ಜಿಲ್ಲೆಯಲ್ಲಿ ತಂಬಾಕು ನಿಯಂತ್ರಣ ಅಭಿಯಾನದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸಿದ್ಧಪಡಿಸಲಾದ ಜಾಗೃತಿ ಪೋಸ್ಟರ್‌ಗಳನ್ನು ಜಿಲ್ಲಾಧಿಕಾರಿ ಹರ್ಷಲ್ ಬೊಯರ್ ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸಂಜಯ ದೊಡ್ಡಮನಿ, ತಹಸೀಲ್ದಾರ್ ನಿಶ್ಚಲ್ ನರೋನ್ಹಾ, ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ. ನಟರಾಜ್, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ. ಕ್ಯಾ. ರಮೇಶ್‌ರಾವ್ ಸೇರಿದಂತೆ ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಅಭಿಯಾನದ ಮೂಲಕ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಕೈಗೊಳ್ಳಲಾಗುತ್ತಿದೆ.



