ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಆಕ್ಸ್‌ಫರ್ಡ್ ಶಾಲೆ ವಿದ್ಯಾರ್ಥಿನಿ ಸೌಜನ್ಯ ಬಸವರಾಜ್ ಕಂದಕೂರ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಇಂಗ್ಲಿಷ್ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೌಜನ್ಯ ಅವರು 625ಕ್ಕೆ 625 ಅಂಕಗಳನ್ನು ಪಡೆದು ಅಪರೂಪದ ಸಾಧನೆ ಮಾಡಿದ್ದಾರೆ. ಅವರ ಈ ಅತ್ಯುತ್ತಮ ಫಲಿತಾಂಶದಿಂದ ಕುಟುಂಬದವರಷ್ಟೇ ಅಲ್ಲದೆ, ಶಾಲೆಯ ಶಿಕ್ಷಕ ವೃಂದ ಹಾಗೂ ಆಡಳಿತ ಮಂಡಳಿಯೂ ಹರ್ಷ ವ್ಯಕ್ತಪಡಿಸಿದೆ.
ಇದನ್ನೂ ಓದಿದ್ದೀರಾ? ಎಸ್ಸೆಸ್ಸೆಲ್ಸಿ ಫಲಿತಾಂಶ | ಕಲಬುರಗಿ ಜಿಲ್ಲೆಗೆ ಕೊನೆ ಸ್ಥಾನ ಭದ್ರ : ಶೇ 85ರಷ್ಟು ಫಲಿತಾಂಶ
ವಿದ್ಯಾರ್ಥಿನಿಯ ಶ್ರಮ, ನಿರಂತರ ಅಭ್ಯಾಸ ಹಾಗೂ ಶಿಕ್ಷಕರ ಮಾರ್ಗದರ್ಶನವೇ ಈ ಸಾಧನೆಗೆ ಕಾರಣವೆಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ. ಸೌಜನ್ಯ ಅವರ ಸಾಧನೆ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸಾಧನೆ ಮೂಲಕ ವಿಜಯಪುರ ಜಿಲ್ಲೆಗೆ ಹೆಮ್ಮೆ ತಂದಿರುವ ಸೌಜನ್ಯ ಅವರಿಗೆ ಎಲ್ಲೆಡೆಯಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.





