾದನೆಯಿಂದ ದೊರೆತ ಫಲವನ್ನು ಎಲ್ಲರೂ ಹಂಚಿಕೊಂಡು ಅನುಭವಿಸುವುದು ದಾಸೋಹದ ತತ್ವವಾಗಿದೆ. ಕಾಯಕ ಮತ್ತು ದಾಸೋಹದ ಮೂಲಕ ಸಾಮಾಜಿಕ ಹಾಗೂ ಆರ್ಥಿಕ ಸಮಾನತೆಯನ್ನು ಸಾಧಿಸುವ ಚಿಂತನೆ ಅವರದ್ದಾಗಿತ್ತು ಎಂದು ವಿವರಿಸಿದರು.

ಇದನ್ನೂ ಓದಿ: ಮಾನವೀಯತೆಯೇ ಎಲ್ಲ ಧರ್ಮಗಳ ಸಾರ: ಸಿದ್ದರಾಮಯ್ಯ

ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪವು ಸಮಾನತೆ ಮತ್ತು ಪ್ರಜಾಸತ್ತಾತ್ಮಕ ಚಿಂತನೆಗಳಿಗೆ ಪ್ರಮುಖ ವೇದಿಕೆಯಾಗಿತ್ತು. ಇಂದಿನ ಸಂಸತ್ತು ಮತ್ತು ವಿಧಾನಸಭೆಯಂತಹ ಪ್ರಜಾಸತ್ತಾತ್ಮಕ ಸಂಸ್ಥೆಗಳಿಗೆ ಹೋಲಿಸಬಹುದಾದ ಅನುಭವ ಮಂಟಪದಲ್ಲಿ ಎಲ್ಲ ಜಾತಿ ಮತ್ತು ವರ್ಗದವರಿಗೂ ಭಾಗವಹಿಸಲು ಅವಕಾಶವಿತ್ತು. ಮಹಿಳೆಯರೂ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ವ್ಯಕ್ತಪಡಿಸುತ್ತಿದ್ದರು. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುವ ವ್ಯವಸ್ಥೆಯನ್ನು ಬಸವಣ್ಣನವರು ರೂಪಿಸಿದ್ದರು. ಅನುಭವ ಮಂಟಪದ ಅಧ್ಯಕ್ಷರಾಗಿ ಅಲ್ಲಮಪ್ರಭುಗಳು ಕಾರ್ಯನಿರ್ವಹಿಸಿದ್ದರು. ಬಸವಣ್ಣನವರು ಅದರ ಅಧ್ಯಕ್ಷರಾಗಿರಲಿಲ್ಲ. ಅತ್ಯಂತ ಹಿಂದುಳಿದ ಸಮುದಾಯಕ್ಕೆ ಸೇರಿದ ಅಲ್ಲಮಪ್ರಭುಗಳಿಗೆ ಅಧ್ಯಕ್ಷತೆಯ ಜವಾಬ್ದಾರಿ ನೀಡಲಾಗಿತ್ತು. ಸಮಾಜದ ಎಲ್ಲ ವರ್ಗಗಳಿಗೂ ಸಮಾನ ಸ್ಥಾನಮಾನ ದೊರೆಯಬೇಕು ಎಂಬ ಆಶಯಕ್ಕೆ ಇದು ಉದಾಹರಣೆಯಾಗಿದೆ ಎಂದು ತಿಳಿಸಿದರು.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅನುಭವ ಮಂಟಪದ ಪುನರ್ನಿರ್ಮಾಣಕ್ಕಾಗಿ ಗೋ.ರು. ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿದ್ದಾಗಿ ತಿಳಿಸಿದ ಅವರು, ಸಮಿತಿಯ ವರದಿ ಬಂದ ನಂತರ ಅನುಭವ ಮಂಟಪದ ನಿರ್ಮಾಣಕ್ಕಾಗಿ 280 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದೆ. ಐದು ವರ್ಷಗಳ ಅಧಿಕಾರಾವಧಿಯಲ್ಲಿ ಈ ಕೆಲಸವನ್ನು ಪ್ರಾರಂಭಿಸಲಾಗಿತ್ತು. ಅನುಭವ ಮಂಟಪದ ನಿರ್ಮಾಣ ಕಾರ್ಯ ಪೂರ್ಣಗೊಳ್ಳಬೇಕು ಎಂಬುದು ತಮ್ಮ ಸಂಕಲ್ಪವಾಗಿದೆ. ಬಸವಣ್ಣನವರ ಕನಸಿನ ಸಮಸಮಾಜ ನಿರ್ಮಾಣಕ್ಕೆ ಸಂವಿಧಾನದ ಆಶಯಗಳನ್ನು ಅನುಷ್ಠಾನಗೊಳಿಸುವುದು ಅಗತ್ಯವಾಗಿದೆ. ಸಮಾಜದಲ್ಲಿನ ಜಾತೀಯತೆ, ದ್ವೇಷ, ಅಸಮಾನತೆ ಮತ್ತು ತಾರತಮ್ಯಗಳನ್ನು ಹೋಗಲಾಡಿಸಿ ಪರಸ್ಪರ ಪ್ರೀತಿ, ಸಹಬಾಳ್ವೆ ಹಾಗೂ ಮಾನವೀಯತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಸ್ರೇಲ್ ಚುನಾವಣೆ- ಅರಬ್ ಪಕ್ಷಗಳೇ ಈಗ ಕಿಂಗ್ ಮೇಕರ್

ಇಸ್ರೇಲ್‌ನಲ್ಲಿ ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಗಳು ದೇಶವನ್ನು ಅತಂತ್ರ ಸ್ಥಿತಿಗೆ ನೂಕಿವೆ....

ವಿಜಯಪುರ | ವಾಣಿಜ್ಯ ಮಳಿಗೆಗಳಲ್ಲಿ ಕನ್ನಡ ನಾಮಫಲಕ ಬಳಸುವಂತೆ ಜಾಗೃತಿ ಅಭಿಯಾನ

ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಅಂಗಡಿ-ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಹಾಗೂ ವಿವಿಧ...

ದಾವಣಗೆರೆ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಪಿಐ ಪ್ರತಿಭಟನೆ

ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸುವ ಮೂಲಕ ಸಿಪಿಐ, ಮುಖ್ಯ ಚುನಾವಣಾ...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ ಅಡ್ಡಿಯಾಗುತ್ತದೆ?

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ....