ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

Date:

  • ಶಿರಸಿಯಲ್ಲೂ ರೋಡ್‌ ಶೋ ನಡೆಸಲಿರುವ ಶಿವರಾಜ್‌ ಕುಮಾರ್‌
  • ಸಿದ್ದರಾಮಯ್ಯ ನಮ್ಮ ಮೈಸೂರು ಪ್ರಾಂತ್ಯದವರು ಎಂದ ಹಿರಿಯ ನಟ

ಚಿತ್ರ ನಿರ್ಮಾಪಕಿ ಗೀತಾ ಕಾಂಗ್ರೆಸ್‌ ಪಕ್ಷ ಸೇರಿದ ಬೆನ್ನಲ್ಲೇ ಅವರ ಪತಿ, ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ ಕುಮಾರ್‌, ಕೈ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದಾರೆ.

- Advertisement -

ಏಪ್ರಿಲ್‌ 30ರಂದು ಸೊರಬ ವಿಧಾನಸಭಾ ಕ್ಷೇತ್ರದ ಆನವಟ್ಟಿಯಲ್ಲಿ ತಮ್ಮ ಸಂಬಂಧಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಮಧು ಬಂಗಾರಪ್ಪ ಪರ ರೋಡ್‌ ಶೋ ನಡೆಸುವ ಮೂಲಕ ಪ್ರಚಾರ ಕಾರ್ಯ ಆರಂಭಿಸಿರುವ ಶಿವಣ್ಣ, ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿ ಕಾಂಗ್ರೆಸ್‌ನ ಅನೇಕ ಅಭ್ಯರ್ಥಿಗಳ ಪರ ಮತ ಯಾಚಿಸುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸೋಮವಾರ ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಶಿವಣ್ಣ, “ಮಧು ಬಂಗಾರಪ್ಪ ನನ್ನ ಸಂಬಂಧಿ ಎನ್ನುವುದಕ್ಕಿಂತ ಆತ ನನ್ನ ಸ್ನೇಹಿತ, ಹೀಗಾಗಿ ಆತನ ಪರ ಚುನಾವಣಾ ಪ್ರಚಾರ ಕೈಗೊಂಡಿದ್ದೇನೆ. ಸಾಗರ ಕೂಡ ಪಕ್ಕದ ಕ್ಷೇತ್ರವಾದ ಕಾರಣಕ್ಕೆ ಅಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಅವರ ಪರ ರೋಡ್‌ ಶೋ ನಡೆಸುತ್ತಿದ್ದೇನೆ. ಶಿರಸಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿರುವ ಭಿಮಣ್ಣ ನಾಯಕ್‌ ನಮ್ಮ ಕುಟುಂಬ ಆತ್ಮೀಯರು ಹೀಗಾಗಿ ಅವರ ಪರವೂ ಪ್ರಚಾರ ಮಾಡಲಿದ್ದೇನೆ. ಜಗದೀಶ್‌ ಶೆಟ್ಟರ್‌ ಅವರು ಕೂಡ ನಮ್ಮ ಕುಟುಂಬದ ಆಪ್ತರು, ಅವರ ಪರ ಹುಬ್ಬಳ್ಳಿಯಲ್ಲಿ ಪ್ರಚಾರ ನಡೆಸಲಿದ್ದೇನೆ. ಅಶೋಕ್‌ ಖೇಣಿ ನನಗೆ ಒಳ್ಳೆಯ ಸ್ನೇಹಿತರು, ಅವರ ಪರ ಬೀದರ್‌ ಕ್ಷೇತ್ರದಲ್ಲಿ ರೋಡ್ ಶೋ ಮಾಡಲಿದ್ದೇನೆ. ಅಪ್ಪಾಜಿಯವರ ಕಾಲದಿಂದಲೂ ಸಿದ್ದರಾಮಯ್ಯನವರು ನಮ್ಮ ಕುಟುಂಬಕ್ಕೆ ಬೇಕಾದವರು, ಎಲ್ಲಕ್ಕಿಂತ ಹೆಚ್ಚಾಗಿ ನಮ್ಮ ಮೈಸೂರು ಪ್ರಾಂತ್ಯದವರು, ಹೀಗಾಗಿ ಮೇ 4ರಂದು ಅವರ ಪರ ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಲಿದ್ದೇನೆ. ಜನರ ಸ್ಪಂದನೆ ಕೂಡ ಚೆನ್ನಾಗಿದೆ” ಎಂದಿದ್ದಾರೆ.

ನಟ ಸುದೀಪ್‌ ಬಿಜೆಪಿ ಪರ ಪ್ರಚಾರ ಮಾಡುತ್ತಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ಶಿವಣ್ಣ, “ಪ್ರತಿಯೊಬ್ಬರಿಗೂ ಅವರದ್ದೇ ಆದ ಸಿದ್ಧಾಂತಗಳಿರುತ್ತವೆ. ನಾನು ಯಾರನ್ನು ವಿರೋಧಿಸಿ ಮಾತನಾಡುವವನಲ್ಲ. ನನಗೆ ಬೇಕಾದವರನ್ನು ಬೆಂಬಲಿಸುತ್ತಿದ್ದೇನೆ ಅಷ್ಟೇ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಪ್ರಚಾರ | ಸುದೀಪ್‌ ನೋಡಲು ಮುಗಿಬಿದ್ದ ಅಭಿಮಾನಿಗಳಿಗೆ ಲಾಠಿ ಏಟು

ಈ ಬಾರಿಯ ಚುನಾವಣೆಯಲ್ಲಿ ನಟ ಸುದೀಪ್‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿಯ ಹಲವು ಅಭ್ಯರ್ಥಿಗಳ ಪ್ರಚಾರ ಮಾಡುತ್ತಿದ್ದು, ಮತ್ತೊಬ್ಬ ಸ್ಟಾರ್‌ ನಟ ದರ್ಶನ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಎರಡೂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಇದೀಗ ಶಿವಣ್ಣ ಕೂಡ ಚುನಾವಣಾ ಕಣಕ್ಕೆ ಧುಮುಕಿದ್ದು, ಕೈ ಅಭ್ಯರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...