- ಅಂಗನವಾಡಿ ಕಾರ್ಯಕರ್ತೆಯರ ವೇತನ ₹15,000ಕ್ಕೆ ಹೆಚ್ಚಳ
- ಬೆಳಗಾವಿಯ ಖಾನಾಪುರದಲ್ಲಿ ಭರವಸೆ ನೀಡಿದ ಪ್ರಿಯಾಂಕ ಗಾಂಧಿ
ಆಶಾ, ಬಿಸಿಯೂಟ, ಮಿನಿ ಅಂಗನವಾಡಿ, ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಿಯಾಂಕ ಗಾಂಧಿ ರಾಜ್ಯದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಬೆಳಗಾವಿಯ ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಅವರು ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.
“ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ₹11,500 ದಿಂದ ₹15,000ಕ್ಕೆ, ಸಹಾಯಕಿಯರಿಗೆ ₹7,500 ದಿಂದ ₹10,000 ಕ್ಕೆ ಹೆಚ್ಚಿಸಲಾಗುವುದು” ಎಂದು ಪ್ರಿಯಾಂಕ ಗಾಂಧಿ ವಾದ್ರಾ ವಾಗ್ದಾನ ನೀಡಿದ್ದಾರೆ.
“ಆಶಾ ಕಾರ್ಯಕರ್ತೆಯರ ಗೌರವಧನವನ್ನು ಕಾಂಗ್ರೆಸ್ ₹5,000 ದಿಂದ ₹8,000ಕ್ಕೆ, ಬಿಸಿಯೂಟ ಕಾರ್ಯಕರ್ತೆಯರ ಗೌರವಧನವನ್ನು ₹3,700 ದಿಂದ ₹5,000ಕ್ಕೆ ಹೆಚ್ಚಿಸಲಿದೆ” ಎಂದಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ 50 ಅಭ್ಯರ್ಥಿಗಳ ಮೇಲೆ ಐಟಿ ದಾಳಿ ನಡೆಯಲಿದೆ: ಲಕ್ಷ್ಮಿ ಹೆಬ್ಬಾಳ್ಕರ್
ಜೀವನವಿಡಿ ಕೆಲಸ ಮಾಡಿ ನಿವೃತ್ತಿ ಹೊಂದಿದ ಅಥವಾ ಮೃತಪಟ್ಟ ಅಂಗನವಾಡಿ ಕಾರ್ಯಕರ್ತೆಯರಿಗೆ ವಿಶೇಷ ಪರಿಹಾರ ಧನ ಘೋಷಣೆ ಮಾಡಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರಿಗೆ ₹3 ಲಕ್ಷ, ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹2 ಲಕ್ಷ ವಿಶೇಷ ಪರಿಹಾರ ಧನ ನೀಡುವ ಭರವಸೆ ನೀಡಿದ್ದಾರೆ.