ಕೊಪ್ಪಳ | ಕರ ಪತ್ರ, ಬ್ಯಾನರ್, ಪೋಸ್ಟರ್ ಮುದ್ರಿಸಲು ಚುನಾವಣಾಧಿಕಾರಿ ಅನುಮತಿ ಕಡ್ಡಾಯ

Date:

Advertisements
  • ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ
  • ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ

ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆ ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ ಮುದ್ರಿಸುವ ಮೊದಲು ಆಯಾ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಅವರ ಅನುಮತಿ ಪಡೆಯುವುದು ಕಡ್ಡಾಯ ಎಂದು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಎಂ ಸುಂದರೇಶಬಾಬು ಹೇಳಿದರು.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಕೊಪ್ಪಳ ಸೇರಿದಂತೆ ನಾನಾ ಕಡೆ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರ್‌ಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.

ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರ್‌ಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಒಂದು ಪ್ರತಿ ಮತ್ತು ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಆರ್‌ಓಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು.

Advertisements

ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ ಕಡಿ ಮಾತನಾಡಿ, ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ. ಕರಪತ್ರ, ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು. ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು. ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಜಾನುವಾರು ವ್ಯಾಪಾರಿಯ ಅನುಮಾನಾಸ್ಪದ ಸಾವು; ಪುನೀತ್ ಕೆರೆಹಳ್ಳಿ ಬಂಧನ

ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯ ಅನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಅಮಿನ್ ಅತ್ತಾರ ವಿವರಿಸಿದರು.

ಸಭೆಯಲ್ಲಿ ಕೊಪ್ಪಳ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ನಾನಾ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X