ವಿಜಯಪುರ ನಗರದ ಬಿಎಲ್ಡಿಇ ಸಂಸ್ಥೆಯ ವಚನ ಪಿತಾಮಹ ಡಾ. ಫ. ಗು. ಹಳಕಟ್ಟಿ ಎಂಜಿನಿಯರಿಂಗ್ ಕಾಲೇಜಿಗೆ ದೇಶದ ಉನ್ನತ ಕಾಲೇಜುಗಳಲ್ಲಿ 28ನೇ ರ್ಯಾಂಕ್ ಲಭಿಸಿದೆ.
ಕಾಲೇಜಿನ ಪ್ರಾಚಾರ್ಯ ಡಾ. ಪಿ ಮಂಜುನಾಥ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, “ನ್ಯಾಷನಲ್ ಟೈಮ್ಸ್ ಎಂಜಿನಿಯರಿಂಗ್ ರ್ಯಾಂಕಿಂಗ್ ನಡೆಸಿದ ಸಮೀಕ್ಷೆಯಲ್ಲಿ ಈ ಸ್ಥಾನ ಸಿಕ್ಕಿದೆ. ಈ ಸಂಸ್ಥೆ ದೇಶದ ನಾನಾ ಎಂಜಿನಿಯರಿಂಗ್ ಕಾಲೇಜುಗಳ ಸಮೀಕ್ಷೆ ನಡೆಸಿದ್ದು, ದೇಶದ ಉನ್ನತ 125 ಕಾಲೇಜುಗಳ ಪೈಕಿ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿಗೆ 28ನೇ ರ್ಯಾಂಕ್ ಲಭಿಸಿದೆ” ಎಂದು ಹೇಳಿದರು.
ಕರ್ನಾಟಕದ ಖಾಸಗಿ 125 ಎಂಜಿನಿಯರಿಂಗ್ ಕಾಲೇಜುಗಳ 27ನೇ ರ್ಯಾಂಕ್ ಪಡೆದಿದೆ. ದಕ್ಷಿಣ ಭಾರತದ ಅತ್ಯುತ್ತಮ 25 ಎಂಜಿನಿಯರಿಂಗ್ ಕಾಲೇಜುಗಳಲ್ಲಿ 15ನೇ ಸ್ಥಾನ ಪಡೆದಿದೆ.
ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ವ್ಯವಸ್ಥೆ ಮಾಡುವಲ್ಲಿ ದೇಶದ ಉನ್ನತ 70 ಖಾಸಗಿ ಕಾಲೇಜುಗಳ ಪೈಕಿ ಬಿಎಲ್ಡಿಇ ಎಂಜಿನಿಯರಿಂಗ್ ಕಾಲೇಜಿಗೆ 43ನೇ ರ್ಯಾಂಕ್ ಬಂದಿದೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಈಶ್ವರ ಖಂಡ್ರೆಗೆ ಡಿಸಿಎಂ ಸ್ಥಾನ ನೀಡಲು ಕಾಂಗ್ರೆಸ್ ಮುಖಂಡರ ಆಗ್ರಹ
ಕಾಲೇಜಿನ ಈ ಸಾಧನೆಗೆ ಬಿಎಲ್ಡಿಇ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಸಂತಸ ವ್ಯಕ್ತಪಡಿಸಿದ್ದು, ಕಾಲೇಜಿನ ಎಲ್ಲ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.




