118 ಸಂಖ್ಯಾಬಲದೊಂದಿಗೆ ಬನ್ನಿ ಎಂದ ರಾಜ್ಯಪಾಲರು: ನಾಳೆ ಜೋಸೆಫ್ ವಿಜಯ್ ಪ್ರಮಾಣವಚನ ಸ್ವೀಕಾರ ಅನುಮಾನ

Date:

ತಮಿಳುನಾಡಿನಲ್ಲಿ ಹೊಸ ಸರ್ಕಾರ ರಚನೆಯ ಪ್ರಕ್ರಿಯೆಗೆ ಹಿನ್ನಡೆಯಾದಂತಿದ್ದು, ನಾಳೆ (ಮೇ 7) ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಬಹುತೇಕ ಅನುಮಾನವಾಗಿದೆ. ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಅಗತ್ಯವಿರುವ ಸಂಖ್ಯಾಬಲದ ಬಗ್ಗೆ ರಾಜ್ಯಪಾಲ ರಾಜೇಂದ್ರ ಅರಳೇಕರ್ ಅವರಿಗೆ ಇನ್ನೂ ಮನವರಿಕೆಯಾಗಿಲ್ಲ ಎಂದು ವರದಿಯಾಗಿದೆ.

- Advertisement -

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು 118 ಶಾಸಕರ ಬೆಂಬಲ ಅಗತ್ಯವಿದೆ. ವಿಜಯ್ ನೇತೃತ್ವದ ಟಿವಿಕೆ 108 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದಕ್ಕೆ ಕಾಂಗ್ರೆಸ್‌ನ 5 ಶಾಸಕರು ಬೆಂಬಲ ನೀಡಿದ್ದು, ಒಟ್ಟು ಸಂಖ್ಯಾಬಲ 113ಕ್ಕೆ ಏರಿಕೆಯಾಗಿದೆ. ಆದರೂ ಬಹುಮತ ಸಂಖ್ಯೆ ತಲುಪಲು ಇನ್ನೂ 5 ಸ್ಥಾನಗಳ ಕೊರತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನು ಓದಿದ್ದೀರಾ? ಟಿವಿಕೆ ತೆಕ್ಕೆಗೆ ಜಾರಿದ ಕಾಂಗ್ರೆಸ್, ಆಪ್ತಮಿತ್ರ ಸ್ಟಾಲಿನ್ ಬೆನ್ನಿಗೆ ಚೂರಿ ಹಾಕಿತೇ?

ಬುಧವಾರ ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್, ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ, ಪಕ್ಷದ ಬಳಿ ಇರುವ ಅಧಿಕೃತ ಸಂಖ್ಯಾಬಲದ ಬಗ್ಗೆ ರಾಜ್ಯಪಾಲರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇವಲ ಹಕ್ಕು ಮಂಡನೆ ಪತ್ರ ನೀಡಿದರೆ ಸಾಲದು, 118 ಶಾಸಕರ ಬೆಂಬಲದ ಸ್ಪಷ್ಟ ಅಧಿಕೃತ ದಾಖಲೆಗಳನ್ನು ಒದಗಿಸಬೇಕು ಎಂದು ರಾಜ್ಯಪಾಲರು ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿದ್ಯಮಾನಗಳ ಹಿನ್ನೆಲೆಯಲ್ಲಿ, ಮೇ 7 ರಂದು ನಿಗದಿಯಾಗಿದ್ದ ಪ್ರಮಾಣವಚನ ಸಮಾರಂಭ ನಡೆಯುವ ಸಾಧ್ಯತೆ ಕ್ಷೀಣಿಸಿದೆ. ಅಗತ್ಯವಿರುವ ಶಾಸಕರ ಬೆಂಬಲವನ್ನು ಅಧಿಕೃತವಾಗಿ ಸಾಬೀತುಪಡಿಸುವವರೆಗೂ ರಾಜ್ಯಪಾಲರು ಸರ್ಕಾರ ರಚನೆಗೆ ಹಸಿರು ನಿಶಾನೆ ತೋರುವ ಸಾಧ್ಯತೆ ಕಡಿಮೆ.

ಒಟ್ಟು ಸ್ಥಾನಗಳು: 234
ಬಹುಮತಕ್ಕೆ ಅಗತ್ಯ: 118
ಟಿವಿಕೆ ಗೆದ್ದ ಸ್ಥಾನಗಳು: 108
ಕಾಂಗ್ರೆಸ್ ಬೆಂಬಲ: 05
ಪ್ರಸ್ತುತ ಒಟ್ಟು ಬಲ: 113
ಬಹುಮತಕ್ಕೆ ಇರುವ ಕೊರತೆ: 05

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...