ಕೊಪ್ಪಳ | ಗಂಗಾವತಿಯಲ್ಲಿ ಮತ ಬೇಟೆ ಆರಂಭಿಸಿದ ಎಎಪಿ ಮಹಿಳಾ ಮುಖಂಡರು

Date:

ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಹಳ್ಳಿಗಳಲ್ಲಿ ಪಕ್ಷದ ಮುಖಂಡರು ದೆಹಲಿ ಎಎಪಿ ಸರ್ಕಾರದ ಸಾಧನೆಗಳ ಕುರಿತು ಸಂವಾದ ಮತ್ತು ಚರ್ಚೆ ನಡೆಸುವ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದ್ದಾರೆ. ರಾಜ್ಯದಲ್ಲಿ ದೆಹಲಿ ಮಾದರಿ ಸರ್ಕಾರ ತರಲು ಎಎಪಿಗೆ ಮತ ನೀಡಬೇಕೆಂದು ಮನವಿ ಮಾಡುತ್ತಿದ್ದಾರೆ.

ದೆಹಲಿ ಸರ್ಕಾರದಲ್ಲಿ ಮಹಿಳೆಯರಿಗೆ ವಿಶೇಷವಾಗಿ ದೊರೆಯುವ ಸೌಲಭ್ಯಗಳು ಕರ್ನಾಟಕದಲ್ಲಿ ಮತ್ತು ಗಂಗಾವತಿಯಲ್ಲಿ ತಮಗೂ ಬೇಕು ಎಂದು ಆಶಯ ವ್ಯಕ್ತಪಡಿಸಿರುವ ಗ್ರಾಮಸ್ಥರು ಎಎಪಿಯನ್ನು ಬೆಂಬಲಿಸುವುದಾಗಿ ಹೇಳಿದ್ದಾರೆಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಲೋಕಾಯುಕ್ತ ದಾಳಿ | ಬಿಜೆಪಿ ಸೇರಿದ್ದ ನಿವೃತ್ತ ಅಧಿಕಾರಿ ಬಳಿ ಕೋಟಿ ಆಸ್ತಿ, ಆನೆ ದಂತ ಪತ್ತೆ

ಪಕ್ಷದ ಮಹಿಳಾ ಮುಖಂಡರಲ್ಲಿ ರೇಣುಕಾ ಬಸುರಾಜ್, ಜ್ಯೋತಿ ಲಕ್ಷ್ಮಿ ಸಜ್ಜಿ ಹೊಲ, ಬಸಮ್ಮ, ಸಲ್ಮಾ ಇತರರು ಇದ್ದರು. ಅಲ್ಲದೆ ವಿರೂಪಣ್ಣ, ಚಂದ್ರಶೇಖರ್ ವರ್ಗ, ಗೋವಿಂದಪ್ಪ, ನಜೀರ್ ಅಹ್ಮದ್ ಇತರೆ ಕಾರ್ಯಕರ್ತರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಸ್‌ ನಿಲ್ಲಿಸದ ಹಾಗೂ ಅಸಭ್ಯವಾಗಿ ವರ್ತಿಸುವ ಚಾಲಕ-ನಿರ್ವಾಹಕರ ವಿರುದ್ಧ ಕ್ರಮಕ್ಕೆ ಆಗ್ರಹ

ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ...

ನಾಗೇಂದ್ರ ರಾಜೀನಾಮೆ ಹಿನ್ನೆಲೆ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆ ಝಮೀರ್ ಅಹಮದ್ ಹೆಗಲಿಗೆ

ಬಳ್ಳಾರಿ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ವಹಿಸಿಕೊಳ್ಳುವಂತೆ ಸಚಿವ ಝಮೀರ್ ಅಹಮದ್ ಖಾನ್...

ತುಮಕೂರು | ಕಲುಷಿತ ನೀರು ಸೇವನೆ ಪ್ರಕರಣ : ಮೃತರ ಸಂಖ್ಯೆ ಏಳಕ್ಕೆ ಏರಿಕೆ

ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ...