ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆ

Date:

ಇಂದು ಕರ್ನಾಟಕದ 14 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ. ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗೃತರಾಗಿರುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚಿಸಿದೆ.

- Advertisement -

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸೂಚನೆ ದೊರೆತಿದೆ. ಉತ್ತರ ಕರ್ನಾಟಕದಲ್ಲಿ ಎಂದಿಗಿಂತ ಹೆಚ್ಚಿನ ತಾಪಮಾನ ದಾಖಲಾಗಲಿದ್ದು, ಧಾರವಾಡ, ಹಾವೇರಿ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಕರಾವಳಿ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರೆಯಲಿದೆ. ಕರಾವಳಿ ಭಾಗದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮೀರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ಸುತ್ತಲೇ ಇರಲಿದ್ದು, ಮೋಡ ಕವಿದ ವಾತಾವರಣದೊಂದಿಗೆ ಸಂಜೆ ಅಥವಾ ರಾತ್ರಿ ವೇಳೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಅಂದಾಜಿಸಿದೆ.



eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ ಅಮಾನವೀಯ ಕೊಲೆಗಡುಕರ ಬೆಂಬಲಕ್ಕೆ ನಿಂತ ಸಂಘಪರಿವಾರ

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ ಬಿಗಿಯಾಗುತ್ತಿರುವ ಬಿಕ್ಕಟ್ಟು!

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು...

ಮೋದಿ ಜನ್ಮದಿನದ ನಾಟಕದಲ್ಲಿ ಅಭಿನಯಿಸಲು ನಕಾರ; ವಿದ್ಯಾರ್ಥಿಗೆ ‘ಅಂಕ ಕಡಿತ’ದ ಬೆದರಿಕೆ

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿರುವ ನಾಟಕದಲ್ಲಿ ಅಭಿನಯಿಸಲು ನಿರಾಕರಿಸಿದ ವಿದ್ಯಾರ್ಥಿಗಳಿಗೆ...