ಹೆಲಿಪ್ಯಾಡ್‌ ಬಳಿ ಆಕಸ್ಮಿಕ ಬೆಂಕಿ : ಸಿಎಂಗೆ ಎದುರಾದ ಅಗ್ನಿ ಆತಂಕ

Date:

  • ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್ ಬಳಿ ಆಕಸ್ಮಿಕ ಬೆಂಕಿ
  • ಸಿಎಂ ಬೊಮ್ಮಾಯಿ ಕುಟುಂಬಕ್ಕೆ ಎದುರಾದ ಅಗ್ನಿಆತಂಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಲಿಕಾಪ್ಟರ್‌ ಹಾರಾಟದ ಹೆಲಿಪ್ಯಾಡ್‌ ಬಳಿ ಕಾಣಿಸಿಕೊಂಡ ಬೆಂಕಿ ಕೆಲಕಾಲ ಆತಂಕದ ಸನ್ನಿವೇಶ ಸೃಷ್ಟಿ ಮಾಡಿದ ಘಟನೆ ಉಡುಪಿಯಲ್ಲಿ ದಾಖಲಾಗಿದೆ.

ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ಹೊರಡುವ ಸಲುವಾಗಿ ಸಿಎಂ ಬೊಮ್ಮಾಯಿ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್‌ಗೆ ಬಂದಿದ್ದರು. ಇಲ್ಲಿಂದ ಕೊಲ್ಲೂರು ಮಾರ್ಗಕ್ಕೆ ಅವರು ತೆರಳಿದ ಬಳಿಕ ಹೆಲಿಪ್ಯಾಡ್‌ ಆವರಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಅನಿರೀಕ್ಷಿತವಾಗಿ ಅಗ್ನಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೆಲಿಕಾಪ್ಟರ್‌ ಹಾರಾಟದ ವಿಚಾರದಲ್ಲಿ ಆತಂಕ ಸೃಷ್ಟಿಯಾಗಿತ್ತು. ಆದರೆ ತಕ್ಷಣಕ್ಕೆ ಕಾರ್ಯಪ್ರವೃತರಾದ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿ ವಾತಾವರಣ ತಿಳಿಗೊಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಸಿಎಂ ಎಸ್ಕಾರ್ಟ್ ಹೋದ ಬಳಿಕ ಅಗ್ನಿ ಕಾಣಿಸಿಕೊಂಡಿದ್ದು, ಹೆಲಿಕಾಪ್ಟರ್ ಫ್ಯಾನ್ ಗಾಳಿಯಿಂದ ಅಗ್ನಿ ಹರಡಿರುವ ಸಾಧ್ಯತೆ ಇದೆ ಎಂದು ಪ್ರಾಥಮಿಕ ತನಿಖೆಯಿಂದ ಅಂದಾಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ?: ಚಿಕ್ಕಮಗಳೂರು | ಮೂಡಿಗೆರೆ ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ರಾಜೀನಾಮೆ

ಈ ಬೆಳವಣಿಗೆಗಳಾಗುವ ಹೊತ್ತಿಗೆ ಮುಖ್ಯಮಂತ್ರಿಗಳು ಪತ್ನಿ ಸಮೇತರಾಗಿ ಕೊಲ್ಲೂರಿಗೆ ತೆರಳಿ ಮೂಕಾಂಬಿಕೆ ದರ್ಶನ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ...

ಮತದಾರರಿಗೆ ಬೆದರಿಕೆ ಆರೋಪ; ಡಿಕೆಶಿ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಲೋಕಸಭಾ ಚುನಾವಣೆಯಲ್ಲಿ ತಮ್ಮ ಸಹೋದರ ಡಿಕೆ ಸುರೇಶ್​ಗೆ ಮತ ನೀಡುವಂತೆ ಬೆಂಗಳೂರು...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...