ಅಂಚೆ ಮತಪತ್ರಗಳ ಅನಧಿಕೃತ ವಿಂಗಡಣೆ ಆರೋಪ: ಚುನಾವಣಾ ಆಯೋಗಕ್ಕೆ ಟಿಎಂಸಿ ದೂರು

Date:

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ (ಮೇ 4) ಇನ್ನು ಕೆಲವೇ ದಿನಗಳು ಬಾಕಿ ಇರುವಾಗ, ಅಂಚೆ ಮತಪತ್ರಗಳನ್ನು (ಪೋಸ್ಟಲ್ ಬ್ಯಾಲೆಟ್) ಅನಧಿಕೃತವಾಗಿ ವಿಂಗಡಣೆ ಮಾಡಲಾಗುತ್ತಿದೆ ಎಂದು ಆಡಳಿತಾರೂಢ ಟಿಎಂಸಿ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ (ಇಸಿಐ) ಪಕ್ಷವು ಅಧಿಕೃತ ದೂರು ನೀಡಿದ್ದು, ಭದ್ರತಾ ಕೊಠಡಿಯಲ್ಲಿ (ಸ್ಟ್ರಾಂಗ್ ರೂಂ) ಅಕ್ರಮ ನಡೆಯುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದೆ.

- Advertisement -

ಕೊಲ್ಕತ್ತಾದ ಖುದಿರಾಮ್ ಅನುಶೀಲನ್ ಕೇಂದ್ರದ ಭದ್ರತಾ ಕೊಠಡಿಯ ಹೊರಗೆ ಮೊಕ್ಕಾಂ ಹೂಡಿರುವ ಟಿಎಂಸಿ ಕಾರ್ಯಕರ್ತರು ಈ ಆರೋಪ ಮಾಡಿದ್ದಾರೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಎಂಟು ಟ್ರಂಕ್‌ಗಳಲ್ಲಿ ಅಂಚೆ ಮತಪತ್ರಗಳನ್ನು ತಂದು, ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಇಲ್ಲದ ಕೊಠಡಿಯೊಳಗೆ ಕೊಂಡೊಯ್ಯಲಾಗಿದೆ ಎಂದು ಅವರು ದೂರಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾಧಿಕಾರಿಯ (ರಿಟರ್ನಿಂಗ್ ಆಫೀಸರ್) ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಟಿಎಂಸಿ ಒತ್ತಾಯಿಸಿದೆ. ಅಲ್ಲದೆ, ತಾನು ಭದ್ರತಾ ಕೊಠಡಿ ಪ್ರವೇಶಿಸದಂತೆ ಭದ್ರತಾ ಸಿಬ್ಬಂದಿ ತಡೆಯೊಡ್ಡಿದ್ದರು ಎಂದು ಟಿಎಂಸಿ ನಾಯಕಿ ಶಶಿ ಪಂಜಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಇದನ್ನು ಓದಿದ್ದೀರಾ? ತಮಿಳುನಾಡಿನ ಮೊದಲ ಲಿಂಗತ್ವ ಅಲ್ಪಸಂಖ್ಯಾತ ಕ್ರಿಕೆಟ್ ಅಂಪೈರ್ ರಿತಿಕಾ ಶ್ರೀ – ಸವಾಲು ಮೆಟ್ಟಿ ನಿಂತ ಸಾಧಕಿ

ಮತ್ತೊಂದೆಡೆ, ಶನಿವಾರ ಮಧ್ಯಾಹ್ನ 1 ಗಂಟೆಯ ವೇಳೆಗೆ ರಾಜ್ಯದಲ್ಲಿ ಶೇಕಡಾ 55.57ರಷ್ಟು ಮತದಾನ ದಾಖಲಾಗಿದೆ. ಚುನಾವಣಾ ಅಕ್ರಮಗಳ ಬಗ್ಗೆ ವರದಿಯಾದ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ಆದೇಶದಂತೆ ದಕ್ಷಿಣ 24 ಪರಗಣ ಜಿಲ್ಲೆಯ 15 ಮತಗಟ್ಟೆಗಳಲ್ಲಿ ಶನಿವಾರ ಮರುಮತದಾನ ನಡೆಯಿತು. ಏಪ್ರಿಲ್ 29ರಂದು ನಡೆದಿದ್ದ ಎರಡನೇ ಹಂತದ ಚುನಾವಣೆಯಲ್ಲಿ ಮಗ್ರಹತ್ ಪಶ್ಚಿಮ್‌ನ 11 ಹಾಗೂ ಡೈಮಂಡ್ ಹಾರ್ಬರ್‌ನ 4 ಮತಗಟ್ಟೆಗಳಲ್ಲಿ ಇವಿಎಂ ತಿರುಚುವಿಕೆ ಹಾಗೂ ಅಕ್ರಮಗಳು ನಡೆದಿವೆ ಎಂಬ ಆರೋಪಗಳು ಕೇಳಿಬಂದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.

ಡೈಮಂಡ್ ಹಾರ್ಬರ್‌ನ ಮತಗಟ್ಟೆಯೊಂದರಲ್ಲಿ ಇವಿಎಂ ದೋಷದಿಂದಾಗಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮತದಾನ ಸ್ಥಗಿತಗೊಂಡು ಮತದಾರರು ಪರದಾಡುವಂತಾಯಿತು. ಬಿಗಿ ಭದ್ರತೆಗಾಗಿ ಸಿಆರ್‌ಪಿಎಫ್ ಮತ್ತು ತ್ವರಿತ ಕಾರ್ಯಪಡೆ (RAF) ಯೋಧರನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದೆ. ಇದರ ನಡುವೆಯೂ, ಫಾಲ್ಟಾ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯರು ಸೇರಿದಂತೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಲಸೆ ತಡೆಗೆ ‘ರುದ್ರಾಕ್ಷಿ ಕೃಷಿ’ ಯೋಜನೆಗೆ ಮುಂದಾದ ಉತ್ತರಾಖಂಡ ಸರ್ಕಾರ; 1.5 ಲಕ್ಷ ಉದ್ಯೋಗ ಸೃಷ್ಟಿ ಸಾಧ್ಯವೇ?

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಿಂದ ಜನರು ನೌಕರಿ ಮತ್ತು ಜೀವನೋಪಾಯ ಅರಸಿ ನಗರಗಳಿಗೆ...

ಅಭಿವೃದ್ಧಿ ದೇಶಗಳಿಂದ ಇಂಗಾಲ ಹೆಚ್ಚು ಎಂದ ಮೋದಿ; ದೇಶದ ಮಾಲಿನ್ಯ, ಅರಣ್ಯ ನಾಶದ ಬಗ್ಗೆ ನೆಟ್ಟಿಗರ ಪ್ರಶ್ನೆ

ಇಂಗಾಲದ ಹೊರಸೂಸುವಿಕೆಗೆ (Carbon emissions) ಸಂಬಂಧಿಸಿದಂತೆ ಅಭಿವೃದ್ಧಿಶೀಲ ರಾಷ್ಟ್ರಗಳನ್ನು ಆಗಾಗ್ಗೆ ಅನ್ಯಾಯವಾಗಿ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...