ವಿಜಯನಗರ | ವಾಂಗ್‌ಚುಕ್‌ ಸ್ಥಳಾಂತರಕ್ಕೆ ಖಂಡನೆ: ಪ್ರಧಾನ್, ಪ್ರಧಾನಿ ರಾಜೀನಾಮೆಗೆ ಆಗ್ರಹ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ನೀಟ್ ಅಕ್ರಮ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಶಿಕ್ಷಣ ತಜ್ಞ ಸೋನಮ್ ವಾಂಗ್‌ಚುಕ್ ಅವರ ಬಲವಂತದ ಸ್ಥಳಾಂತರ ಖಂಡಿಸಿ ಹೊಸಪೇಟೆಯಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ, ಸ್ಟೂಡೆಂಟ್ ಫೆಡರೇಷನ್ ಆಫ್ ಇಂಡಿಯಾ ಸೇರಿ ವಿವಿಧ ಸಂಘಟನೆಗಳ ಕಾರ್ಯಕರ್ತರು, ಸೋನಮ್ ವಾಂಗ್‌ಚುಕ್ ಅವರನ್ನು ಆಸ್ಪತ್ರೆಯಿಂದ ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.

- Advertisement -

ವಿಜಯನಗರ ಕಾಲೇಜು ಮುಂಭಾಗದಿಂದ ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಈ ವೇಳೆ ಸೋಮಶೇಖರ್ ಬಣ್ಣದಮನೆ ಸೇರಿದಂತೆ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ತಹಶೀಲ್ದಾರ್ ಕಚೇರಿ ಮುಂಭಾಗದಲ್ಲಿ ಮಾತನಾಡಿದ ಸಂವಿಧಾನ ಸಂರಕ್ಷಣಾ ಸಮಿತಿಯ ವೀರ ಸಂಗಯ್ಯ, “ನೀಟ್ ವ್ಯವಸ್ಥೆ ಕೋಟ್ಯಂತರ ಯುವಕರ ಜೀವನವನ್ನು ಹಾಳು ಮಾಡಿದೆ. ಈ ಅವ್ಯವಸ್ಥೆಯ ಕುರಿತು ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು” ಎಂದು ಆಗ್ರಹಿಸಿದರು.

ಸಾಹಿತಿ ಪೀರ್ ಭಾಷಾ ಮಾತನಾಡಿ, “ಚುನಾವಣೆ ಮೂಲಕ ಗೆದ್ದು ಸರ್ವಾಧಿಕಾರಿಯೊಬ್ಬ ಅಧಿಕಾರ ನಡೆಸುತ್ತಿದ್ದಾರೆ. ನೀಟ್ ಹಗರಣದಿಂದ ಲಕ್ಷಾಂತರ ವಿದ್ಯಾರ್ಥಿಗಳ ಜೀವನ ಹಾಳಾಗಿದೆ. ನೊಂದ ವಿದ್ಯಾರ್ಥಿಗಳ ಪರ ಧ್ವನಿ ಎತ್ತಿದ ಸೋನಮ್ ಅವರು ಅನೇಕ ದಿನಗಳಿಂದ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದಾರೆ. ಅವರನ್ನು ಬಿಳಿಬಟ್ಟೆಯಲ್ಲಿ ಸುತ್ತಿ ಆಸ್ಪತ್ರೆಗೆ ಎಳೆದೊಯ್ದಿದ್ದಾರೆ. ಈ ಅನ್ಯಾಯವನ್ನು ತೀವ್ರವಾಗಿ ಖಂಡಿಸುತ್ತೇವೆ. ಅಲ್ಲದೇ, ಶಾಂತಿಯುತ ಹೋರಾಟ ನಡೆಸುತ್ತಿದ್ದ ನಮ್ಮ ಸಂಗಾತಿಗಳನ್ನು ಹೊಸಪೇಟೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದು ಖಂಡನೀಯ. ಅವರನ್ನು ಈ ಕೂಡಲೇ ಬಿಡುಗಡೆ ಮಾಡದಿದ್ದರೆ ಉಗ್ರ ಹೋರಾಟ ಮಾಡುವೆವು” ಎಂದು ಎಚ್ಚರಿಸಿದರು.

ಎಸ್‌ಎಫ್‌ಐ ಮುಖಂಡರು ಮಾತನಾಡಿ, “ವಿದ್ಯಾರ್ಥಿಗಳ ಬಾಳಲ್ಲಿ ಕೇಂದ್ರ ಸರ್ಕಾರ ಚೆಲ್ಲಾಟ ಆಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರೂ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

ಈ ವೇಳೆ ಸಂವಿಧಾನ ಸಂರಕ್ಷಣಾ ಸಮಿತಿಯ ವಿಶಾಲ್ ಮ್ಯಾಸರ್, ಎಸ್‌ಎಫ್‌ಐ ಕಾರ್ಯಕರ್ತರು, ರೈತ ಸಂಘದ ಸದಸ್ಯರು ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿ ಅವ್ಯವಸ್ಥೆ ಕುರಿತು ತನಿಖೆಗೆ ವಿಶೇಷ ತಂಡ ರಚಿಸಲು ಆಗ್ರಹ

ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯ ಆಡಳಿತ ಮಂಡಳಿಯ ನಿರ್ಲಕ್ಷ್ಯದಿಂದ ಕಾರ್ಮಿಕೆ ಶ್ರೀಮಂತಿನಿ ಮೃತಪಟ್ಟಿದ್ದಾರೆ...

ಚಿಂತಾಮಣಿ | ಸಿದ್ದರಾಮಯ್ಯ ವೈಯಕ್ತಿಕ ಚಾರಿತ್ರ್ಯವಧೆ ಮಾಡುವ ಸಣ್ಣತನ ನಮಗಿಲ್ಲ: ಪ್ರತಾಪ್ ಸಿಂಹ

ನಗರದ ಪಾಲಿಟೆಕ್ನಿಕ್ ಮೈದಾನದ ಮಾತಾ ಭಾರತಿ ಮಂಗಳ ಮಂಟಪದಲ್ಲಿ ಆಯೋಜಿಸಿದ್ದ ದಸರಾ...

ಆರ್‌ಎಸ್‌ಎಸ್‌ ಕೇವಲ ಪುರುಷರಿರುವ ‘ಸಂವಿಧಾನ ವಿರೋಧಿ’ ಸಂಘಟನೆ: ರಾಹುಲ್ ಗಾಂಧಿ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ...

ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ...