ವಿಜಯಪುರ | ಸ್ಥಳೀಯ ಸಂಸ್ಥೆಗಳ ಚುನಾವಣೆ ಶೀಘ್ರ ನಡೆಸಿ: ಗ್ರಾಮ ಸ್ವರಾಜ್ಯ ಕರ್ನಾಟಕ ಆಗ್ರಹ

Date:

ಕರ್ನಾಟಕದಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನು ಶೀಘ್ರವಾಗಿ ನಡೆಸಿ, ಸ್ಥಳೀಯ ಸ್ವರಾಜ್ಯ ಸಂಸ್ಥೆಗಳಿಗೆ ಚುನಾಯಿತ ಪ್ರತಿನಿಧಿಗಳ ಮೂಲಕ ಆಡಳಿತವನ್ನು ಪುನಃ ಸ್ಥಾಪಿಸಬೇಕು ಎಂದು ವಿಜಯಪುರದ ಪ್ರದೀಪ್ ಎಚ್. ಪಾಟೀಲ್ (ನಾಗರದಿನ್ನಿ) ರಾಜ್ಯ ಉಪಾಧ್ಯಕ್ಷರು, ಗ್ರಾಮ ಸ್ವರಾಜ್ಯ ಕರ್ನಾಟಕ ಹೇಳಿದರು.

- Advertisement -

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,ಅಧಿಕಾರವು ಕೇವಲ ಶಾಸಕರ ಕಚೇರಿ ಅಥವಾ ವಿಧಾನಸಭಾ ಮಟ್ಟದಲ್ಲಿ ಕೇಂದ್ರೀಕೃತವಾಗದೆ, ಸಂವಿಧಾನದ ಆಶಯದಂತೆ ಜನರ ಕೈಗೆ ತಲುಪಬೇಕು. ಅಧಿಕಾರ ವಿಕೇಂದ್ರೀಕರಣವೇ ಪ್ರಜಾಪ್ರಭುತ್ವದ ಬಲವಾಗಿದ್ದು, ಗ್ರಾಮಸಭೆ ಹಾಗೂ ಪಂಚಾಯಿತಿ ಮಟ್ಟದಲ್ಲಿ ಜನರ ನೇರ ಭಾಗವಹಿಸುವಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಸಂಘಟನೆ ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಒಂದು ಕಾಲದಲ್ಲಿ ತಾಲೂಕು ಬೋರ್ಡ್ ಮತ್ತು ಜಿಲ್ಲಾ ಪರಿಷತ್‌ಗಳಂತಹ ಸ್ಥಳೀಯ ಸಂಸ್ಥೆಗಳಲ್ಲಿ ಜನಪ್ರತಿನಿಧಿಗಳಾಗಿ ಸೇವೆ ಸಲ್ಲಿಸಿದವರು ತಳಮಟ್ಟದ ಪ್ರಜಾಪ್ರಭುತ್ವದ ಮಹತ್ವವನ್ನು ಅರಿತಿರಬೇಕು. ದೇಶದ ಪ್ರಜಾಪ್ರಭುತ್ವದ ಇತಿಹಾಸದಲ್ಲಿನ ತುರ್ತು ಪರಿಸ್ಥಿತಿಯ ಅನುಭವವು ಜನರ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ಸಂಸ್ಥೆಗಳು ದುರ್ಬಲವಾಗದಂತೆ ಎಚ್ಚರ ವಹಿಸುವ ಅಗತ್ಯವನ್ನು ನಮಗೆ ಕಲಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.

ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಆಶಯವು ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತಲುಪಿಸುವುದಾಗಿತ್ತು. ಡಾ. ಬಿ.ಆರ್. ಅಂಬೇಡ್ಕರ್ ಅವರು ರಾಜಕೀಯ ಅಧಿಕಾರವು ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ ಎಂಬುದನ್ನು ಒತ್ತಿ ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ನಿರಂತರವಾಗಿ ಮುಂದೂಡಲ್ಪಡುತ್ತಿದ್ದರೆ, ಅದರ ಕಾರಣಗಳನ್ನು ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗವು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಗ್ರಾಮ, ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳಲ್ಲಿ ಹೊಸ ನಾಯಕತ್ವ ಬೆಳೆಯಲು, ಯುವಜನರು ಸಾರ್ವಜನಿಕ ಸೇವೆಗೆ ಬರಲು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ರಾಜಕೀಯ ಭಾಗವಹಿಸುವಿಕೆ ಹೆಚ್ಚಲು ಸ್ಥಳೀಯ ಚುನಾವಣೆಗಳು ಮಹತ್ವದ ವೇದಿಕೆಯಾಗಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಯಾವುದೇ ಒಂದು ಪಕ್ಷ ಅಥವಾ ವ್ಯಕ್ತಿಯ ರಾಜಕೀಯ ಕಾರ್ಯಕ್ರಮವಲ್ಲ; ಅವು ಸಂವಿಧಾನಬದ್ಧ ಪ್ರಜಾಪ್ರಭುತ್ವದ ಪ್ರಕ್ರಿಯೆ ಎಂಬುದನ್ನು ಎಲ್ಲ ರಾಜಕೀಯ ಪಕ್ಷಗಳು ಹಾಗೂ ಜನಪ್ರತಿನಿಧಿಗಳು ಗಮನಿಸಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ತಿಳಿಸಿದರು.

“ಗ್ರಾಮಗಳ ಅಭಿವೃದ್ಧಿಯಾದಾಗ ಮಾತ್ರ ದೇಶದ ಅಭಿವೃದ್ಧಿ” ಎಂಬ ಆಶಯದೊಂದಿಗೆ, ಸ್ಥಳೀಯ ಸರ್ಕಾರಗಳ ಚುನಾವಣೆಗಳು ಕೇವಲ ಪ್ರತಿನಿಧಿಗಳ ಆಯ್ಕೆಯ ಪ್ರಕ್ರಿಯೆಯಲ್ಲ. ಜನರು ತಮ್ಮ ಗ್ರಾಮ, ಅಭಿವೃದ್ಧಿ ಹಾಗೂ ಆಡಳಿತದಲ್ಲಿ ನೇರವಾಗಿ ಪಾಲುದಾರರಾಗುವ ಪ್ರಜಾಪ್ರಭುತ್ವದ ಪ್ರಕ್ರಿಯೆಯಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಘಟನೆಗಳು, ಯುವಜನರು, ಮಹಿಳೆಯರು ಹಾಗೂ ನಾಗರಿಕರು ಸಂವಿಧಾನಬದ್ಧ ಸ್ಥಳೀಯ ಸ್ವರಾಜ್ಯ ವ್ಯವಸ್ಥೆಯನ್ನು ಬಲಪಡಿಸುವ ಕುರಿತು ಶಾಂತಿಯುತ ಹಾಗೂ ಪ್ರಜಾಸಾತ್ಮಕ ಸಾರ್ವಜನಿಕ ಚರ್ಚೆ ನಡೆಸಬೇಕು ಎಂದು ಗ್ರಾಮ ಸ್ವರಾಜ್ಯ ಕರ್ನಾಟಕ ಮನವಿ ಮಾಡುದರು.

“ಸರ್ಕಾರಕ್ಕಿಂತ ಸಂವಿಧಾನ ದೊಡ್ಡದು; ಪಾಳೇಗಾರಿಕೆಗಿಂತ ಪ್ರಜಾಪ್ರಭುತ್ವ ದೊಡ್ಡದು; ಗ್ರಾಮ ಪಂಚಾಯಿತಿಗಳು ಗ್ರಾಮ ಸರ್ಕಾರ” ಎಂಬ ಆಶಯದೊಂದಿಗೆ ಸ್ಥಳೀಯ ಸ್ವರಾಜ್ಯ ವ್ಯವಸ್ಥೆಯನ್ನು ಬಲಪಡಿಸುವಂತೆ ಸಂಘಟನೆ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ECINetನಲ್ಲಿ ಅಧಿಕಾರ ಕೇಂದ್ರೀಕರಣದ ಆರೋಪ; ಕ್ಯಾಬಿನೆಟ್‌ ಕಾರ್ಯದರ್ಶಿಗೆ ಚುನಾವಣಾ ಆಯುಕ್ತರ ದೂರು

ಚುನಾವಣಾ ಆಯೋಗದ ಮತದಾರರ ಪಟ್ಟಿ ನಿರ್ವಹಣಾ ಸಾಫ್ಟ್‌ವೇರ್‌ ವ್ಯವಸ್ಥೆಯ ಕಾರ್ಯವೈಖರಿ ಹಾಗೂ...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ...

2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಸಜ್ಜು; ಎಸ್‌ಪಿ ‘ಪಿಡಿಎ ರಥಯಾತ್ರೆ’ ಶುರು

ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಾರ್ಟಿ (ಎಸ್‌ಪಿ) ತನ್ನ ಪ್ರಚಾರ...

ಚಿಂತಾಮಣಿ | ಪಿಎಲ್‌ಡಿ ಮತ್ತು ಡಿಸಿಸಿ ಬ್ಯಾಂಕ್‌ಗಳ ಪುನಶ್ಚೇತನದಿಂದ ರೈತರಿಗೆ ಹೆಚ್ಚಿನ ಅನುಕೂಲ

ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ 2025-26 ನೇ...