ತುಮಕೂರು | ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕ್ರಮ ವಹಿಸಿಸುವಂತೆ ಸಿಇಒ ಸೂಚನೆ

Date:

ಬೇಸಿಗೆ ಪ್ರಾರಂಭವಾಗಿದ್ದು, ತುಮಕೂರು ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜಾ ಬಿ ವಿ ಎಚ್ಚರಿಸಿದರು.

- Advertisement -

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, “ಬೇಸಿಗೆ ವೇಳೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ದೂರುಗಳು ಬರಲು ಪ್ರಾರಂಭವಾಗಿವೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಬಗ್ಗೆ ಮಾಹಿತಿ ಪಡೆದು ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

“ಗ್ರಾಮ ಪಂಚಾಯಿತಿ ಒಡೆತನದಲ್ಲಿರುವ ಸರ್ಕಾರಿ ಕೊಳವೆ ಬಾವಿಗಳಲ್ಲಿ ನೀರಿನ ಸಮಸ್ಯೆಯಾದಲ್ಲಿ ಖಾಸಗಿ ಕೊಳವೆ ಬಾವಿಗಳ ಮೂಲಕ ನೀರು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸದೇ ನಿಷ್ಕ್ರಿಯಗೊಂಡಿದ್ದರೆ ಅವುಗಳ ರಿಪೇರಿ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಯಾವುದೇ ಗ್ರಾಮದಲ್ಲಿಯೂ ನೀರು ಮಲಿನವಾಗದಂತೆ ಮುಂಜಾಗ್ರತೆ ವಹಿಸುವ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು” ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.

Advertisements

ಇದನ್ನೂ ಓದಿ > ತುಮಕೂರು | ಉಂಡೆ ಕೊಬ್ಬರಿಗೆ ದಾಖಲೆಯ ಬೆಲೆ: ಇಳುವರಿ ಕುಸಿತ

ತೆರಿಗೆ ಸಂಗ್ರಹದ ಬಗ್ಗೆ ಪರಿಶೀಲನೆ ಮಾಡಿದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಕಳೆದ ಸಾಲಿನಲ್ಲಿ ಶೇ.100ಕ್ಕಿಂತ ಹೆಚ್ಚು ತೆರಿಗೆ ಸಂಗ್ರಹ ಮಾಡಿದ ಗ್ರಾಮ ಪಂಚಾಯಿತಿಗಳಿಗೆ ಅಭಿನಂದನೆ ತಿಳಿಸಿದರು.

ತೆರಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡು ಕರ ವಸೂಲಿಗಾರರು, ವಾಟರ್ ಮೆನ್, ಕೃಷಿ ಸಖಿ, ಪಶು ಸಖಿ, ಸ್ವ ಸಹಾಯ ಸಂಘದ ಮಹಿಳೆಯರು ಗ್ರಾಮಗಳಲ್ಲಿ ತೆರಿಗೆ ಸಂಗ್ರಹ ಕುರಿತಂತೆ ಜನರಲ್ಲಿ ಅರಿವು ಮೂಡಿಸಬೇಕು. ಮುಂಬರುವ ಡಿಸೆಂಬರ್ ತಿಂಗಳೊಳಗಾಗಿ ತೆರಿಗೆ ಸಂಗ್ರಹದ ಗುರಿಯನ್ನು ತಲುಪಬೇಕು” ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಮುಂದುವರೆದು, ಇ-ಸ್ವತ್ತಿನ ಕುರಿತು ಮಾತನಾಡಿದ ಅವರು, “ಜನರ ಆಸ್ತಿಗಳಿಗೆ ಇ-ಸ್ವತ್ತು ಮಾಡಿಕೊಡಲು ವಿಳಂಬವಾಗದಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಸ್ವಚ್ಛ ಶನಿವಾರ ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಬೇಕು. ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಆಸ್ಪತ್ರೆ, ಶಾಲೆ, ಸಂತೆ ಬೀದಿ ಹಾಗೂ ವಿವಿಧ ಪ್ರದೇಶಗಳಲ್ಲಿ ಕಸ ಸಂಗ್ರಹ ಮಾಡಿ ಸ್ವಚ್ಛ ಗ್ರಾಮದ ಪರಿಕಲ್ಪನೆಗೆ ಬದ್ಧರಾಗಬೇಕು” ಎಂದರು.

ಸಭೆಯಲ್ಲಿ ಮನರೇಗಾ ಯೋಜನೆ, ಜಲ ಜೀವನ್ ಮಿಷನ್, ಸ್ವಚ್ಛಭಾರತ್ ಮಿಷನ್ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಲಾಯಿತು. ಸಭೆಯಲ್ಲಿ ಉಪಕಾರ್ಯದರ್ಶಿ(ಅಭಿವೃದ್ಧಿ), ಉಪಕಾರ್ಯದರ್ಶಿ(ಆಡಳಿತ), ಮುಖ್ಯ ಯೋಜನಾಧಿಕಾರಿಗಳು, ಮುಖ್ಯ ಲೆಕ್ಕಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...