SIR ಪರಿಷ್ಕರಣೆ: 12 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 6.08 ಕೋಟಿ ಮತದಾರರ ಕಡಿತ

Date:

ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ ಬಳಿಕ ದೇಶದ ಒಂಬತ್ತು ರಾಜ್ಯಗಳು ಹಾಗೂ ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 6.08 ಕೋಟಿಗೂ ಅಧಿಕ ಮತದಾರರ ಹೆಸರುಗಳು ಮತದಾರರ ಪಟ್ಟಿಯಿಂದ ಕಡಿತಗೊಂಡಿವೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

- Advertisement -

​ಉತ್ತರ ಪ್ರದೇಶದಲ್ಲಿ ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗುವುದರೊಂದಿಗೆ ಎಸ್‌ಐಆರ್‌ನ ಎರಡನೇ ಹಂತದ ಪರಿಷ್ಕರಣಾ ಕಾರ್ಯ ಶುಕ್ರವಾರ ಅಧಿಕೃತವಾಗಿ ಮುಕ್ತಾಯಗೊಂಡಿದೆ. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ತಮಿಳುನಾಡು, ರಾಜಸ್ಥಾನ, ಛತ್ತೀಸ್‌ಗಢ, ಕೇರಳ, ಗುಜರಾತ್, ಮಧ್ಯಪ್ರದೇಶ, ಗೋವಾ ಹಾಗೂ ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ, ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದ ಅಂತಿಮ ಮತದಾರರ ಪಟ್ಟಿಗಳನ್ನು ಪ್ರಕಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸಂಬಂಧಪಟ್ಟ ರಾಜ್ಯಗಳ ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಕೇಂದ್ರ ಚುನಾವಣಾ ಆಯೋಗ ಹಂಚಿಕೊಂಡಿರುವ ದತ್ತಾಂಶಗಳ ಪ್ರಕಾರ, ಕಳೆದ ವರ್ಷ ಅಕ್ಟೋಬರ್ 27ರಂದು ಎಸ್‌ಐಆರ್ ಪ್ರಕ್ರಿಯೆ ಘೋಷಣೆಯಾದಾಗ ಈ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಟ್ಟು 51 ಕೋಟಿ ಮತದಾರರಿದ್ದರು. ಆದರೆ, ಪರಿಷ್ಕರಣೆಯ ನಂತರ ಪ್ರಸ್ತುತ ಈ ಸಂಖ್ಯೆ 44.92 ಕೋಟಿಗೆ ಇಳಿಕೆಯಾಗಿದೆ. ಅಂದರೆ ಬರೋಬ್ಬರಿ 6.08 ಕೋಟಿ ಮತದಾರರು ಪಟ್ಟಿಯಿಂದ ಕೈಬಿಡಲ್ಪಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಸಾಮ್ರಾಜ್ಯಶಾಹಿಯ ಅಟ್ಟಹಾಸಕ್ಕೆ ಪ್ರತಿರೋಧದ ಕಿಚ್ಚು: ಅಮೆರಿಕ-ಇಸ್ರೇಲ್ ದಬ್ಬಾಳಿಕೆಯ ವಿರುದ್ಧ ಸಿಡಿದೆದ್ದ ಲೆಬನಾನ್

ಚುನಾವಣಾ ಆಯೋಗವನ್ನು ಸದಾ ಸುದ್ದಿಯಲ್ಲಿರುವಂತೆ ಮಾಡಿದ ಈ ಪ್ರಕ್ರಿಯೆಯು ಬಿಹಾರದಲ್ಲಿ ಈ ಹಿಂದೆಯೇ ಮುಕ್ತಾಯವಾಗಿತ್ತು. ಇದೀಗ 51 ಕೋಟಿ ಮತದಾರರಿದ್ದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಎರಡನೇ ಹಂತದ ಪ್ರಕ್ರಿಯೆ ಪೂರ್ಣಗೊಂಡಿದೆ. ಉಳಿದ 17 ರಾಜ್ಯಗಳು ಹಾಗೂ 5 ಕೇಂದ್ರಾಡಳಿತ ಪ್ರದೇಶಗಳಲ್ಲಿರುವ ಸುಮಾರು 40 ಕೋಟಿ ಮತದಾರರ ಪರಿಷ್ಕರಣೆ ಇನ್ನಷ್ಟೇ ನಡೆಯಬೇಕಿದೆ. ಈ ತಿಂಗಳು ನಡೆಯಲಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಮುಕ್ತಾಯಗೊಂಡ ಬಳಿಕ ಅಲ್ಲಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆಯಿದೆ. ಅಸ್ಸಾಂನಲ್ಲಿ ಎಸ್‌ಐಆರ್ ಬದಲಿಗೆ ‘ವಿಶೇಷ ಪರಿಷ್ಕರಣೆ’ಯನ್ನು ಕೈಗೊಂಡು ಫೆಬ್ರವರಿ 10ರಂದೇ ಪೂರ್ಣಗೊಳಿಸಲಾಗಿದೆ.

ವಿವಿಧ ಕಾರಣಗಳಿಂದಾಗಿ ಈ 9 ರಾಜ್ಯಗಳು ಹಾಗೂ 3 ಕೇಂದ್ರಾಡಳಿತ ಪ್ರದೇಶಗಳ ಎಸ್‌ಐಆರ್ ವೇಳಾಪಟ್ಟಿಯಲ್ಲಿ ಪದೇ ಪದೇ ಬದಲಾವಣೆಗಳನ್ನು ಮಾಡಲಾಗಿತ್ತು. ಪ್ರಕ್ರಿಯೆಯುದ್ದಕ್ಕೂ ಆಕ್ಷೇಪಗಳು ವ್ಯಕ್ತವಾಗಿದ್ದು, ಬಿಹಾರದಂತೆಯೇ ತಮಿಳುನಾಡು ಹಾಗೂ ಪಶ್ಚಿಮ ಬಂಗಾಳದಲ್ಲಿ ಕೈಗೊಂಡಿರುವ ಪರಿಷ್ಕರಣಾ ಪ್ರಕ್ರಿಯೆಯನ್ನು ಪ್ರಶ್ನಿಸಿ ರಾಜಕೀಯ ಪಕ್ಷಗಳು ಸುಪ್ರೀಂ ಕೋರ್ಟ್ ಮೆಟ್ಟಿಲೇರಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...