ವಿಜಯಪುರದ ದರ್ಬಾರ್ ಹೈಸ್ಕೂಲ್ ಬಳಿ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬೆಂಬಲಿಗರು ಯತ್ನಿಸಿದಾಗ ಪೊಲೀಸರು ಅದನ್ನು ತಡೆದಿದ್ದು, ಬೆಂಬಲಿಗರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ವಾಗ್ವಾದ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿರುವುದಾಗಿ ತಿಳಿದುಬಂದಿದೆ.
Tension prevailed near Darbar High School in #Vijayapura #Karnataka after supporters of MLA @BasanagoudaBJP attempted to distribute #saffronshawls to students.Police intervened and stopped the distribution, leading to an argument between Yatnal's supporters and police personnel pic.twitter.com/rk4HnxmZcV
— Imran Khan (@KeypadGuerilla) June 5, 2026
ಶಾಸಕ ಯತ್ನಾಳ್ ಬೆಂಬಲಿಗರು ಶಾಲಾ ವಿದ್ಯಾರ್ಥಿಗಳಿಗೆ ಕೇಸರಿ ಶಾಲುಗಳನ್ನು ವಿತರಿಸಲು ಮುಂದಾದ ಕಾರಣ ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸರು ಈ ಕಾರ್ಯವನ್ನು ತಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಬಲಿಗರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ಹಾಗೂ ತಳ್ಳಾಟ-ನುಗ್ಗಾಟವೂ ಉಂಟಾಯಿತು.
ಇದನ್ನೂ ಓದಿದ್ದೀರಾ? ಹುನಗುಂದ | ಮಲಪ್ರಭಾ ನದಿ ಪ್ರವಾಹ ಸಂತ್ರಸ್ತರ ಹೋರಾಟಕ್ಕೆ 30 ದಿನ
ಸ್ಥಳಕ್ಕೆ ಆಗಮಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಬೆಂಬಲಿಗರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಶಾಸಕ ಯತ್ನಾಳ್ ಅವರನ್ನು ಹಾಗೂ ಅವರ ಬೆಂಬಲಿಗರನ್ನು ಸ್ಥಳದಲ್ಲೇ ವಶಕ್ಕೆ ಪಡೆದಿದ್ದಾರೆ.





