ಉಡುಪಿ | ಕಾಂಗ್ರೆಸ್‌ ಅಭ್ಯರ್ಥಿ ಉದಯಶೆಟ್ಟಿ ವಿರುದ್ಧ ಚುನಾವಣಾಧಿಕಾರಿಗೆ ದೂರು

Date:

  • ಸುಳ್ಳು ಸುದ್ದಿ ಪ್ರಸಾರ ಮಾಡಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ
  • ಅವಾಚ್ಯ ಪದಗಳಿಂದ ನಿಂದಿಸಿ ಶಾಸಕರಿಗೆ ತೇಜೋವಧೆ ಆರೋಪ

ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಉದಯಶೆಟ್ಟಿ ಕುಮ್ಮಕ್ಕಿನಿಂದ ಅವರ ಕಾರ್ಯಕರ್ತರು ಪರಸ್ಪರ ದ್ವೇಷ ಭಾವನೆ, ವೈಯಕ್ತಿಕ ನಿಂದನೆ ಮಾಡಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾರ್ಕಳ ಬಿಜೆಪಿ ಅಧ್ಯಕ್ಷ ಮಹಾವೀರ ಹೆಗ್ಡೆ ಮೇ 3ರಂದು ಚುನಾವಣಾಧಿಕಾರಿಗೆ ದೂರು ನೀಡಿದ್ದಾರೆ.

- Advertisement -

“ಖಾಸಗಿ ಸುದ್ದಿ ವಾಹಿನಿಯೊಂದರ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರು ಉದಯ ಶೇಟ್ಟಿಯ ಕುಮ್ಮಕ್ಕಿನಿಂದ ವಿಡಿಯೋ ಹರಿಬಿಟ್ಟಿದ್ದಾರೆ. ಆ ವಿಡಿಯೋದಲ್ಲಿ ರಾಕೇಶ್‌ ಶೆಟ್ಟಿಯವರು ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಅವರ ವಿರುದ್ಧ ತುಳುವಿನಲ್ಲಿ ಅವಾಚ್ಯ ಪದಗಳಿಂದ ನಿಂದಿಸಿ ತೇಜೋವಧೆ ಮಾಡಿದ್ದಾರೆ. ಅಲ್ಲದೇ ವಾಹಿನಿಯ ಯುಟ್ಯೂಬ್‌ ಪ್ರೋಮೋದಲ್ಲಿ ‘ಬಿಜೆಪಿ ನಾಯಕರಿಗೆ ಮುಜುಗರ ತಂದ ವಿಡಿಯೋ ಪ್ರಕರಣ, ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಬೆಂಬಲಿಗನ ವಿಡಿಯೋ, ಶಾಸಕರ ರಾಸಲೀಲೆ’ ಎಂದೆಲ್ಲಾ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ” ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಈ ಸುದ್ದಿ ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆಯ ಸಾವು ಬಯಸಿದ ಬಿಜೆಪಿ ನಾಯಕ; ಮೋದಿ ಕ್ಷಮೆಗೆ ಕಾಂಗ್ರೆಸ್ ಆಗ್ರಹ

“ಈ ರೀತಿಯ ಸುಳ್ಳು ಸುದ್ದಿ ಪ್ರಸಾರ ಮಾಡಿರುವುದರಿಂದ ಕಾಂಗ್ರೆಸ್‌ ಅಭ್ಯರ್ಥಿ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಆದ್ದರಿಂದ ಅವರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...