ಜುಲೈ 1ರಿಂದ ‘ನರೇಗಾ’ ರದ್ದು; ‘ವಿಬಿ-ಜಿ ರಾಮ್ ಜಿ’ ಕಾಯ್ದೆ ಜಾರಿ

Date:

ಕಳೆದ ಸುಮಾರು ಎರಡು ದಶಕಗಳಿಂದ ಗ್ರಾಮೀಣ ಭಾಗದ ಜನರಿಗೆ ಆರ್ಥಿಕ ಭದ್ರತೆ ಒದಗಿಸುತ್ತಿದ್ದ ‘ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ’ಯು (MGNREGA) ಮುಂಬರುವ ಜುಲೈ 1 ರಿಂದ ಅಧಿಕೃತವಾಗಿ ರದ್ದಾಗಲಿದೆ. ಇದರ ಸ್ಥಾನದಲ್ಲಿ ಕೇಂದ್ರ ಸರ್ಕಾರವು ಹೊಸದಾಗಿ ‘ವಿಕಸಿತ ಭಾರತ–ರೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ)’ ಅಂದರೆ ‘ವಿಬಿ-ಜಿ ರಾಮ್ ಜಿ’ (VB-G RAM G) ಕಾಯ್ದೆಯನ್ನು ಜಾರಿಗೆ ತರಲು ಅಧಿಸೂಚನೆ ಹೊರಡಿಸಿದೆ.

- Advertisement -

ಈ-ಕೆವೈಸಿ (e-KYC) ಪೂರ್ಣಗೊಂಡಿರುವ ಹಾಲಿ ನರೇಗಾ ಜಾಬ್ ಕಾರ್ಡ್‌ಗಳು, ಹೊಸ ‘ಗ್ರಾಮೀಣ ರೋಜಗಾರ್ ಗ್ಯಾರಂಟಿ ಕಾರ್ಡ್’ಗಳನ್ನು ವಿತರಿಸುವವರೆಗೂ ಮಾನ್ಯತೆ ಹೊಂದಿರಲಿವೆ ಹಾಗೂ ಜೂನ್ 30ರವರೆಗೆ ಪ್ರಸ್ತುತ ನಡೆಯುತ್ತಿರುವ ಕಾಮಗಾರಿಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರಿಯಲಿವೆ. ಪಾರದರ್ಶಕತೆ ಕಾಯ್ದುಕೊಳ್ಳುವ ನಿಟ್ಟಿನಲ್ಲಿ, ಕೂಲಿ ಹಣವನ್ನು ನೇರ ನಗದು ವರ್ಗಾವಣೆ (DBT) ಮೂಲಕವೇ ಕಾರ್ಮಿಕರ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗಳಿಗೆ ಜಮಾ ಮಾಡಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಬೆಳ್ಳಿತೆರೆಯಿಂದ ವಿಧಾನಸಭೆಗೆ ಆಪ್ತ ಗೆಳೆಯರು: ಸಿಎಂ ವಿಜಯ್‌ಗೆ ವಿಪಕ್ಷ ನಾಯಕ ಉದಯನಿಧಿ ಮುಖಾಮುಖಿ

ಹಾಜರಿಪಟ್ಟಿ ಮುಕ್ತಾಯಗೊಂಡ 15 ದಿನಗಳ ಒಳಗೆ ವೇತನ ಪಾವತಿಸುವುದು ಕಡ್ಡಾಯವಾಗಿದ್ದು, ವಿಳಂಬವಾದರೆ ಕಾರ್ಮಿಕರಿಗೆ ಪರಿಹಾರ ನೀಡುವ ನಿಯಮವನ್ನು ಹೊಸ ಕಾಯ್ದೆಯಲ್ಲಿ ಮತ್ತಷ್ಟು ಕಟ್ಟುನಿಟ್ಟಾಗಿಸಲಾಗಿದೆ.

ಕೇವಲ ಕೂಲಿ ನೀಡುವುದಷ್ಟೇ ಅಲ್ಲದೆ, ಗ್ರಾಮೀಣ ಭಾಗದಲ್ಲಿ ಸುಸ್ಥಿರ ಅಭಿವೃದ್ಧಿ ಸಾಧಿಸುವ ಗುರಿಯೊಂದಿಗೆ ಈ ಹೊಸ ಕಾಯ್ದೆಯನ್ನು ರೂಪಿಸಲಾಗಿದೆ ಎನ್ನಲಾಗಿದೆ. ಜಲ ಭದ್ರತೆ ಕಾಮಗಾರಿಗಳು, ಮೂಲ ಗ್ರಾಮೀಣ ಮೂಲಸೌಕರ್ಯ, ಜೀವನೋಪಾಯಕ್ಕೆ ಸಂಬಂಧಿಸಿದ ಮೂಲಸೌಕರ್ಯ ಮತ್ತು ಹವಾಮಾನ ವೈಪರೀತ್ಯ ತಡೆಗಟ್ಟುವ ಕಾಮಗಾರಿಗಳಿಗೆ ಇದು ಹೆಚ್ಚು ಒತ್ತು ನೀಡುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಈ ಯೋಜನೆಗಾಗಿ ಕೇಂದ್ರ ಸರ್ಕಾರವು 2026-27ನೇ ಸಾಲಿನಲ್ಲಿ ಬರೋಬ್ಬರಿ 95,692.31 ಕೋಟಿ ರೂ. ದಾಖಲೆಯ ಬಜೆಟ್ ಮೀಸಲಿರಿಸಿದ್ದು, ರಾಜ್ಯಗಳ ಪಾಲು ಸೇರಿ ಒಟ್ಟು ವೆಚ್ಚ 1.51 ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...