ವಿಜಯಪುರ | ಅನಧಿಕೃತ ಹೋಂ ಸ್ಟೇಗಳಿಗೆ ಕಡಿವಾಣ

Date:

ವಿಜಯಪುರ ಜಿಲ್ಲೆಯಲ್ಲಿನ ಹೋಂ ಸ್ಟೇ ಮಾಲೀಕರು ಪ್ರವಾಸೋದ್ಯಮ ಮಾರ್ಗಸೂಚಿಗಳನ್ನು ಅನುಸರಿಸಿ ನಡೆಸಬೇಕು. ಇದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು, ಅನಧಿಕೃತವಾಗಿ ಹೋಂ ಸ್ಟೇ ನಡೆಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆನಂದ್ ಕೆ ಅವರು ಹೋಂ ಸ್ಟೇ ಮಾಲೀಕರಿಗೆ ಎಚ್ಚರಿಕೆ ನೀಡಿದರು.

- Advertisement -

ನಗರದ ಜಿಲ್ಲಾಡಳಿತದ ಕೆಸ್ವಾನ್ ಸಭಾಂಗಣದಲ್ಲಿ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವಿಶೇಷ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, “ಭವಿಷ್ಯದ ದಿನಗಳಲ್ಲಿ ಅನಧಿಕೃತ ಹೋಂ ಸ್ಟೇ ನಿರ್ವಹಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ನಗರದಲ್ಲಿ ಪುರಾತನ ನೀರು ವ್ಯವಸ್ಥೆ (ಕರೇಜ್) ಅನುಷ್ಠಾನಗೊಳಿಸುವ ಸಂಬಂಧ ಪುರಾತತ್ವ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯಿಂದ ತಕ್ಷಣವೇ ವಿವರಣಾತ್ಮಕ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಬೇಕು ಎಂದು ಐಎಚ್‌ಸಿಎನ್‌ಎಫ್ ಸಂಸ್ಥೆಯ ನಿರ್ದೇಶಕ ರಾಯಕರ್ ಸೂಚಿಸಿದರು.

“ಸಾರ್ವಜನಿಕ ಹೊಣೆಗಾರಿಕೆ ಸಾಮಾಜಿಕ (ಸಿಎಸ್‌ಆರ್) ಅನುದಾನದಡಿ ನಗರದ ಐತಿಹಾಸಿಕ ಸ್ಮಾರಕವನ್ನು ಅಭಿವೃದ್ಧಿಪಡಿಸುವ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಪುರಾತತ್ವ ವಸ್ತು ಸಂಗ್ರಹಾಲಯ ಇಲಾಖೆಯ ಅಧಿಕಾರಿಗಳು ಪ್ರವಾಸೋದ್ಯಮ ಇಲಾಖೆಯ ಸಮನ್ವಯದೊಂದಿಗೆ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸಬೇಕು” ಎಂದು ಸೂಚಿಸಿದರು.

“ಜಿಲ್ಲೆಯಲ್ಲಿರುವ ಪ್ರಮುಖ ಪ್ರವಾಸಿ ತಾಣಗಳಿಗೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸ್ವಚ್ಛ ಭಾರತ ಮಿಷನ್ ಹಾಗೂ ಮಹಾನಗರ ಪಾಲಿಕೆ ಅನುದಾನದಲ್ಲಿ ಮೂಲ ಸೌಕರ್ಯ ಒದಗಿಸಲು ಪ್ರಸ್ತಾವನೆ ಸಲ್ಲಿಸಬೇಕು” ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರಿಗೆ ಮಾರ್ಗಸೂಚಿ ನೀಡಲಾಯಿತು.

ಪೂರ್ಣಗೊಂಡ ಯಾತ್ರಿ ನಿವಾಸ ಮತ್ತು ಮೂಲ ಸೌಕರ್ಯ ಕಾಮಗಾರಿಗಳನ್ನು ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು, ಪ್ರಗತಿಯಲ್ಲಿರುವ ಕಾಮಗಾರಿಗಳ ಮುಕ್ತಾಯ ಮತ್ತು ಉಳಿದ ಕಾಮಗಾರಿಗಳನ್ನು ಕೈಗೊಳ್ಳಲು ಕೆಆರ್‌ಎಲ್‌ಓಪಿ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಆಯವ್ಯಯದಲ್ಲಿ ಜಿಲ್ಲೆಯ ಆಲಮಟ್ಟಿ ಜಲಾಶಯದಲ್ಲಿ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ ಮಾದರಿ) ಜಲಕ್ರೀಡೆಗಳು ಮತ್ತು ಜಲಸಾಹಸ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಹಾಗೂ ಕ್ರೂಸ್ ಟೂರಿಸಂ ಅಭಿವೃದ್ಧಿಪಡಿಸಲು ಆಲಮಟ್ಟಿ ಹಿನ್ನೀರು ಪ್ರದೇಶದಲ್ಲಿರುವ ಮರೆಮಟ್ಟಿ ಗ್ರಾಮದ ವ್ಯಾಪ್ತಿಯಲ್ಲಿ ನಿವೇಶನ ಗುರುತಿಸಲಾಗಿದೆ. ಈ ನಿವೇಶನಕ್ಕೆ ಅನುಮತಿ ನೀಡಬೇಕು. ಪ್ರವಾಸೋದ್ಯಮ ಇಲಾಖೆಯ ‘ಒನ್ ಡಿಸ್ಟ್ರಿಕ್ಟ್ ಒನ್ ಡೆಸ್ಟಿನೇಶನ್’ ಯೋಜನೆಯಡಿ ಆಲಮಟ್ಟಿ ಪ್ರವಾಸಿ ತಾಣವನ್ನು ಅಭಿವೃದ್ಧಿಪಡಿಸಬೇಕು. ಮೂಲ ಸೌಕರ್ಯ ಒದಗಿಸಿ ಮಾದರಿ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸುವ ಕುರಿತು ಆಲಮಟ್ಟಿಯ ಕೆಬಿಜೆಎನ್‌ಎಲ್ ಮುಖ್ಯ ಅಭಿಯಂತರರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮಕ್ಕಳಕಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ನಗರ ಯೋಜನಾ ಕೋಶದ ನಿರ್ದೇಶಕ ಸೌದಾಗರ, ಪ್ರವಾಸೋದ್ಯಮ ಉಪನಿರ್ದೇಶಕ ಅರವಿಂದ ಹೂಗಾರ್, ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ನಾಮನಿರ್ದೇಶಿತ ಸದಸ್ಯ ಸಂಜೀವ ಕಾಕಂಡಕಿ, ಎಎಸ್‌ಐ ಇಲಾಖೆಯ ಕರಜಗಿ, ಮ್ಯೂಸಿಯಂ ಎಎಸ್‌ಐ, ವಕ್ಫ್ ಬೋರ್ಡ್ ಅಧಿಕಾರಿಗಳು, ಕಲಬುರಗಿ ಪುರಾತತ್ವ ಇಲಾಖೆಯ ಉಪನಿರ್ದೇಶಕಿ ಮಂಜುಳಾ, ಕೊಳದ ನಿರ್ಮೂಲನ ಮಂಡಳಿ ಅನ್ಸಾಬೆಲ್ ಲೋಪೆಜ್, ಅಲೆಕ್ಸಾಂಡರ್, ಅಮೀನ್ ಹುಲ್ಲೂರ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2036ರ ಒಲಿಂಪಿಕ್ಸ್ ಆತಿಥ್ಯ: ಕಣದಲ್ಲಿರುವ 7 ರಾಷ್ಟ್ರಗಳಲ್ಲಿ ಭಾರತವೂ ಭಾಗಿ

2036ರ ಒಲಿಂಪಿಕ್ಸ್ ಕ್ರೀಡಾಕೂಟದ ಆತಿಥ್ಯ ವಹಿಸಲು ಅಧಿಕೃತವಾಗಿ ಆಸಕ್ತಿ ತೋರಿರುವ ಏಳು...

ದೆಹಲಿ ಗಲಭೆ | ದ್ವೇಷ ಭಾಷಣ ಮಾಡಿದ್ದ ಬಿಜೆಪಿ ನಾಯಕರ ವಿರುದ್ಧ ಕ್ರಮಕ್ಕೆ ಕೋರಿದ್ದ ಅರ್ಜಿ ವಜಾ

ಈಶಾನ್ಯ ದೆಹಲಿ ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ದ್ವೇಷ ಭಾಷಣದ ಆರೋಪ ಹೊತ್ತಿರುವ...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...