ಮಂಡ್ಯ | ಕಾಂಗ್ರೆಸ್‌ ಅಭ್ಯರ್ಥಿ ಪರ ರಮ್ಯ ಪ್ರಚಾರ

Date:

  • ರಾಜಕಾರಣಕ್ಕೆ ಮರಳುವ ಸುಳಿವು ನೀಡಿದ್ದ ಮೋಹಕ ತಾರೆ
  • ರಮ್ಯ ನೋಡಿ ಖುಷಿಯಾದ ಪ್ರಿಯಾಂಕಾ ಗಾಂಧಿ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರವನ್ನು ಶುರುವಿಟ್ಟುಕೊಂಡಿವೆ. ಈ ನಡುವೆ ಸಕ್ರಿಯ ರಾಜಾಕಾರಣಕ್ಕೆ ಮರಳುವ ಸುಳಿವು ನೀಡಿದ್ದ ನಟಿ, ಮಾಜಿ ಸಂಸದೆ ರಮ್ಯ ಮಂಗಳವಾರ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರವಿಕುಮಾರ್‌ ಗೌಡ ಪರ ಪ್ರಚಾರ ನಡೆಸಿದ್ದಾರೆ.

- Advertisement -

ಕಾಂಗ್ರೆಸ್‌ನ ತಾರಾ ಪ್ರಚಾರಕರ ಪಟ್ಟಿಯಲ್ಲಿ ರಮ್ಯ ಅವರ ಹೆಸರು ಕೂಡ ಸೇರ್ಪಡೆಯಾಗಿತ್ತು. ಈ ಹಿನ್ನೆಲೆ ರಮ್ಯ ಯಾವ ಕ್ಷೇತ್ರದಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಈ ಹಿಂದೆ ತಾವು ಪ್ರತಿನಿಧಿಸುತ್ತಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಿಂದಲೇ ನಟಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕೈ ಅಭ್ಯರ್ಥಿ ರವಿಕುಮಾರ್‌ ಗೌಡ ಭರ್ಜರಿ ಪ್ರಚಾರ ನಡೆಸಿದ್ದಾರೆ. ಇದೇ ವೇದಿಕೆಯಲ್ಲಿ ರಮ್ಯ ಕೂಡ ಕಾಣಿಸಿಕೊಂಡಿದ್ದು, ರವಿಕುಮಾರ್‌ ಅವರನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮನವಿ ಮಾಡಿದ್ದಾರೆ.

ವೇದಿಕೆಯ ಮೇಲೆ ರಮ್ಯರನ್ನು ಕಂಡು ಸಂತೋಷ ವ್ಯಕ್ತಪಡಿಸಿರುವ ಪ್ರಿಯಾಂಕಾ ಗಾಂಧಿ, “ಬಹಳ ದಿನಗಳ ನಂತರ ದಿವ್ಯ ಅವರನ್ನು ನೋಡಿ ಖುಷಿಯಾಯಿತು” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಸಿದ್ದರಾಮಯ್ಯ ಬೆಂಬಲಕ್ಕೆ ನಿಂತ ಶಿವರಾಜ್‌ ಕುಮಾರ್‌

“ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಕಾಂಗ್ರೆಸ್‌ನಿಂದ ಅವಕಾಶ ನೀಡಲಾಗಿತ್ತು. 6 ಕ್ಷೇತ್ರಗಳನ್ನು ಸೂಚಿಸಿ ಆ ಪೈಕಿ ಒಂದನ್ನು ಆಯ್ಕೆ ಮಾಡಿಕೊಳ್ಳುವಂತೆ ಆಫರ್‌ ನೀಡಲಾಗಿತ್ತು. ಆದರೆ, ಸದ್ಯ ಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧಳಾಗಿಲ್ಲ. ಹೀಗಾಗಿ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದೆ. ಬಿಜೆಪಿ ಮತ್ತು ಜೆಡಿಎಸ್‌ನಿಂದಲೂ ಸ್ಥಾನಮಾನದ ಆಫರ್‌ ಇತ್ತು. ಆದರೆ, ಎಂದಿಗೂ ಕಾಂಗ್ರೆಸ್‌ ಜೊತೆಗೆ ಇರಲು ಇಷ್ಟಪಡುತ್ತೇನೆ. ಸದ್ಯದಲ್ಲೇ ರಾಜಕಾರಣಕ್ಕೆ ಮರಳುತ್ತೇನೆ” ಎಂದಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೇಣುಕಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ವಿಚಾರಣೆಗೆ ದರ್ಶನ್‌ ಪರ ವಕೀಲರ ಆಕ್ಷೇಪ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ, 'ಮಾಫಿ ಸಾಕ್ಷಿ'ಯ...

ಪುರುಷರಿಗೂ ‘ಪೀರಿಯಡ್ಸ್’ ಬರಬೇಕು; ಗಂಡಸರಿಗೆ ‘ಮುಟ್ಟಾಗಿದ್ದರೆ’ ಕೆಲಸದ ನಿಯಮಗಳೇ ಬದಲಾಗುತ್ತಿದ್ದವು: ನಟಿ ಶೃತಿ ಹಾಸನ್

ಪುರುಷರಿಗೂ ಪೀರಿಯಡ್ಸ್ ಬರುವಂತಾಗಿದ್ದರೆ ಪರಿಸ್ಥಿತಿ ತೀರಾ ಭಿನ್ನವಾಗಿರುತ್ತಿತ್ತು. ಉದ್ಯೋಗ ಒಪ್ಪಂದಗಳಲ್ಲಿ 'ಋತುಚಕ್ರದ...

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...