ರಾಜ್ಯದಲ್ಲಿ ಮತ್ತೊಂದು ಭ್ರಷ್ಟಾಚಾರ ಪ್ರಕರಣ ಬೆಳಕಿಗೆ; ಇದು 40% ಸರ್ಕಾರಕ್ಕೆ ಸಾಕ್ಷಿ: ಕೆ ಸಿ ವೇಣುಗೋಪಾಲ್

Date:

  • ಬಿಬಿಎಂಪಿ ಅಧಿಕಾರಿಯೇ ಇಷ್ಟೊಂದು ಭ್ರಷ್ಟಾಚಾರ ಮಾಡಿರುವಾಗ ಸರ್ಕಾರದ ಕಥೆ ಏನು?
  • 40% ಭ್ರಷ್ಟಾಚಾರದ ಮುಖ್ಯಸ್ಥ ಮುಖ್ಯಮಂತ್ರಿ ಬೊಮ್ಮಾಯಿ ಅವರೇ ಬಿಬಿಎಂಪಿ ಉಸ್ತುವಾರಿ

ಸಹಾಯಕ ನಿರ್ದೆಶಕ ಅಧಿಕಾರಿಯೇ ಇಷ್ಟೊಂದು ಭ್ರಷ್ಟಾಚಾರ ಮಾಡಬಹುದಾದರೆ, ಇನ್ನು ಸರ್ಕಾರದ ಉನ್ನತ ಹಂತದಲ್ಲಿರುವವರು ಇನ್ನೆಷ್ಟು ಭ್ರಷ್ಟಾಚಾರ ಮಾಡಬಹುದು ಊಹಿಸಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ರಾಜ್ಯದಲ್ಲಿ ಮತ್ತೊಂದು ಭ್ರಷ್ಟಾಚಾರ ನಡೆದಿದ್ದು ಇದು ಆಘಾತಕಾರಿಯಾಗಿದೆ. ಇದು 40% ಭ್ರಷ್ಟಾಚಾರದ ಸರ್ಕಾರಕ್ಕೆ ಸಾಕ್ಷಿ” ಎಂದರು.

“ಬಿಬಿಎಂಪಿಯ ಸಹಾಯಕ ನಿರ್ದೇಶಕ ಮಟ್ಟದ ಅಧಿಕಾರಿ ಬಳಿ ಕೋಟ್ಯಂತರ ಹಣ, ಆಭರಣ, ಆಸ್ತಿಪಾಸ್ತಿಗಳು ಲಭ್ಯವಾಗಿವೆ. ಈ ಅಧಿಕಾರಿ ಬಳಿ ಬೆಂಗಳೂರಿನಲ್ಲಿ 12 ಫ್ಲಾಟ್, ನೆಲಮಂಗಲದಲ್ಲಿ 5 ಎಕರೆ ಜಮೀನು, ಮಲ್ಲೇಶ್ವರದಲ್ಲಿ ಮೂರು ನಿವೇಶನ, 1 ಕೋಟಿ ಮೌಲ್ಯದ ಚಿನ್ನ ವಜ್ರಗಳು, 1.44 ಕೋಟಿ ನಗದು ಇದೆ. ಈ ಅಧಿಕಾರಿ ಇಷ್ಟೊಂದು ಭ್ರಷ್ಟಾಚಾರ ಮಾಡಲು ಧೈರ್ಯ ಬಂದಿದ್ದು ಹೇಗೆ? ಬಿಬಿಎಂಪಿ ಉಸ್ತುವಾರಿ ಯಾರು ಎಂದರೆ ಗೊತ್ತಾಗುತ್ತದೆ. 40% ಭ್ರಷ್ಟಾಚಾರದ ಮುಖ್ಯಸ್ಥರೆ ಬಿಬಿಎಂಪಿ ಉಸ್ತುವಾರಿ” ಎಂದು ಸಿಎಂ ಬೊಮ್ಮಾಯಿ ಹೆಸರು ಹೇಳದೇ ವಾಗ್ದಾಳಿ ನಡೆಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಇದುವರೆಗೂ ಬೆಂಗಳೂರಿನ ಅಭಿವೃದ್ಧಿ, ಐಟಿ ಹಬ್, ನೋಡಿದರೆ ಎಲ್ಲರೂ ಹೆಮ್ಮೆ ಪಟ್ಟು, ದೇಶದ ಜನ ಬೆಂಗಳೂರಿಗೆ ಬರುತ್ತಿದ್ದರು. ಆದರೆ ಹಾಲಿ ಸರ್ಕಾರ ಬೆಂಗಳೂರನ್ನು ಹಣ ಗಳಿಕೆಗೆ ಬಳಸಿಕೊಳ್ಳುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಉದ್ದಿಮೆದಾರರು ಬೆಂಗಳೂರಿನಲ್ಲಿ ವ್ಯಾಪಾರ ಮಾಡಲು ಬರಲು ಹೇಗೆ ಸಾಧ್ಯ” ಎಂದು ಪ್ರಶ್ನಿಸಿದರು.

“ಈ ಅಧಿಕಾರಿಗಳು ಇಷ್ಟೊಂದು ಭ್ರಷ್ಟಾಚಾರ ನಡೆಸಲು ಧೈರ್ಯ ಹೇಗೆ ಬರುತ್ತದೆ? ಯಾವಾಗ ಸರ್ಕಾರದ ಮುಖ್ಯಸ್ಥರೇ ಭ್ರಷ್ಟಾಚಾರದಲ್ಲಿ ಭಾಗಿಯಾಗುತ್ತಾರೋ ಆಗ ಈ ರೀತಿ ಆಗುತ್ತದೆ. ಇದು ರಾಜ್ಯದಲ್ಲಿ ಸರ್ಕಾರ 40% ಜಾರಿ ಮಾಡಿರುವುದಕ್ಕೆ ಸಾಕ್ಷಿ. ರಾಜ್ಯದ ಜನ ಈ ಸರ್ಕಾರವನ್ನು ಕಿತ್ತೊಗೆಯಲು ಸಿದ್ಧವಾಗಿದ್ದು, ಚುನಾವಣೆ ಸಮಯದಲ್ಲೂ ನಾವು ಇಂತಹ ಬೆಳವಣಿಗೆಗಳನ್ನು ನೋಡುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ಚುನಾವಣೆ 2023 | ಈದಿನ.ಕಾಮ್‌ ಸಮೀಕ್ಷೆ-4: ಭ್ರಷ್ಟಾಚಾರವೇ ಚುನಾವಣೆಯ ಪ್ರಧಾನ ಸಂಗತಿ

ಈ ಬೆಳವಣಿಗೆ ನಮ್ಮೆಲ್ಲರಿಗೂ ಆಘಾತಕಾರಿ ವಿಚಾರ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಕೆಲವು ಪ್ರಶ್ನೆಗಳನ್ನು ಕೇಳಬಯಸುತ್ತದೆ:

ಭ್ರಷ್ಟಾಚಾರದ ಆರೋಪ ಮಾಡಿದಾಗಲೆಲ್ಲಾ 40% ಸರ್ಕಾರ ಸಾಕ್ಷಿ ಕೇಳುತ್ತಿತ್ತು. ಈಗ ಈ ಪ್ರಕರಣವೇ ಸಾಕ್ಷಿಯಾಗಿದ್ದು, ಮುಖ್ಯಮಂತ್ರಿಗಳು ತಮ್ಮ ಸರ್ಕಾರದ ಭ್ರಷ್ಟಾಚಾರವನ್ನು ಒಪ್ಪಿಕೊಳ್ಳುತ್ತಾರಾ?

ಬಿಬಿಎಂಪಿ 40% ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿಗಳ ನಿಯಂತ್ರಣದಲ್ಲಿದ್ದು, ಅವರಿಗೆ ಈ ಭ್ರಷ್ಟಾಚಾರವನ್ನು ನಿಯಂತ್ರಿಸಲು ಯಾಕೆ ಸಾಧ್ಯವಾಗಿಲ್ಲ?

ಮುಖ್ಯಮಂತ್ರಿಗಳು ರಾಜಧಾನಿಯಲ್ಲಿ ಭ್ರಷ್ಟಾಚಾರವನ್ನು ನಿಯಂತ್ರಿಸದಿದ್ದರೆ, ರಾಜ್ಯದುದ್ದಗಲದಲ್ಲಿ ಹೇಗೆ ಭ್ರಷ್ಟಾಚಾರ ನಿಯಂತ್ರಣ ಮಾಡುತ್ತಾರೆ?

“ಪ್ರತಿನಿತ್ಯ ಬಿಜೆಪಿ ನಾಯಕರು ಚುನಾವಣೆ ಸಮಯದಲ್ಲಿ ಅಕ್ರಮ ಹಣ ಹಂಚುತ್ತಿರುವಾಗ ಕೇಂದ್ರ ತನಿಖಾ ಸಂಸ್ಥೆಗಳು ಯಾಕೆ ಮೌನವಾಗಿವೆ? ರಾಜ್ಯದ ಹಣವನ್ನು ಸರ್ಕಾರ ಲೂಟಿ ಮಾಡಿದ್ದು, ಅದೇ ಹಣದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ರಾಜ್ಯದ ಜನ ಅರ್ಥ ಮಾಡಿಕೊಂಡಿದ್ದು, ಈ ಸರ್ಕಾರ ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಈ ಸರ್ಕಾರ ಅಷ್ಟು ಭ್ರಷ್ಟವಾಗಿದೆ, ಕರ್ನಾಟಕ ಹಿಂದೆದೂ ಇಂತಹ ಭ್ರಷ್ಟಾಚಾರ ಕಂಡಿರಲಿಲ್ಲ. ಹೀಗಾಗಿ ರಾಜ್ಯದ ಜನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ತಕ್ಕ ಪಾಠ ಕಲಿಸಬೇಕಿದೆ” ಎಂದು ಕೋರಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣ ಪ್ರಕರಣ | ನಮಗೆ ಯಾರೂ ಅಧಿಕೃತ ದೂರು ನೀಡಿಲ್ಲ: ಸಚಿವ ಪರಮೇಶ್ವರ್

ಎಂಎಲ್‌ಸಿ ಸೂರಜ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟ ಹಾಗೆ...

ನೀಟ್ ರದ್ದು ಮಾಡಿದರೆ ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ: ಶಿಕ್ಷಣ ಸಚಿವ

ನೀಟ್‌ ವಿಚಾರವಾಗಿ ತೀವ್ರ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ತನಿಖೆ...

ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು,...

ಜಗನ್ ರೆಡ್ಡಿ ಅವರ ವೈಎಸ್‌ಆರ್‌ ಕಾಂಗ್ರೆಸ್‌ನ ನಿರ್ಮಾಣ ಹಂತದಲ್ಲಿದ್ದ ಕೇಂದ್ರ ಕಚೇರಿ ಕೆಡವಿದ ಆಂಧ್ರ ಸರ್ಕಾರ

ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಸೀತಾನಗರಂನಲ್ಲಿ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ...