ವಿಜಯಪುರ | ದಲಿತನ ಹತ್ಯೆ ಖಂಡಿಸಿ ಪ್ರತಿಭಟನಾ ಮೆರವಣಿಗೆಗೆ ಅಂಬೇಡ್ಕರ್‌ ಸೇನೆ ಕರೆ

Date:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಗರಬೆಟ್ಟ ಗ್ರಾಮದ ಯುವಕ ರವಿಚಂದ್ರ ದೇವಪ್ಪ ಮಾದರ ಅವರನ್ನು ಬಾಗೇವಾಡಿ ತಾಲ್ಲೂಕಿನ ಹಂಗರಗಿ ಕ್ರಾಸ್ ಸಮೀಪ ಕ್ರೂರವಾಗಿ ಹತ್ಯೆಗೈದ ಪ್ರಕರಣವನ್ನು ಖಂಡಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಹಾಗೂ ವಿವಿಧ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವ ಉದ್ದೇಶದಿಂದ ಜೂನ್ 1ರಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲು ಅಂಬೇಡ್ಕರ್ ಸೇನೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು.

- Advertisement -

ಸಭೆಯನ್ನುದ್ದೇಶಿಸಿ ಮಾತನಾಡಿದ ಅಂಬೇಡ್ಕರ್ ಸೇನೆಯ ಜಿಲ್ಲಾ ಉಪಾಧ್ಯಕ್ಷ ಬಸ್ಸು ಈ. ಕಟ್ಟಿಮನಿ, “ಈ ಕ್ರೂರ ಹತ್ಯೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಸಮಾಜದ ಎಲ್ಲ ವರ್ಗದ ಜನರು ಒಗ್ಗಟ್ಟಿನಿಂದ ಹೋರಾಟದಲ್ಲಿ ಭಾಗವಹಿಸಬೇಕು” ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಡಿ.ಎಸ್.ಎಸ್. ನಾಗವಾರ ಬಣದ ಬೆಳಗಾವಿ ವಿಭಾಗ ಸಂಚಾಲಕ ದೇವೇಂದ್ರ ಹಾದಿಮನಿ ಮಾತನಾಡಿ, “ಕೊಲೆ ಆರೋಪಿಗಳಿಗೆ ಸೂಕ್ತ ಶಿಕ್ಷೆಯಾಗಬೇಕು ಹಾಗೂ ಮೃತ ಯುವಕನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವ ನಿಟ್ಟಿನಲ್ಲಿ ಪ್ರತಿಭಟನೆ ಅಗತ್ಯವಾಗಿದೆ” ಎಂದು ಹೇಳಿದರು.

ಡಿ.ಎಸ್.ಎಸ್. ತಾಲೂಕು ಅಧ್ಯಕ್ಷ ರಮೇಶ್ ವೈ. ದೊಡ್ಡಮನಿ (ಸಾಸನೂರ) ಹಾಗೂ ಅಂಬೇಡ್ಕರ್ ಧ್ವನಿ ಚಂದ್ರಕಾಂತ ಎಸ್. ಕಾದ್ರೋಳಿ ಮಾತನಾಡಿ, “ಜಾತಿ-ಧರ್ಮ ಭೇದ ಮರೆತು ಎಲ್ಲರೂ ಹೋರಾಟಕ್ಕೆ ಬೆಂಬಲ ನೀಡಬೇಕು. ಇಂತಹ ಅಮಾನವೀಯ ಕೃತ್ಯಗಳಿಗೆ ಅಂತ್ಯ ಹಾಡಲು ಸಂಘಟಿತ ಹೋರಾಟ ಅಗತ್ಯ” ಎಂದು ಅಭಿಪ್ರಾಯಪಟ್ಟರು.

ಅಂಬೇಡ್ಕರ್ ಸೇನೆ ತಾಲೂಕು ಅಧ್ಯಕ್ಷ ಗೋಪಾಲ ಕಟ್ಟಿಮನಿ ಪ್ರತಿಭಟನಾ ಮೆರವಣಿಗೆಯ ರೂಪುರೇಷೆಗಳ ಕುರಿತು ವಿವರಿಸಿದರು.

ಸಭೆಯಲ್ಲಿ ಅಂಬೇಡ್ಕರ್ ಸೇನೆ ತಾಳಿಕೋಟಿ ತಾಲೂಕು ಖಜಾಂಚಿ ಪರಶುರಾಮ ತಳವಾರ (ಮಿಣಜಿಗಿ), ಹಿರಿಯರಾದ ಯಮನಪ್ಪ ಕಟ್ಟಿಮನಿ, ಹುಲಗಪ್ಪ ಕಟ್ಟಿಮನಿ, ದ್ಯಾಮಣ್ಣ ಸೋಮನಾಳ, ರಮೇಶ್ ಮಾದರ, ದೇವಪ್ಪ ತುಂಬಗಿ ಮಾದರ, ಶಂಕ್ರಪ್ಪ ದೊಡ್ಡಮನಿ, ಪರಶುರಾಮ ತಳವಾರ, ಅಯ್ಯಪ್ಪ ಸಾಸನೂರ, ನಿಂಗಪ್ಪ ಮಾದರ, ಬಸವರಾಜ ಸಾಸನೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...

ಜಂತರ್ ಮಂತರ್ ಧರಣಿ ಸ್ಥಳ ರದ್ದತಿ ಖಂಡಿಸಿ ಎಸ್‌ಎಫ್‌ಐ, ಡಿವೈಎಫ್‌ಐ ಪ್ರತಿಭಟನಾ ಮೆರವಣಿಗೆ: ಹಲವು ನಾಯಕರು ಪೊಲೀಸ್ ವಶಕ್ಕೆ

ದೇಶದ ರಾಜಧಾನಿ ದೆಹಲಿಯ ಐತಿಹಾಸಿಕ 'ಜಂತರ್ ಮಂತರ್' ಅನ್ನು ಪ್ರಜಾಸತ್ತಾತ್ಮಕ ಪ್ರತಿಭಟನಾ...