ಸುದೀಪ್ ಆಯ್ತು ಈಗ ದರ್ಶನ್: ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ

Date:

  • ಚುನಾವಣಾ ಪ್ರಚಾರ ಕಣದೊಳಗೆ ಸಕ್ರಿಯರಾದ ಸ್ಟಾರ್ ನಟ ದರ್ಶನ್
  • ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆಗೆ ಜೊತೆಯಾಗಲಿರುವ ನಟ

ರಂಗೇರಿರುವ ರಾಜ್ಯ ವಿಧಾನಸಭಾ ಚುನಾವಣಾ ಕಣದೊಳಗೆ ಈಗ ಸ್ಯಾಂಡಲ್‌ವುಡ್‌ ಸ್ಟಾರ್‌ಗಳ ಕಲರವ ಆರಂಭವಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಪರ ಪ್ರಚಾರ ನಡೆಸುವುದಾಗಿ ಸ್ಟಾರ್ ನಟ ಸುದೀಪ್ ಘೋಷಿಸಿದ್ದಾರೆ. ಈ ಬೆನ್ನಲ್ಲೇ, ಚಂದನವನದ ಮತ್ತೋರ್ವ ಸ್ಟಾರ್ ನಟ ದರ್ಶನ್ ಕೂಡ ರಾಜಕೀಯ ಅಖಾಡದಲ್ಲಿ ತಮ್ಮನ್ನೂ ತೊಡಗಿಸಿಕೊಳ್ಳಲಿದ್ದಾರೆ.

- Advertisement -

ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪರವಾಗಿ ಪ್ರಚಾರ ನಡೆಸಿದ್ದ ದರ್ಶನ್, ಈ ಬಾರಿ ಸುಮಲತಾ ಅವರ ಆಪ್ತನ ಜೊತೆ ಚುನಾವಣಾ ಕಣದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಶ್ರೀರಂಗಪಟ್ಟಣದ ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಪರವಾಗಿ ದರ್ಶನ್ ಎಲೆಕ್ಷನ್ ಅಖಾಡದಲ್ಲಿ ಗುರುತಿಸಿಕೊಳ್ಳಲಿದ್ದಾರೆ. “ತಮ್ಮ ಜೊತೆ ನಾಮಪತ್ರ ಸಲ್ಲಿಕೆಗೆ ದರ್ಶನ್ ಜೊತೆಯಾಗಲಿದ್ದಾರೆ” ಎಂದು ಖುದ್ದು ಬಿಜೆಪಿ ಅಭ್ಯರ್ಥಿ ಸಚ್ಚಿದಾನಂದ ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? :ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

“ಇಂದು (ಏಪ್ರಿಲ್ 17)ರಂದು ನಾನು ನಾಮಪತ್ರ ಸಲ್ಲಿಸುತ್ತಿದ್ದೇನೆ ಈ ವೇಳೆ ಛಾಲೆಂಜಿಂಗ್ ಸ್ಟಾರ್ ದರ್ಶನ್ ನನ್ನೊಂದಿಗಿರಲಿದ್ದಾರೆ” ಎಂದು ತಿಳಿಸಿದ್ದಾರೆ.

ಹೀಗೆ ಸುದೀಪ್ ಬಳಿಕ ದರ್ಶನ್‌ ಎಲೆಕ್ಷನ್ ಅಖಾಡದಲ್ಲಿ ಕಾಣಿಸಿಕೊಳ್ಳುತ್ತಿರುವುದಕ್ಕೆ ಅಭಿಮಾನಿಗಳು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...