ಶಿವಮೊಗ್ಗ | ಪಾಲಿಕೆ ಮೇಯರ್-ಉಪಮೇಯರ್ ಸೇರಿ 19 ಮಂದಿ ಬಿಜೆಪಿ ಸದಸ್ಯರು ರಾಜೀನಾಮೆ

Date:

Advertisements
  • ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಲ್ಲಿ ಅಸಮಧಾನ ಸ್ಫೋಟ
  • ಈಶ್ವರಪ್ಪ ಪುತ್ರನಿಗೆ ಟಿಕೆಟ್‌ ನೀಡುವಂತೆ ಆಗ್ರಹ್ರಿಸಿ ರಸ್ತೆ ತಡೆ

ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅವರು ಮಂಗಳವಾರ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈ ಬೆನ್ನಲ್ಲೆ ಶಿವಮೊಗ್ಗ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅವರ ನಿರ್ಧಾರಕ್ಕೆ ಶಿವಮೊಗ್ಗ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು, ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಆಗ್ರಹಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸೇರಿದಂತೆ 19 ಮಂದಿ ಬಿಜೆಪಿ ಸದಸ್ಯರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಜೊತೆಗೆ ನಾನಾ ಮೋರ್ಚಾಗಳ ಪದಾಧಿಕಾರಿಗಳು ರಾಜೀನಾಮೆಗೆ ನಿರ್ಧರಿಸಿದ್ದಾರೆ. ಅಲ್ಲದೆ, ಬೆಂಗಳೂರಿಗೆ ತೆರಳಿ ಹಿರಿಯ ನಾಯಕ ಬಿ.ಎಸ್‌ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ನಿರ್ಧಾರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಮಗಳು ಬಿಜೆಪಿ ಸೇರಿದ್ದು ಎದೆಗೆ ಚೂರಿ ಹಾಕಿದಂಗಾಗಿದೆ: ಕಾಗೋಡು ತಿಮ್ಮಪ್ಪ ಬೇಸರ

ಈಶ್ವರಪ್ಪ ಅಭಿಮಾನಿಗಳು ಬುಧವಾರ ಬಿಜೆಪಿ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ದೀನ ದಯಾಳ್ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿರುವ ಕಾರ್ಯಕರ್ತರು ಈಶ್ವರಪ್ಪ ಪುತ್ರ ಕಾಂತೇಶ್​ಗೆ ಟಿಕೆಟ್ ನೀಡುವಂತೆ ಆಗ್ರಹಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನದ ಶಾಸಕನಾದ ಬೆಂಗಳೂರಿನ ಬಟ್ಟೆ ವ್ಯಾಪಾರಿ

ಬೆಂಗಳೂರಿನಲ್ಲಿ ವಾಸವಿರುವ ಬಟ್ಟೆ ವ್ಯಾಪಾರಿಯೊಬ್ಬರು ರಾಜಸ್ಥಾನ ರಾಜ್ಯದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ರಾಜಾಜಿನಗರದಲ್ಲಿ ವಾಸವಿರುವ...

ಮಿಜೋರಾಂ ಮತ ಎಣಿಕೆ: ಬಹುಮತದತ್ತ ಝೆಡ್‌ಪಿಎಂ

ಈಶಾನ್ಯ ರಾಜ್ಯ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು, ಒಟ್ಟು...

ಮಧ್ಯಪ್ರದೇಶ ಚುನಾವಣೆ | ಆಡಳಿತ ವಿರೋಧಿ ಅಲೆಯ ನಡುವೆಯೂ ಬಿಜೆಪಿ ಜಯಭೇರಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಉಗ್ರ ಹಿಂದುತ್ವ ಪ್ರತಿಪಾದಿಸಿದರೆ, ಕಾಂಗ್ರೆಸ್‌ನ ಕಮಲನಾಥ್ ಸಾಫ್ಟ್ ಹಿಂದುತ್ವದ...

ಛತ್ತೀಸ್‌ಗಡ: ಹಗರಣಗಳ ಆರೋಪಕ್ಕೆ ಸಿಲುಕಿ ಅಧಿಕಾರ ಕಳೆದುಕೊಂಡ ಕಾಂಗ್ರೆಸ್

ಛತ್ತೀಸ್‌ಗಢ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿ ರಾಜ್ಯದಲ್ಲಿ ಮತ್ತೆ ಅಧಿಕಾರ...

Download Eedina App Android / iOS

X