- ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಸಮಧಾನ ಸ್ಫೋಟ
- ಈಶ್ವರಪ್ಪ ಪುತ್ರನಿಗೆ ಟಿಕೆಟ್ ನೀಡುವಂತೆ ಆಗ್ರಹ್ರಿಸಿ ರಸ್ತೆ ತಡೆ
ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಮಂಗಳವಾರ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೆ ಶಿವಮೊಗ್ಗ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.
ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರ ನಿರ್ಧಾರಕ್ಕೆ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸೇರಿದಂತೆ 19 ಮಂದಿ ಬಿಜೆಪಿ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೊತೆಗೆ ನಾನಾ ಮೋರ್ಚಾಗಳ ಪದಾಧಿಕಾರಿಗಳು ರಾಜೀನಾಮೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ಬೆಂಗಳೂರಿಗೆ ತೆರಳಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ನಿರ್ಧಾರಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ
ಈಶ್ವರಪ್ಪ ಅಭಿಮಾನಿಗಳು ಬುಧವಾರ ಬಿಜೆಪಿ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ದೀನ ದಯಾಳ್ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು ಈಶ್ವರಪ್ಪ ಪುತ್ರ ಕಾಂತೇಶ್ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.