ಮೈಸೂರು | ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನಕ್ಕೆ ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ

Date:

ಕತೆಗಾರ್ತಿ ಅನುಪಮಾ ಪ್ರಸಾದ್ ಅವರ ‘ಚೋದ್ಯ’ ಕಥಾಸಂಕಲನವು 2026ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದೆ. ಬೆಂಗಳೂರಿನ ಅಮೂಲ್ಯ ಪುಸ್ತಕ ಪ್ರಕಾಶನ ಈ ಸಂಕಲನವನ್ನು ಪ್ರಕಟಿಸಿದೆ.

- Advertisement -

ಮೈಸೂರಿನ ಸಮತಾ ಅಧ್ಯಯನ ಕೇಂದ್ರ ಸಂಸ್ಥೆಯು 2022ರಲ್ಲಿ ಸ್ಥಾಪಿಸಿದ ಈ ಪ್ರಶಸ್ತಿಗೆ ಈ ಬಾರಿ 2022ರಿಂದ 2025ರ ಅವಧಿಯಲ್ಲಿ ಲೇಖಕಿಯರು ಪ್ರಕಟಿಸಿದ ಕಥಾಸಂಕಲನಗಳನ್ನು ಆಹ್ವಾನಿಸಿತ್ತು. ಲೇಖಕಿಯರು ಹಾಗೂ ಪ್ರಕಾಶಕರಿಂದ ಒಟ್ಟು 63 ಸಂಕಲನಗಳು ಸ್ಪರ್ಧೆಗೆ ಬಂದಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಿರಿಯ ಲೇಖಕರಾದ ಡಾ. ಸಬಿತಾ ಬನ್ನಾಡಿ, ಸ್ವಾಮಿ ಪೊನ್ನಾಚಿ ಹಾಗೂ ಡಾ. ಎಂ.ಎಸ್. ವೇದಾ ಅವರನ್ನೊಳಗೊಂಡ ತೀರ್ಪುಗಾರರ ಸಮಿತಿಯು ‘ಚೋದ್ಯ’ ಕಥಾಸಂಕಲನವನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು ₹25,000 ರೂಪಾಯಿ ನಗದನ್ನು ಒಳಗೊಂಡಿದೆ. ಇದೇ ವೇಳೆ, ಡಾ. ವಿಜಯಾ ದಬ್ಬೆ ಅವರ ಸ್ಮರಣಾರ್ಥ ಆಯೋಜಿಸಿದ್ದ ರಾಜ್ಯಮಟ್ಟದ ಕವನ ಮತ್ತು ಲಲಿತಪ್ರಬಂಧ ಸ್ಪರ್ಧೆಗಳ ಫಲಿತಾಂಶವನ್ನೂ ಸಮತಾ ಅಧ್ಯಯನ ಕೇಂದ್ರ ಪ್ರಕಟಿಸಿದೆ.

20ರಿಂದ 35 ವರ್ಷದ ವಿದ್ಯಾರ್ಥಿ ಹಾಗೂ ಯುವಜನರಿಗೆ ಆಯೋಜಿಸಿದ್ದ ಕವನ ಸ್ಪರ್ಧೆಯಲ್ಲಿ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವಿದ್ಯಾರ್ಥಿಗಳಾದ ದರ್ಶನ್ ಕುಮಾರ್ ಮತ್ತು ಜ್ಯೋತಿರ್ಲಕ್ಷ್ಮಿ ಕ್ರಮವಾಗಿ ಪ್ರಥಮ ಹಾಗೂ ದ್ವಿತೀಯ ಬಹುಮಾನ ಪಡೆದಿದ್ದಾರೆ. ಬೆಂಗಳೂರಿನ ಗವಿಪುರಂ ಬಡಾವಣೆಯ ಅಚಲ ಬಿ. ಹೆನ್ಲಿ ತೃತೀಯ ಬಹುಮಾನಕ್ಕೆ ಪಾತ್ರರಾಗಿದ್ದಾರೆ. ಅಥಣಿ ತಾಲೂಕಿನ ಶೇಗುಣಸೆಯ ಸೀಮಾ ಶಿರಗುಪ್ಪಿ ಹಾಗೂ ಬೆಂಗಳೂರಿನ ಹನುಮಂತನಗರದ ವೈ.ಎಸ್. ಸುಪ್ರಿಯಾ ಅವರ ಕವನಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

20ರಿಂದ 40 ವರ್ಷದ ಲೇಖಕಿಯರಿಗೆ ಆಯೋಜಿಸಿದ್ದ ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ಅಚಲ ಬಿ. ಹೆನ್ಲಿ ಪ್ರಥಮ ಹಾಗೂ ಕುಂದಾಪುರ ತಾಲೂಕಿನ ಅಮಾಸೆಬೈಲಿನ ರಾಧಿಕಾ ಎಸ್. ದ್ವಿತೀಯ ಬಹುಮಾನ ಪಡೆದಿದ್ದಾರೆ.

ಸ್ಪರ್ಧೆಗಳಲ್ಲಿ ವಿಜೇತರು ಹಾಗೂ ಆಸಕ್ತ ಲೇಖಕಿಯರಿಗಾಗಿ ಸಮತಾ ಅಧ್ಯಯನ ಕೇಂದ್ರವು ಕರ್ನಾಟಕ ಲೇಖಕಿಯರ ಸಂಘದ ಸಹಯೋಗದಲ್ಲಿ ಮೇ 31 ಮತ್ತು ಜೂನ್ 1ರಂದು ಮೈಸೂರಿನಲ್ಲಿ ಕಾವ್ಯ ಕಮ್ಮಟವನ್ನು ಆಯೋಜಿಸಿದೆ. ಜೂನ್ 1ರಂದು ಸಂಜೆ 4 ಗಂಟೆಗೆ ಪ್ರಶಸ್ತಿ ಪ್ರದಾನ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಸಮತಾ ಅಧ್ಯಯನ ಕೇಂದ್ರದ ಅಧ್ಯಕ್ಷೆ ಡಾ. ಸಬಿಹಾ ಭೂಮಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಪಮಾ ಪ್ರಸಾದ್ ಪರಿಚಯ:

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೃಷಿಕ ಕುಟುಂಬದಲ್ಲಿ ಜನಿಸಿದ ಅನುಪಮಾ ಪ್ರಸಾದ್ ಅವರು ಉಜಿರೆಯಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ವಿವಾಹದ ನಂತರ ಕಾಸರಗೋಡಿನ ನೀರ್ಚಾಲು ಗ್ರಾಮದಲ್ಲಿ ನೆಲೆಸಿದ್ದಾರೆ.

‘ಚೇತನಾ’, ‘ಕರವೀರದ ಗಿಡ’, ‘ದೂರ ತೀರ’, ‘ಜೋಗತಿ ಜೋಳಿಗೆ’ ಇವರ ಇತರ ಕಥಾಸಂಕಲನಗಳಾಗಿವೆ. ‘ಪಕ್ಕಿ ಹಳ್ಳದ ಹಾದಿಗುಂಟ’ ಕಾದಂಬರಿಯನ್ನೂ ರಚಿಸಿದ್ದಾರೆ. ನಾಟಕ ಹಾಗೂ ಜೀವನ ಕಥಾನಕಗಳನ್ನೂ ಅವರು ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ?ಮೈಸೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗಾಗಿ ಅಭಿಯಾನ: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

ಸಮಾಜದ ಕಟ್ಟಕಡೆಯ ಜನರು ಹಾಗೂ ಮಹಿಳೆಯರ ಬವಣೆಗಳನ್ನು ಬಿಂಬಿಸುವ ಇವರ ಸಾಹಿತ್ಯ ಕೃತಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಸಂಗಂ ಸಾಹಿತ್ಯ ಪ್ರಶಸ್ತಿ, ಬೇಂದ್ರೆ, ಮಾಸ್ತಿ, ಬೆಸಗರಹಳ್ಳಿ ರಾಮಣ್ಣ, ವಸುದೇವ ಭೂಪಾಲಂ ಹಾಗೂ ಚದುರಂಗ ಮೊದಲಾದ ಹಿರಿಯ ಸಾಹಿತಿಗಳ ಹೆಸರಿನಲ್ಲಿ ಸ್ಥಾಪಿತವಾಗಿರುವ ಹಲವು ಪ್ರಶಸ್ತಿ–ಪುರಸ್ಕಾರಗಳಿಗೆ ಭಾಜನರಾಗಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

SIR ವಿವಾದ | ಕೊಪ್ಪದಲ್ಲಿ 243 ಮತದಾರರ ಹೆಸರು ಡಿಲೀಟ್‌ಗೆ ನೀಡಿದ್ದ ಅರ್ಜಿ ಹಿಂಪಡೆದ ಬಿಜೆಪಿ ಮುಖಂಡ

ರಾಜ್ಯಾದ್ಯಂತ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮತ್ತು...

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...