ಚುನಾವಣಾ ಪ್ರಚಾರಕ್ಕೆ ಕೇಜ್ರಿವಾಲ್ ಗೈರು; ಎಎಪಿ ಕಾರ್ಯಕರ್ತರಲ್ಲಿ ಕುಗ್ಗಿದೆಯಾ ಉತ್ಸಾಹ?

Date:

ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶರುವಾಗಿದೆ. ಎಲ್ಲ ಪಕ್ಷಗಳು ಅಂತಿಮ ಸುತ್ತಿನ ಪ್ರಚಾರಕ್ಕೆ ತಂತ್ರ ರೂಪಿಸುತ್ತಿವೆ. ಆದರೆ, ಈ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ತೋರಿಸಲು ಮುಂದಾಗಿದ್ದ ಆಮ್ ಆದ್ಮಿ ಪಕ್ಷ (ಎಎಪಿ) ಸದ್ದಿಲ್ಲದಂತಾಗಿದೆ. ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಪ್ರಚಾರಕ್ಕೆ ಗೈರುಹಾಜರಾಗಿದ್ದು, ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹವನ್ನು ಕುಗ್ಗಿಸಿದಂತೆ ಕಾಣುತ್ತಿದೆ.

- Advertisement -

ರಾಜ್ಯದಲ್ಲಿ ಚುನಾವಣೆ ಘೋಷಣೆಯಾದ ಬಳಿಕ ಎಲ್ಲ ಪಕ್ಷಗಳ ರಾಷ್ಟ್ರ ಮತ್ತು ಸ್ಥಳೀಯ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದರೆ, ಎಎಪಿ ನಾಯಕ ಮತ್ತು ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ರಾಜ್ಯಕ್ಕೆ ಒಮ್ಮೆಯಷ್ಟೆ ಭೇಟಿ ನೀಡಿದ್ದಾರೆ. ಅದೂ, ಮಾರ್ಚ್‌ ತಿಂಗಳಿನಲ್ಲಿ ದಾವಣಗೆರೆಯಲ್ಲಿ ನಡೆದ ಸಮಾವೇಶದಲ್ಲಿ ಭಾಗಿಯಾಗಿದ್ದರಷ್ಟೇ. ಎಎಪಿ ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದ ನಂತರ ಅದು ಎದುರಿಸುತ್ತಿರುವ ಮೊದಲ ಚುನಾವಣೆಯಿದು. ಆದರೂ, ಪಕ್ಷದ ನಾಯಕರು ರಾಜ್ಯದತ್ತ ಮುಖಮಾಡಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೇಜ್ರಿವಾಲ್ ದೆಹಲಿಯಲ್ಲಾಗುತ್ತಿರುವ ಬೆಳವಣಿಗೆಗಳಿಂದಾಗಿ ಅಲ್ಲಿಯೇ ಸಿಕ್ಕಿಕೊಂಡಿದ್ದಾರೆ ಎನ್ನಲಾಗಿದೆ. ಅವರ ಅನುಪಸ್ಥಿತಿಯು ರಾಜ್ಯದ ಎಎಪಿ ಕಾರ್ಯಕರ್ತರಲ್ಲಿ ಚುನಾವಣಾ ಸಡಗರವನ್ನು ಕುಗ್ಗಿಸಿದೆ. ರಾಜ್ಯ ನಾಯಕರು ತಮ್ಮ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸುವ, ಚುನಾವಣೆಯಲ್ಲಿ ಉತ್ಸುಕತೆಯಲ್ಲಿ ಕೆಲಸ ಮಾಡುವಂತೆ ಪ್ರೇರೇಪಿಸುವ ಕೆಲಸ ಮಾಡುತ್ತಿದ್ದಾರೆ. ಒಂದಷ್ಟು ಕ್ಷೇತ್ರಗಳನ್ನಾದರೂ ಗೆಲ್ಲಬೇಕು ಮತ್ತು ತಮ್ಮ ಪ್ರಭಾವವನ್ನು ವೃದ್ಧಿಸಬೇಕೆಂದು ಶ್ರಮಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಡಾ ಕೆ.ಸುಧಾಕರ್: ಅಪಾಯಕಾರಿ ರಾಜಕೀಯ ಶೈಲಿ

“ನಮ್ಮದು ಒಂದು ಸಣ್ಣ ಪಕ್ಷ. ದೆಹಲಿ ಎಎಪಿ ಸರ್ಕಾರದಲ್ಲಿ ಪ್ರಮುಖ ಖಾತೆಗಳನ್ನು ನೋಡಿಕೊಳ್ಳುತ್ತಿದ್ದ ಇಬ್ಬರು ಪ್ರಮುಖ ಮಂತ್ರಿಗಳು ಜೈಲಿನಲ್ಲಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ದೆಹಲಿಯಲ್ಲಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳುವುದು ಮತ್ತು ಅಲ್ಲಿಯ ಜನರು ನಿರಾಶೆಗೊಳ್ಳದಂತೆ ನೋಡಿಕೊಳ್ಳುವುದು ಕೇಜ್ರಿವಾಲ್ ಅವರ ಮೊದಲ ಆಧ್ಯತೆಯಾಗಿದೆ,” ಎಂದು ರಾಜ್ಯ ಎಎಪಿ ಸಂಚಾಲಕ ಪೃಥ್ವಿ ರೆಡ್ಡಿ ಹೇಳಿದ್ದಾರೆ.

“ಸಂಸದರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ ಮತ್ತು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ಇತರ ಎಎಪಿ ನಾಯಕರು ಪಕ್ಷದ ಪರವಾಗಿ ಪ್ರಚಾರ ಮಾಡುತ್ತಿದ್ದಾರೆ. ಕೇಜ್ರಿವಾಲ್ ಗೈರಾಗಿದ್ದರೂ, ಅವರ ತತ್ವ-ಆದರ್ಶಗಳು ನಮ್ಮೊಂದಿಗಿವೆ. ಹೀಗಾಗಿ, ಕಾರ್ಯಕರ್ತರು ಉತ್ಸಾಹದಿಂದಲೇ ಕೆಲಸ ಮಾಡುತ್ತಿದ್ದಾರೆ,” ಎಂದು ಪೃಥ್ವಿ ರೆಡ್ಡಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರ್ನಾಟಕದ ಮೇಲೆ ಬಿಜೆಪಿಯವರು ಮುಗಿಬಿದ್ದಿರುವ ಕಾರಣ ವಿವರಿಸಿದ ಸಿದ್ದರಾಮಯ್ಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...