- ರೌಡಿಶೀಟರ್ ಮಣಿಕಂಠಗೆ ಟಿಕೆಟ್ ನೀಡಿದ್ದಕ್ಕೆ ಬಿಜೆಪಿ ನಾಯಕರ ಬೇಸರ
- ಚಿತ್ತಾಪುರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಅರವಿಂದ್ ಚವ್ಹಾಣ
ಕಲ್ಯಾಣ ಕರ್ನಾಟಕದ ಫ್ರಭಾವಿ ನಾಯಕ, ಚಿತ್ತಾಪುರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಶನಿವಾರ ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.
ಕಲಬುರಗಿಯ ಪ್ರಮುಖ ಬಿಜೆಪಿ ನಾಯಕರೆಂದು ವಿರ್ಶವನಾಥ ಜೊತೆ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅರವಿಂದ ಚವ್ಹಾಣ ಕೂಡ ಕಾಂಗ್ರೆಸ್ ಸೇರಿದ್ದಾರೆ. ಇಬ್ಬರೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಕಾಂಗ್ರೆಸ್ ಸೇರಿದ್ದಾರೆ.
ಚಿತ್ತಾಪುರ ಮತಕ್ಷೇತ್ರದಲ್ಲಿ ಬಿಜೆಪಿ ಅರವಿಂದ ಚವ್ಹಾಣ ಅವರಿಗೆ ನೀಡಬೇಕೆಂದು ವಿಶ್ವನಾಥ್ ಪಾಟೀಲ್ ಒತ್ತಾಯಿಸಿದ್ದರು. ಅರವಿಂದ್ ಚವ್ಹಾಣ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ ರೌಡಿಶೀಟರ್ ಮಣಿಕಂಠ ರಾಠೋಡ ಅವರಿಗೆ ಟಿಕೆಟ್ ನೀಡಿದೆ. ಹೀಗಾಗಿ, ಇಬ್ಬರು ಬೇಸರಗೊಂಡು ಪಕ್ಷ ತ್ಯಜಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೋರ್ಟ್ ಆವರಣದಲ್ಲಿ ವಕೀಲನಿಗೆ ಚಾಕುವಿನಿಂದ ಇರಿದ ಮಹಿಳೆ
ಬಿಜೆಪಿಯಲ್ಲಿ ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಕ್ಷೇತ್ರಕ್ಕೆ ಸಂಬಂಧ ಇಲ್ಲದವರಿಗೆ ಟಿಕೆಟ್ ನೀಡಲಾಗಿದೆ ಎಂದು ವಿಶ್ವನಾಥ ಪಾಟೀಲ ಅವರು ಪತ್ರಿಕಾಗೋಷ್ಠಿಯಲ್ಲಿ ಬೇಸರ ವ್ಯಕ್ತಪಡಿಸಿದ್ದರು.