ಹವಾಮಾನ ವರದಿ | ರಾಜ್ಯದಲ್ಲಿ ʼಹೀಟ್‌ ವೇವ್‌ʼ ಜೊತೆ ಭಾರಿ ಮಳೆಯ ಎಚ್ಚರಿಕೆ ಕೊಟ್ಟ IMD

Date:

ರಾಜ್ಯದಲ್ಲಿ ಸುಡುವ ಬಿಸಿಲಿನ ಬೇಗೆ ಜೋರಾಗಿದೆ. ಈಗಾಗಲೇ ʼಹೀಟ್‌ ವೇವ್‌ʼ (ಬಿಸಿಗಾಳಿ) ಆತಂಕದಲ್ಲಿರುವ ಜನತೆಗೆ ರಾಜ್ಯದಲ್ಲಿ ಅಲ್ಲಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

- Advertisement -

ಇಂದು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ತೇವಾಂಶದ ವಾತಾವರಣ ಇರುತ್ತದೆ. ಹಾಗಿದ್ದಾಗ್ಯೂ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗಲಿದೆ. ಇನ್ನು ಬೀದರ್‌, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಬಿಸಿಗಾಳಿಯ ವಾತಾವರಣ ಇರಲಿದ್ದು, ಬೆಳಗಾವಿ ಜಿಲ್ಲೆಯ ಒಂದೆರಡು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗದಗ, ಧಾರವಾಡ, ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಸಿಕ್ಕಾಪಟ್ಟೆ ಬಿಸಿಲು ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಬಿರುಗಾಳಿ- ಗುಡುಗು ಸಹಿತ ಹಗುರ ಮಳೆಯಾಗಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ಬಿಸಿಲಿಗೂ ಕುಗ್ಗದೆ ಕಬ್ಬಿನ ಬೆಲೆಗಾಗಿ ಮುಂದುವರೆದ...

ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕು, ಸಕ್ಕರೆಗೆ ಪ್ರತಿ ಕೆ.ಜಿ.ಗೆ ₹60 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕು ಹಾಗೂ ಸ್ವಾಮಿನಾಥನ್‌ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ...

ಈ ದಿನ ಕವಿತೆ | ನನ್ನವ್ವನ ನೋಟ್ ಪುಸ್ತಕ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಗುಜರಾತಿನ ಕವಿ, ಕಲಾವಿದರಾದ ಜಯಂತ್ ಪರ್ಮಾರ್ ಅವರ ಒಂದು ಉರ್ದು ಕವನದ ಇಂಗ್ಲಿಷ್ ಅನುವಾದವನ್ನು ಕನ್ನಡಕ್ಕೆ ತಂದಿದ್ದಾರೆ ಹಿರಿಯ ಅನುವಾದಕಿ ಸಿ ಎಚ್‌ ಭಾಗ್ಯ ಬೇವಿನ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ...

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ ಬಿಜೆಪಿ ಪಕ್ಷದ ಶಾಸಕರು ಮನವೊಲಿಸಿ ದೆಹಲಿಯಲ್ಲಿ ಸಭೆ ಮಾಡುವುದಾಗಿ ತಿಳಿಸಿದ್ದರು. ಆದರೆ ದೆಹಲಿಯಲ್ಲಿ ರೈತ ಮುಖಂಡರು ಮತ್ತು ಕೇಂದ್ರ ಸಚಿವರ...

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಏಪ್ರಿಲ್ 21 ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಬಿರುಗಾಳಿ (ಗಂಟೆಗೆ 30-40 ಕಿ.ಮೀ ವೇಗ) ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನು ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಬಿಸಿಯಾದ ತೇವಾಂಶ ಭರಿತ (humidity) ವಾತಾವರಣ ಮುಂದುವರಿಯಲಿದ್ದು, ಈ ಜಿಲ್ಲೆಗಳಿಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಳೆಯ ಮುನ್ಸೂಚನೆ ಇದ್ದರೂ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪ ಕಡಿಮೆಯಾಗುವುದಿಲ್ಲ. ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಗದಗ, ಕೊಪ್ಪಳ, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳ ಕಾಲ ಶಾಖದ ಅಲೆ (Heat Wave) ಮುಂದುವರಿಯಲಿದೆ. ಕಲಬುರ್ಗಿಯಲ್ಲಿ ಈಗಾಗಲೇ ತಾಪಮಾನ 44°C ದಾಟಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ.

ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37°C ಆಸುಪಾಸಿನಲ್ಲಿದ್ದು, ಸಂಜೆ ವೇಳೆ ಮೋಡಕವಿದ ವಾತಾವರಣ ಇರಲಿದೆ. ನಗರದ ಕೆಲವು ಭಾಗಗಳಲ್ಲಿ ಹಗುರವಾದ ತುಂತುರು ಮಳೆಯ ನಿರೀಕ್ಷೆಯಿದ್ದರೂ, ಬಿಸಿಲಿನ ಬೇಗೆಯಿಂದ ಸಂಪೂರ್ಣ ಮುಕ್ತಿ ಸದ್ಯಕ್ಕಿಲ್ಲ ಎಂದು IMD ವರದಿ ಆಧರಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಎಚ್ಚರಿಕೆ ನೀಡಿದೆ.

ಬಿಸಿಲಿನಲ್ಲಿ ಕೆಲಸ ಮಾಡುವವರು ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ನೇರ ಸೂರ್ಯನ ಬೆಳಕಿಗೆ ಒಡ್ಡಿಕೊಳ್ಳುವುದನ್ನು ತಪ್ಪಿಸಿ ಮತ್ತು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದಿರಬೇಕು ಎಂದೂ ಇಲಾಖೆ ಸೂಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಮೆನ್ ರಾಷ್ಟ್ರಪತಿ ಭವನದ ಮೇಲೆ ಹೂತಿಗಳ ಕ್ಷಿಪಣಿ ದಾಳಿ: ಐವರ ಸಾವು

ಯಮೆನ್‌ನ ದಕ್ಷಿಣ ಭಾಗದ ಪ್ರಮುಖ ನಗರವಾದ ಅದನ್‌ನಲ್ಲಿರುವ ಅಲ್-ಮಾಶಿಕ್ ರಾಷ್ಟ್ರಪತಿ ಭವನದ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಶಿವಮೊಗ್ಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ರೈತ ಸಂಘ ಬೆಂಬಲ

ಶಿವಮೊಗ್ಗದ ವಕೀಲರಭವನದ ಹತ್ತಿರ ವಕೀಲರ ಸಂಘದಿಂದ ನಡೆಸುತ್ತಿರುವ ಶಿವಮೊಗ್ಗಕ್ಕೆ ಹೈಕೋರ್ಟ್ ಪೀಠ...