ಯಶವಂತಪುರ–ಶಿವಮೊಗ್ಗ ಎಕ್ಸ್‌ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

Date:

ದಸರಾ, ದೀಪಾವಳಿ ಹಬ್ಬಗಳ ಸಂದರ್ಭದಲ್ಲಿ ತಮ್ಮ ಕುಟುಂಬದೊಂದಿಗೆ ಹಬ್ಬ ಆಚರಿಸಲು ಊರುಗಳಿಗೆ ತೆರಳುವ ಮತ್ತು ಮರಳಿ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ, ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ರೈಲನ್ನು ತಾಳಗುಪ್ಪದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು ನೈಋತ್ಯ ರೈಲ್ವೇ ಆದೇಶ ಹೊರಡಿಸಿದೆ.

- Advertisement -

ಹಬ್ಬಗಳ ಸಂದರ್ಭದಲ್ಲಿ ರೈಲು ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ, ಪ್ರಯಾಣಿಕರಿಗೆ ಸುಗಮ ಹಾಗೂ ಅನುಕೂಲಕರ ರೈಲು ಸಂಪರ್ಕ ಕಲ್ಪಿಸುವುದು ಅಗತ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಈ ಹಿನ್ನೆಲೆಯಲ್ಲಿ, ಯಶವಂತಪುರ ಜಂಕ್ಷನ್ ಮತ್ತು ಶಿವಮೊಗ್ಗ ಟೌನ್ ನಡುವೆ ವಾರದಲ್ಲಿ ಮೂರು ದಿನ ಸಂಚರಿಸುವ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ತಾಳಗುಪ್ಪದವರೆಗೆ ವಿಸ್ತರಿಸಿರುವುದು ಸಾಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪ್ರಯಾಣಿಕರಿಗೆ ಅನುಕೂಲಕರವಾಗಲಿದೆ.ನೈಋತ್ಯ ರೈಲ್ವೆಯ ಪ್ರಧಾನ ಕಚೇರಿಯ ಆದೇಶದಂತೆ, ರೈಲು ಸಂಖ್ಯೆ 16581 (ಯಶವಂತಪುರ–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್) ಹಾಗೂ ರೈಲು ಸಂಖ್ಯೆ 16582 (ಶಿವಮೊಗ್ಗ ಟೌನ್–ಯಶವಂತಪುರ ಎಕ್ಸ್‌ಪ್ರೆಸ್) ರೈಲುಗಳನ್ನು ನಿಗದಿತ ದಿನಗಳಲ್ಲಿ ತಾಳಗುಪ್ಪದವರೆಗೆ ವಿಸ್ತರಿಸಲಾಗಿದೆ.

ರೈಲು ಸಂಚಾರದ ಪ್ರಮುಖ ವಿವರಗಳು :

  • ರೈಲು ಸಂಖ್ಯೆ 16581: ಯಶವಂತಪುರದಿಂದ ಹೊರಟು ಶಿವಮೊಗ್ಗ ಟೌನ್ ಬದಲಿಗೆ ತಾಳಗುಪ್ಪದವರೆಗೆ ಸಂಚರಿಸಲಿದೆ.
  • ರೈಲು ಸಂಖ್ಯೆ 16582: ತಾಳಗುಪ್ಪದಿಂದ ಹೊರಟು ಶಿವಮೊಗ್ಗ ಟೌನ್ ಮೂಲಕ ಯಶವಂತಪುರಕ್ಕೆ ಸಂಚರಿಸಲಿದೆ.

ಸಂಚಾರದ ದಿನಾಂಕಗಳು: ಅಕ್ಟೋಬರ್ 18, 20, 22, 25, 27 ಮತ್ತು 29 ಹಾಗೂ ನವೆಂಬರ್ 3, 5, 8, 10 ಮತ್ತು 12, 2026. ಒಟ್ಟು 11 ಟ್ರಿಪ್‌ಗಳಿಗೆ ಈ ವಿಸ್ತರಣೆ ಅನ್ವಯಿಸುತ್ತದೆ.• ತಾಳಗುಪ್ಪಕ್ಕೆ ಆಗಮನ: ರೈಲು ಸಂಖ್ಯೆ 16581 ಬೆಳಿಗ್ಗೆ 9.00 ಗಂಟೆಗೆ ತಾಳಗುಪ್ಪ ತಲುಪಲಿದೆ.

ತಾಳಗುಪ್ಪದಿಂದ ನಿರ್ಗಮನ:

ರೈಲು ಸಂಖ್ಯೆ 16582 ರಾತ್ರಿ 10.00 ಗಂಟೆಗೆ ತಾಳಗುಪ್ಪದಿಂದ ಹೊರಡಲಿದೆ.• ಶಿವಮೊಗ್ಗದಿಂದ ಯಶವಂತಪುರದವರಗೆ ಹಾಗೂ ಯಶವಂತಪುರದಿಂದ ಶಿವಮೊಗ್ಗದ ವರೆಗೆ ಈ ಹಿಂದೆ ಸಂಚರಿಸುತ್ತಿದ್ದ ವೇಳಾ ಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.

ಸಾಗರ ಭಾಗದ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲಈ ತಾತ್ಕಾಲಿಕ ವಿಸ್ತರಣೆಯಿಂದ ಶಿವಮೊಗ್ಗ, ಕೊನಗವಳ್ಳಿ, ಹಾರನಹಳ್ಳಿ, ಕುಂಸಿ, ಅರಸಾಳು, ಕೆಂಚನಾಲ, ಆನಂದಪುರಂ, ಅಡ್ಡೇರಿ, ಸಾಗರ ಹಾಗೂ ತಾಳಗುಪ್ಪದಲ್ಲಿ ರೈಲುಗಳ ನಿಲುಗಡೆ ಇದ್ದು, ಈ ಮಾರ್ಗದ ಪ್ರಯಾಣಿಕರಿಗೆ ಹೆಚ್ಚುವರಿ ರೈಲು ಸಂಪರ್ಕದ ಅನುಕೂಲ ದೊರೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

ಹಾವೇರಿ | ಸಿಡಿಲು ಬಡಿದು ರೈತ ಸಾವು

ಹೊಲದಲ್ಲಿ ಕೃಷಿ ಕೆಲಸ ಮಾಡುವ ಸಮಯದಲ್ಲಿ ಸಿಡಿಲು ಬಡಿದು ರೈತರೊಬ್ಬರು ಮೃತಪಟ್ಟಿರುವ...

ಬೀದರ್‌ | ಶೋಷಿತರಿಗೆ ಶರಣರ ಮಾನವೀಯ ಮೌಲ್ಯ ತಲುಪಿಸುವ ಗುರಿ : ಪ್ರಭುದೇವ ಸ್ವಾಮೀಜಿ

ಬಸವಾದಿ ಶರಣರ ವಚನಗಳು ಎಲ್ಲರ ನಡೆ-ನುಡಿಗೆ ದರ್ಪಣವಾಗಬೇಕು ಎಂದು ಲಿಂಗಾಯತ ಮಹಾ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...