ಇಂದು ಒಳಮೀಸಲಾತಿ ಭವಿಷ್ಯ; ಮೂರು ದಶಕಗಳ ‘ಒಳ’ ಬೇಗುದಿಗೆ ಇಂದು ಮುಕ್ತಿ?

Date:

ಕರ್ನಾಟಕದಲ್ಲಿ ದಶಕಗಳಿಂದ ʼಕಾಯುʼತ್ತಿರುವ ‘ಪರಿಶಿಷ್ಟ ಜಾತಿ ಒಳಮೀಸಲಾತಿ’ ಕುರಿತ ಐತಿಹಾಸಿಕ ನಿರ್ಧಾರಕ್ಕೆ ಸಿದ್ದರಾಮಯ್ಯ ಸರ್ಕಾರ ಇಂದು (ಏಪ್ರಿಲ್ 24) ಸಮಯ ನಿಗದಿ ಮಾಡಿದೆ. ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯ ಕಡೆಗೆ ಇಡೀ ರಾಜ್ಯದ ಅವಕಾಶವಂಚಿತ ಸಮುದಾಯಗಳ ದೃಷ್ಟಿ ನೆಟ್ಟಿದೆ.

- Advertisement -

ಯಾರಿಗೆ ಎಷ್ಟು ಪಾಲು?:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದ ತಾಂತ್ರಿಕ ಸಮಿತಿಯಲ್ಲಿ, ಲಭ್ಯವಿರುವ ಶೇ.15ರ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ ‘ಎ’ (ಎಡಗೈ)ಗೆ ಶೇ.5.3, ಪರಿಶಿಷ್ಟ ಜಾತಿ ‘ಬಿ’ (ಬಲಗೈ)ಗೆ ಶೇ.5.3 ಹಾಗೂ ಪರಿಶಿಷ್ಟ ಜಾತಿ ‘ಸಿ’ (ಸ್ಪೃಶ್ಯ, ಅಲೆಮಾರಿ ಹಾಗೂ ಇತರರು)ಗೆ  ಶೇ.4.4 ಮೀಸಲಾತಿ ನಿಗದಿ ಮಾಡಲು ಸಲಹೆ ನೀಡಲಾಗಿದೆ ಎನ್ನಲಾಗಿದೆ.

ಈ ಮೂಲಕ ಎಲ್ಲ ಉಪಜಾತಿಗಳಿಗೂ ಅವರ ಜನಸಂಖ್ಯೆ ಮತ್ತು ಶೈಕ್ಷಣಿಕ ಸ್ಥಿತಿಗತಿಗೆ ಅನುಗುಣವಾಗಿ ನ್ಯಾಯ ಒದಗಿಸುವ ಕಸರತ್ತು ನಡೆದಿದೆ.

ಕೇವಲ ಸಮಿತಿ ವರದಿ ಜಾರಿಯಷ್ಟೇ ಅಲ್ಲ, ಸಂಪುಟದ ಒಳಗಿರುವ ಸಚಿವರ ಅಭಿಪ್ರಾಯಗಳನ್ನು ತೂಗಿಸಿ ನೋಡುವುದು ಸಿಎಂ ಸಿದ್ದರಾಮಯ್ಯನವರಿಗೆ ಸದ್ಯ ಅಗ್ನಿಪರೀಕ್ಷೆಯಾಗಿದೆ. ಎಡಗೈ ಸಮುದಾಯದ ಸಚಿವರು ‘ತಕ್ಷಣ ಜಾರಿ’ಗೆ ಪಟ್ಟು ಹಿಡಿದಿದ್ದರೆ, ಇತರೆ ಗುಂಪುಗಳ ಸಚಿವರ ಆತಂಕಗಳನ್ನು ನಿವಾರಿಸುವ ಜವಾಬ್ದಾರಿ ಸಿಎಂ ಮೇಲಿದೆ. ಸಂಪುಟ ಸಭೆಗೂ ಮುನ್ನ ಪರಿಶಿಷ್ಟ ಜಾತಿಯ ಸಚಿವರೊಂದಿಗೆ ಸಿದ್ದರಾಮಯ್ಯ ನಡೆಸಲಿರುವ ಪ್ರತ್ಯೇಕ ಸಭೆ, ಅಂತಿಮ ತೀರ್ಮಾನಕ್ಕೆ ಬೇಕಾದ ಸಿದ್ಧತೆ ಮಾಡಿಕೊಳ್ಳಲಿದೆ.

ಇದನ್ನೂ ಓದಿ: ಸೇನಾ ಮುಖ್ಯಸ್ಥನನ್ನು ಮನೆಗೆ ಕಳಿಸಿದ ಬೆನ್ನಲ್ಲೇ ಅಮೆರಿಕದ ನೌಕಾದಳ ಕಾರ್ಯದರ್ಶಿ ರಾಜೀನಾಮೆ

ಮಾರ್ಚ್ 27 ರಂದು ನಡೆಯಬೇಕಿದ್ದ ಸಭೆ ಉಪ ಚುನಾವಣೆಗಳ ಕಾರಣಕ್ಕೆ ಮುಂದೂಡಲ್ಪಟ್ಟಿತ್ತು. ಈಗ ಯಾವುದೇ ಅಡೆತಡೆಗಳಿಲ್ಲದ ಕಾರಣ, ಸರ್ಕಾರ ಈ ವಿಚಾರದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲೇಬೇಕಾದ ಒತ್ತಡದಲ್ಲಿದೆ. ಒಳಮೀಸಲಾತಿ ಜಾರಿಯಾದರೆ ಅದು ಸಿದ್ದರಾಮಯ್ಯ ಸರ್ಕಾರದ ಪಾಲಿಗೆ ‘ಅಹಿಂದ’ ಅಸ್ತ್ರವನ್ನು ಮತ್ತಷ್ಟು ಗಟ್ಟಿಗೊಳಿಸುವ ಮಾಸ್ಟರ್‌ಸ್ಟ್ರೋಕ್ ಆಗಲಿದೆ.

ರಾಜ್ಯದ 30 ವರ್ಷಗಳ ಹೋರಾಟ, ಕೆ ಜೆ ಸದಾಶಿವ ಆಯೋಗದ ವರದಿಯಿಂದ ಹಿಡಿದು ಇಂದಿನ ತಾಂತ್ರಿಕ ಸಮಿತಿಯವರೆಗೆ ಸಾಗಿ ಬಂದ ಹಾದಿ ಇಂದು ಸುಖಾಂತ್ಯ ಕಾಣುತ್ತದೆಯೇ ಅಥವಾ ಮತ್ತೆ ಕಾನೂನು ಸಂಘರ್ಷಕ್ಕೆ ನಾಂದಿ ಹಾಡುತ್ತದೆಯೇ ಎಂಬುದು ಕೆಲವೇ ಗಂಟೆಗಳಲ್ಲಿ ನಿರ್ಧಾರವಾಗಲಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...

ಬೀದರ್‌ | 125 ಎಕರೆಯಲ್ಲಿ ಜಿಲ್ಲಾ ಕ್ರೀಡಾಂಗಣ ನಿರ್ಮಾಣಕ್ಕೆ ಯೋಜನೆ : ಸಚಿವ ಈಶ್ವರ ಖಂಡ್ರೆ

ಬೀದರ್ ನಗರದ ಸಮೀಪ 125 ಎಕರೆ ಪ್ರದೇಶದಲ್ಲಿ ಸುಸಜ್ಜಿತ ಜಿಲ್ಲಾ ಕ್ರೀಡಾಂಗಣ...