ವಿಜಯಪುರ | ಅಕ್ಷಯ ತೃತೀಯದಂದು ಬಾಲ್ಯವಿವಾಹ ತಡೆಗೆ ಜಿಲ್ಲಾಡಳಿತ ಕಟ್ಟೆಚ್ಚರ

Date:

ಅಕ್ಷಯ ತೃತೀಯ ಪ್ರಯುಕ್ತ ಏಪ್ರಿಲ್‌ 20ರಂದು ವಿಜಯಪುರ ಜಿಲ್ಲೆಯಲ್ಲಿ ನಡೆಯಲಿರುವ ಸಾಮೂಹಿಕ ಹಾಗೂ ವೈಯಕ್ತಿಕ ವಿವಾಹ ಕಾರ್ಯಕ್ರಮದಲ್ಲಿ ಬಾಲ್ಯವಿವಾಹಕ್ಕೆ ಆಸ್ಪದ ಕೊಡದಂತೆ, ಕಾನೂನು ಉಲ್ಲಂಘಿಸಿ ಬಾಲ್ಯವಿವಾಹ ನಡೆಸಿದರೆ ಬಾಲ್ಯವಿವಾಹ ನಿಷೇಧ ಕಾಯ್ದೆ-2006ರ ಅನ್ವಯ ಶಿಕ್ಷೆ ವಿಧಿಸಲಾಗುತ್ತದೆ ಎಂದು ಜಿಲ್ಲಾಡಳಿತ ಸಾರ್ವಜನಿಕರಿಗೆ ಕಟ್ಟೆಚ್ಚರ ನೀಡಿದೆ.

- Advertisement -

“ಬಾಲ್ಯವಿವಾಹ ನಿಯಂತ್ರಿಸುವ ಸಲುವಾಗಿ ಜಿಲ್ಲೆಯ ಎಲ್ಲ ದೇವಸ್ಥಾನಗಳು, ಕಲ್ಯಾಣ ಮಂಟಪಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಲ್ಲಿ ಬಾಲ್ಯವಿವಾಹ ನಿಷೇಧ ಎಂಬ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕು. ಬಾಲ್ಯ ವಿವಾಹವನ್ನು ನಡೆಸುವ, ನಿರ್ದೇಶಿಸುವ ಅಥವಾ ಪ್ರಚೋದಿಸುವ ಎಲ್ಲರೂ ಕಾನೂನಿನ ಪ್ರಕಾರ ಸಮಾನ ಹೊಣೆಗಾರರಾಗುತ್ತಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ವಿವಾಹ ನಡೆಸಿಕೊಡುವ ಪುರೋಹಿತರು, ವಿವಾಹದಲ್ಲಿ ಪಾಲ್ಗೊಳ್ಳುವ ಸಂಬಂಧಿಕರು, ಸಾಮೂಹಿಕ ವಿವಾಹವನ್ನು ಆಯೋಜಿಸಿದವರು, ವಧು-ವರರ ಪೋಷಕರು ಸೇರಿದಂತೆ ಈ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲರೂ ಬಾಲ್ಯವಿವಾಹ ನಿಷೇಧ ಕಾಯ್ದೆಯ ಚೌಕಟ್ಟಿನಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ. ಈ ಸಂಬಂಧ ಬೆಂಗಳೂರಿನ ಉಚ್ಚ ನ್ಯಾಯಾಲಯ ಕ್ರಿಮಿನಲ್ ಪಿಟಿಷನ್ ಸಂಖ್ಯೆ 1605/2026ರಲ್ಲಿ ಸ್ಪಷ್ಟ ಆದೇಶ ಹೊರಡಿಸಿದೆ. ಜಿಲ್ಲಾದ್ಯಂತ ವಿವಿಧ ಇಲಾಖೆಗಳಲ್ಲಿನ ಬಾಲ್ಯವಿವಾಹ ನಿಷೇಧ ಅಧಿಕಾರಿಗಳು ತೀವ್ರ ನಿಗಾ ವಹಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ>ವಿಜಯಪುರ | ಸರ್ವ ಜನಾಂಗದ ಸಮಾನತೆಗೆ ಶ್ರಮಿಸಿದವರು ಅಂಬೇಡ್ಕರ್: ಡಾ.ಬಾಬುರಾಜೇಂದ್ರ ನಾಯಕ್

ಬಾಲ್ಯವಿವಾಹ ನಡೆಯುತ್ತಿರುವ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ದೊರೆತಲ್ಲಿ ಕೂಡಲೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಅಥವಾ ತುರ್ತು ಸೇವೆ 112ಕ್ಕೆ ಕರೆ ಮಾಡುವಂತೆ, ಇಲ್ಲವೇ ಹತ್ತಿರದ ಪೊಲೀಸ್ ಠಾಣೆ ಅಥವಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸುವಂತೆ ಮನವಿ ಮಾಡಲಾಗಿದೆ.

ಮಾಹಿತಿ ನೀಡಿದವರ ಹೆಸರನ್ನು ಬಹಿರಂಗಪಡಿಸಿದೆ ಗೌಪ್ಯವಾಗಿಡಲಾಗುತ್ತದೆ ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...