ತಮಿಳುನಾಡು: ಬಹುಮತ ಸಾಬೀತಿಗೆ 2 ವಾರಗಳ ಕಾಲಾವಕಾಶ ಕೋರಿ ರಾಜ್ಯಪಾಲರಿಗೆ ವಿಜಯ್ ಪತ್ರ

Date:

ತಮಿಳುನಾಡಿನಲ್ಲಿ ನಡೆದಿರುವ 2026ರ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷವು ಅಭೂತಪೂರ್ವ ಸಾಧನೆ ಮಾಡಿದೆ. ಒಟ್ಟು 234 ಸ್ಥಾನಗಳ ಪೈಕಿ 108 ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ, ಸರ್ಕಾರ ರಚಿಸಲು ಅಗತ್ಯವಿರುವ 118 ಸ್ಥಾನಗಳ ‘ಮ್ಯಾಜಿಕ್ ನಂಬರ್’ ತಲುಪಲು ಇನ್ನು 10 ಸ್ಥಾನಗಳ ಕೊರತೆಯಿದ್ದು, ಬಹುಮತ ಸಾಬೀತುಪಡಿಸಲು ತಮಗೆ ಎರಡು ವಾರಗಳ ಕಾಲಾವಕಾಶ ನೀಡಬೇಕು ಎಂದು ಕೋರಿ ಟಿವಿಕೆ ನಾಯಕ ವಿಜಯ್ ಅವರು ತಮಿಳುನಾಡು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

- Advertisement -

ಈ ಚುನಾವಣೆಯಲ್ಲಿ ಆಡಳಿತಾರೂಢ ದ್ರಾವಿಡ ಮುನ್ನೇಟ್ರ ಕಳಗಂ (ಡಿಎಂಕೆ) ತೀವ್ರ ಮುಖಭಂಗ ಅನುಭವಿಸಿದೆ. ಎಂ.ಕೆ. ಸ್ಟಾಲಿನ್ ನೇತೃತ್ವದ ಡಿಎಂಕೆ ಕೇವಲ 59 ಸ್ಥಾನಗಳನ್ನು ಗೆದ್ದು ಎರಡನೇ ಸ್ಥಾನಕ್ಕೆ ಕುಸಿದಿದ್ದರೆ, ಎಐಎಡಿಎಂಕೆ 47 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ. ಅತ್ಯಂತ ಅಚ್ಚರಿಯ ಹಾಗೂ ಡಿಎಂಕೆಗೆ ಆಘಾತಕಾರಿ ಸಂಗತಿಯೆಂದರೆ, ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆ ಎನಿಸಿದ್ದ ಚೆನ್ನೈನ ಕೊಳತ್ತೂರು ಕ್ಷೇತ್ರದಲ್ಲಿ ಟಿವಿಕೆ ಅಭ್ಯರ್ಥಿ ಬಾಬು ಅವರ ವಿರುದ್ಧ 8,500ಕ್ಕೂ ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಗಲ್ಲಾಪೆಟ್ಟಿಗೆಯಿಂದ ಮತಪೆಟ್ಟಿಗೆ; ಜೋಸೆಫ್ ವಿಜಯ್ ಎಂಬ ಹೀರೋವಿನ ಸೂಪರ್ ಡ್ಯೂಪರ್ ಹಿಟ್ ರಾಜಕೀಯ ಪ್ರವೇಶ!

ಬಹುಮತ ಸಾಬೀತಿಗೆ ಇನ್ನು 10 ಶಾಸಕರ ಬೆಂಬಲದ ಅಗತ್ಯವಿರುವುದರಿಂದ, ಟಿವಿಕೆ ಪಕ್ಷವು ಇದೀಗ ಸಣ್ಣ ಪಕ್ಷಗಳತ್ತ ಮುಖಮಾಡಿದೆ. ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ 5, ಪಿಎಂಕೆ 4, ಎಡಪಕ್ಷಗಳು 4 ಹಾಗೂ ವಿಸಿಕೆ 2 ಸ್ಥಾನಗಳನ್ನು ಗೆದ್ದುಕೊಂಡಿವೆ. ವಿಜಯ್ ಅವರು ಈ ಪಕ್ಷಗಳೊಂದಿಗೆ ಮೈತ್ರಿಗೆ ಮುಂದಾಗುವ ಸಾಧ್ಯತೆಯಿದ್ದು, ಸರ್ಕಾರ ರಚನೆಯ ಕೀಲಿ ಕೈ ಈಗ ಈ ಸಣ್ಣ ಪಕ್ಷಗಳ ಕೈಯಲ್ಲಿದೆ. ಮೈತ್ರಿ ವಿಚಾರವಾಗಿ ಶೀಘ್ರದಲ್ಲೇ ನಿರ್ಧಾರ ಪ್ರಕಟಿಸುವುದಾಗಿ ಕಾಂಗ್ರೆಸ್ ನಾಯಕರು ಕೂಡ ಸುಳಿವು ನೀಡಿದ್ದಾರೆ.

ತಮಿಳುನಾಡು ರಾಜಕಾರಣದಲ್ಲಿ ನಟ ವಿಜಯ್ ಅವರ ರಾಜಕೀಯ ಪ್ರವೇಶ ಬಹುದೊಡ್ಡ ಸಂಚಲನ ಮೂಡಿಸಿದ್ದು, ದಶಕಗಳಿಂದ ಬೇರೂರಿದ್ದ ದ್ರಾವಿಡ ಪಕ್ಷಗಳ ಪ್ರಾಬಲ್ಯವನ್ನು ಬುಡಮೇಲು ಮಾಡಿದೆ. ರಾಜ್ಯಪಾಲರು ವಿಜಯ್ ಅವರ ಮನವಿಯನ್ನು ಪುರಸ್ಕರಿಸಿ ಸರ್ಕಾರ ರಚಿಸಲು ಆಹ್ವಾನ ನೀಡುತ್ತಾರೆಯೇ ಅಥವಾ ಸಣ್ಣ ಪಕ್ಷಗಳು ಟಿವಿಕೆಗೆ ಬೆಂಬಲ ಸೂಚಿಸುತ್ತವೆಯೇ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜನವರಿಯಲ್ಲಿ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ

ಬೀದರ್‌ ನಗರದಲ್ಲಿ 2027ರ ಜನವರಿ ತಿಂಗಳಲ್ಲಿ 15 ದಿನಗಳ ಕಾಲ ಅಗ್ನಿವೀರ...

ದೇವಿಯಿಂದ ಕತ್ತಿ ಪಡೆದ ರಾಜರ ಕಥೆಗಳು ಶಾಲಾ ಪಠ್ಯದಲ್ಲಿ; NCERTಯಿಂದ ಮತ್ತೊಂದು ವಿವಾದ?

"ಭಾರತದಲ್ಲಿ ದೇವಿಯರ ಆರಾಧನೆಗೂ, ಯುದ್ಧಕ್ಕೂ ಅನಾದಿ ಕಾಲದಿಂದಲೂ ಅವಿನಾಭಾವ ಸಂಬಂಧವಿದೆ. ಪ್ರಾಚೀನ...

‘INDIA’ ಮೈತ್ರಿಕೂಟದ ಸಭೆಗಾಗಿ ದೆಹಲಿಗೆ ಮಮತಾ ಪ್ರಯಾಣ: ‘ದಿಮಾಗಿ ನಕ್ಸಲರ’ ಜತೆ ಸಮಾಲೋಚನೆ ಎಂದ ಸುವೇಂದು ಅಧಿಕಾರಿ

ಬುಧವಾರ ನಡೆಯಲಿರುವ 'INDIA' ಮೈತ್ರಿಕೂಟದ ಪ್ರಮುಖ ಸಭೆಯಲ್ಲಿ ಪಾಲ್ಗೊಳ್ಳಲು ಪಶ್ಚಿಮ ಬಂಗಾಳದ...

ಮೋದಿ ಪ್ರಮಾಣಪತ್ರ ವಿವಾದ: ಕೇಜ್ರಿವಾಲ್ ಮೇಲ್ಮನವಿ ವಜಾಗೊಳಿಸಿದ ಗುಜರಾತ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವಂತೆ ಗುಜರಾತ್...