ಗದಗ | ಅಂಬೇಡ್ಕರ್‌ಗೆ ನಿಂದನೆ ಆರೋಪ; ಯತ್ನಾಳ್‌ ಭಾವಚಿತ್ರ ಸುಟ್ಟು ದಲಿತ ಮುಖಂಡರ ಆಕ್ರೋಶ

Date:

Advertisements
  • ಅಂಬೇಡ್ಕರ್‌ ಪ್ರತಿಮೆಗೆ ಮಾಲೆ ಹಾಕಲು ನಿರಾಕರಣೆ ಆರೋಪ
  • ಗಾಂಧಿ ವೃತ್ತದಲ್ಲಿ ಪ್ರತಿಭಟನೆ; ಯತ್ನಳ್‌ ಭಾವಚಿತ್ರಕ್ಕೆ ಬೆಂಕಿ

ಸದಾ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುವ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ ಈಗ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಕೊಪ್ಪಳ ಜಿಲ್ಲೆ ಹನುಮಸಾಗರದದಲ್ಲಿ ಚುನಾವಣಾ ಪ್ರಚಾರದ ವೇಳೆ ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ನಿಂದಿಸಿ ಅಗೌವರವ ತೋರಿದ್ದಾರೆ ಎಂದು ಆರೋಪಿಸಿ ಗದಗ ಪಟ್ಟಣದ ಗಾಂಧಿ ವೃತ್ತದಲ್ಲಿ ಭಾನುವಾರ ದಲಿತ ಮುಖಂಡರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸಂಘಟನೆಗಳ ಜಂಟಿ ವೇದಿಕೆ, ಅಲ್ಪ ಸಂಖ್ಯಾತರ ಸಂಘಟನೆಗಳು, ಹಿಂದುಳಿದ ಸಂಘಟನೆಗಳು ಸಾತ್‌ ನೀಡಿ, ಯತ್ನಾಳ್ ಹೇಳಿಕೆಯನ್ನು ಖಂಡಿಸಿದರು. ಇದೇ ಸಂದರ್ಭದಲ್ಲಿ ಬಸನಗೌಡ ಪಾಟೀಲ್ ಯತ್ನಾಳ‌ ಭಾವಚಿತ್ರ ಸುಡುವುದರ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ದಲಿತ ಮುಖಂಡ ಶರೀಫ್ ಬಿಳಿಯಲಿ ಮಾತನಾಡಿ, “ಚುನಾವಣಾ ಪ್ರಚಾರ ಸಭೆಯಲ್ಲಿ ಯತ್ನಾಳ್, ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನಿರಾಕರಿಸಿ “ಅವಂಗ ಯಾಕ್ ಹಾರ ಹಾಕಬೇಕು?” ಎಂದು ಸಂವಿಧಾನ ಶಿಲ್ಪಿಯ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡನೀಯ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements
ಗದಗ ಪ್ರತಿಭಟನೆ 01

“ಸಂವಿಧಾನ ಒಪ್ಪದ, ಒಡೆದಾಳುವ ನೀತಿಯನ್ನು ಅನುಸರಿಸಿಕೊಂಡು ಬಂದಿರುವ ಬಿಜೆಪಿಯ ಕೋಮುವಾದಿ ಯತ್ನಾಳ್, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಏಕವಚನದಿಂದ ನಿಂದಿಸಿ, ಅವಮಾನಿಸಿ ಉದ್ದಟತನದ ಮಾತುಗಳನ್ನಾಡಿದ್ದಾರೆ. ಇಂತಹ ಅವಿವೇಕಿತನದ ಹೇಳಿಕೆ ನೀಡಿರುವ ಯತ್ನಾಳನಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಮಾಡಿಕೊಡಬಾರದು. ಕೂಡಲೇ ಯತ್ನಾಳ್ ಅವರನ್ನು ಬಂಧಿಸಬೇಕು” ಎಂದು ಚುನಾವಣಾ ಅಧಿಕಾರಿಗಳನ್ನು ಆಗ್ರಹಿಸಿದರು.

“ಬಿಜೆಪಿ ಮತ್ತು ಅದರ ಆರ್.ಎಸ್.ಎಸ್ ಸ್ವಾತಂತ್ರ್ಯ ಪೂರ್ವದಲ್ಲಿಯೂ ಅಂಬೇಡ್ಕರ್ ಅವರು ಸಂವಿಧಾನ ಬರೆಯುವ ಸಂದರ್ಭದಲ್ಲಿಯೂ ವಿರೋಧ ಮಾಡಿದವರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರದಲ್ಲಿ ಇವತ್ತಿಗೂ ಸಂವಿಧಾನ ವಿರೋಧಿಸುತ್ತಲೇ ಬಂದವರು. ಅದಕ್ಕೆ ಉದಾಹರಣೆಯಾಗಿ ಅನಂತಕುಮಾರ ಹೆಗಡೆ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅಂತಹವರು” ಎಂದು ದೂರಿದರು.

ಆರ್.ಎಸ್.ಎಸ್ ಮತ್ತು ಬಿಜೆಪಿ, ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವನ್ನು ವಿರೋದಿಸುತ್ತಲೇ ಬಂದಿದ್ದಾರೆ. ಈ ಸಲ ಜನರು ಎಚ್ಚರವಾಗಿದ್ದಾರೆ, ಪ್ರಜ್ಞೆವಂತರಾಗಿದ್ದಾರೆ. ಎಲ್ಲರೂ ಈ ಚುನಾವಣೆಯಲ್ಲಿ ಮನುವಾದಿ ಸರ್ಕಾರವನ್ನು ತೋಲಗಿಸಿ, ದೇಶವನ್ನು ಕಾಪಾಡುವಂತ, ಸಂವಿಧಾನ ಕಾಪಾಡುವಂತವರಿಗೆ ಮತ ಚಲಾಯಿಸೋಣ ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ ಜಿಲ್ಲೆ | ಬಿಜೆಪಿ ಭದ್ರಕೋಟೆಯನ್ನು ಭೇದಿಸಲಿದ್ದಾರೆಯೇ ಕಾಂಗ್ರೆಸ್‌ ಕಲಿಗಳು?

ದಲಿತ ಸಂಘರ್ಷ ಸಮಿತಿ ಜಿಲ್ಲಾ ಅಧ್ಯಕ್ಷ ಬಾಲರಾಜ್ ಅರ್ಬರ್ ಮಾತನಾಡಿ, “ಯತ್ನಾಳ್ ಇಂದು ಶಾಸಕ ಸ್ಥಾನಕ್ಕೆ ಬರಲು ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಕಾರಣ, ಅಂತಹ ಮಹಾನ್ ವ್ಯಕ್ತಿ ಅಂಬೇಡ್ಕರ್ ಅವರಿಗೆ ಅವಮಾನಿಸಿದ ಯತ್ನಾಳ್ ಅವರಿಗೆ ಶಿಕ್ಷೆ ಆಗಲೇಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡರಾದ ರಮೇಶ ಬಾಳಮ್ಮನವರ, ಶಿವಾನಂದ, ಆನಂದ ಸಿಂಗಾಡಿ, ಪರಶು ಕಾಳೆ, ಯೂಸೂಪ್, ವಿಜಯ್ ಕಲಮನಿ, ಪೂಜಾ ಸಿಂಧೆ ಹಾಗೂ ದಲಿತ ಸಂಘರ್ಷ ಸಮಿತಿ ಸಂಘಟಕರು, ಅಲ್ಪಸಂಖ್ಯಾತ ಸಂಘಟಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X