ಪಂಚ ರಾಜ್ಯಗಳ ವಿಧಾನಸಭೆಯ ಮತ ಎಣಿಕೆ ಆರಂಭಗೊಂಡಿದ್ದು ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯ ಆರಂಭಿಕ ಸುತ್ತಿನಲ್ಲಿ ಟಿಎಂಸಿ ಹಾಗೂ ಬಿಜೆಪಿ ತಲಾ 105 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ.
ಹಾಗೆಯೇ ತಮಿಳುನಾಡಿನಲ್ಲಿ ಆಡಳಿತರೂಢ ಡಿಎಂಕೆ 67 ಕ್ಷೇತ್ರದಲ್ಲಿ ಮುನ್ನಡೆಯಲ್ಲಿದ್ದರೆ, ಟಿವಿಕೆ 26, ಎಐಡಿಎಂಕೆ 17 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ಕೇರಳದಲ್ಲಿ ಕೂಡ ಆಡಳಿತರೂಢ ಎಲ್‌ಡಿಎಫ್ ಹಾಗೂ ಕಾಂಗ್ರೆಸ್ ನೇತೃತ್ವದ ಯುಡಿಎಫ್ 68 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ.
ಆಸ್ಸಾಂನಲ್ಲಿ 67 ಕ್ಷೇತ್ರಗಳ ಮುನ್ನಡೆಯಲ್ಲಿದ್ದರೆ ವಿಪಕ್ಷ ಕಾಂಗ್ರೆಸ್ 9 ಕ್ಷೇತ್ರಗಳಲ್ಲಿ ಮುಂದಿದೆ. ಕೇಂದ್ರಡಳಿತ ಪ್ರದೇಶ ಪುದುಚೇರಿಯಲ್ಲಿ ಬಿಜೆಪಿ 22, ಕಾಂಗ್ರೆಸ್ 8 ಕ್ಷೇತ್ರಗಳಲ್ಲಿ ಮುಂದಿದೆ.




