ವಿಜಯಪುರ | ಬರಪೀಡಿತ ಜಿಲ್ಲೆಯಾಗಿ ಘೋಷಿಸಲು ಆಗ್ರಹ: ಸರ್ಕಾರಕ್ಕೆ ಮನವಿ ಸಲ್ಲಿಸಿದ ರೈತ ಸಂಘ

Date:

ವಿಜಯಪುರ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆಯಾಗಿ ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಹಾಗೂ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ (ರಿ.) ರಾಜ್ಯ ಘಟಕವು ಗುರುವಾರ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.

- Advertisement -

ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಳೆಗಳು ಒಣಗಿ ಅಪಾರ ಪ್ರಮಾಣದ ನಷ್ಟ ಉಂಟಾಗಿದ್ದು, ರೈತರ ಜೀವನೋಪಾಯವೇ ಸಂಕಷ್ಟಕ್ಕೆ ಸಿಲುಕಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜಿಲ್ಲೆಯ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಸರ್ಕಾರ ಕೂಡಲೇ ವಿಜಯಪುರವನ್ನು ಬರಪೀಡಿತ ಜಿಲ್ಲೆಯಾಗಿ ಘೋಷಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಜೊತೆಗೆ ರೈತರ ಕೃಷಿ ಸಾಲವನ್ನು ಸಂಪೂರ್ಣ ಮನ್ನಾ ಮಾಡುವ ಮೂಲಕ ರೈತರ ಬದುಕು ಉಳಿಸಲು ತುರ್ತು ಕ್ರಮ ಕೈಗೊಳ್ಳಬೇಕು” ಎಂದು ಸರ್ಕಾರವನ್ನು ಒತ್ತಾಯಿಸಿದರು.

ಮನವಿ ಸಲ್ಲಿಕೆ ಸಂದರ್ಭದಲ್ಲಿ ಸಂಘದ ಜಿಲ್ಲಾ ಸಂಚಾಲಕ ಪಾಂಡು ಹ್ಯಾಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಸಿದ್ದಾಪುರ, ತಾಳಿಕೋಟೆ ತಾಲೂಕು ಅಧ್ಯಕ್ಷ ಬಾಲಪ್ಪಗೌಡ ಲಿಂಗದಳ್ಳಿ, ತಾಲೂಕು ಉಪಾಧ್ಯಕ್ಷ ರಾಮನಗೌಡ ಹಾದಿಮನಿ, ಹೊನಕೇರಪ್ಪ ತೆಲಗಿ, ಬಸವನ ಬಾಗೇವಾಡಿ ತಾಲೂಕು ಉಪಾಧ್ಯಕ್ಷ ಗುರಲಿಗಪ್ಪ ಪಡಸಲಗಿ, ದಾವಲಸಾಬ ನದಾಫ್, ಸಂಗನಗೌಡ ಕೋಳೂರ, ಬಸನಗೌಡ ಬಿರಾದಾರ, ಅಶೋಕ್ ಉಪ್ಪಲದಿನ್ನಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ರೈತರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಣೇಶ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರ ಸಾವು: ಮೃತರ ಮನೆಗೆ ಜಿಲ್ಲಾಧಿಕಾರಿ ಭೇಟಿ

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟ...

ಬೀದರ್‌ | ವರ್ಷ ಕಳೆದರೂ ಸಿಗದ ರೈತ ಆತ್ಮಹತ್ಯೆ ಪರಿಹಾರ: ಸಂಕಷ್ಟದಲ್ಲಿ ಸಂತ್ರಸ್ತ ಕುಟುಂಬಗಳು!

ಬೆಳೆನಷ್ಟ, ಸಾಲದ ಶೂಲದಂತಹ ಸಂಕಷ್ಟಗಳಿಂದ ಕಂಗೆಟ್ಟು ರೈತ ಆತ್ಮಹತ್ಯೆಗೆ ಶರಣಾದರೆ, ಅವರ...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...