ಅಪ್ಪು ಹೆಸರನ್ನು ರಾಜಕಾರಣಕ್ಕೆ ಬಳಸಬೇಡಿ : ಪ್ರತಾಪ್‌ ಸಿಂಹಗೆ ನೆಟ್ಟಿಗರ ತರಾಟೆ

Date:

ಅಪ್ಪು ಹೆಸರಲ್ಲಿ ಸೋಮಣ್ಣ ಆಸ್ಪತ್ರೆ ಕಟ್ಟಿಸಿದ್ದಾರೆ ಎಂದ ಪ್ರತಾಪ್‌ ಸಿಂಹ

- Advertisement -

ಕಮಿಷನ್‌ ಎಷ್ಟು ತೆಗೆದುಕೊಂಡಿದ್ದಾರೆ ಕೇಳಿ ಎಂದ ಅಭಿಮಾನಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

ಸ್ಯಾಂಡಲ್‌ವುಡ್‌ನ ಹಿರಿಯ ನಟ ಶಿವರಾಜ್‌ಕುಮಾರ್‌ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರ ವರುಣಾ ಕ್ಷೇತ್ರದಲ್ಲಿ ಗುರುವಾರ ಭರ್ಜರಿ ಪ್ರಚಾರ ನಡೆಸುತ್ತಲೇ, ಅವರ ಸಹೋದರ ದಿವಂಗತ ನಟ ಪುನೀತ್‌ ರಾಜ್‌ಕುಮಾರ್‌ ಅವರ ಹೆಸರನ್ನು ಎಳೆದು ತಂದು ರಾಜಕೀಯ ಮಾಡಲು ಯತ್ನಿಸಿದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರನ್ನು ಬಹುಭಾಷಾ ನಟ ಪ್ರಕಾಶ್‌ ರಾಜ್‌ ಸೇರಿದಂತೆ ಹಲವು ಅಭಿಮಾನಿಗಳು ತರಾಟೆಗೆ ತೆಗೆದುಕೊಂಡಿದ್ದಾರೆ.

ಶಿವಣ್ಣ, ಸಿದ್ದರಾಮಯ್ಯ ಪರ ರೋಡ್‌ ಶೋದಲ್ಲಿ ಭಾಗಿಯಾಗಿರುವ ಸಂದರ್ಭದ ಫೋಟೋ ಮತ್ತು ಬೆಂಗಳೂರಿನಲ್ಲಿ ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಕಟ್ಟಿಸಿದ ಸರ್ಕಾರಿ ಆಸ್ಪತ್ರೆಯ ಉದ್ಘಾಟನೆಯ ಸಂದರ್ಭದಲ್ಲಿ ರಾಘವೇಂದ್ರ ರಾಜ್‌ಕುಮಾರ್‌ ಅವರು ಸಿದ್ದರಾಮಯ್ಯನವರ ಎದುರಾಳಿ, ಸಚಿವ ವಿ. ಸೋಮಣ್ಣನವರನ್ನು ಹೋಗಳಿದ ಹಳೆಯ ವಿಡಿಯೋ ಎರಡನ್ನೂ ಹಂಚಿಕೊಂಡು, “ಪುನೀತ್ ರಾಜಕುಮಾರ್ ಸರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವ ಭಾವ ಭಕುತಿಗೆ” ಎಂದು ಪ್ರತಾಪ್‌ ಸಿಂಹ ಟ್ವೀಟ್‌ ಮಾಡಿದ್ದಾರೆ.

ಪ್ರತಾಪ್‌ ಸಿಂಹ ಅವರ ಈ ರಾಜಕೀಯ ಪ್ರೇರಿತ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಬಹುಭಾಷಾ ನಟ ಪ್ರಕಾಶ್‌ ರಾಜ್‌, “ನಿಮ್ಮ ಹೊಲಸು ರಾಜಕಾರಣಕ್ಕೆ ನಮ್ಮೆಲ್ಲರ ʼಅಪ್ಪುʼ ಅವರನ್ನು ಯಾಕೆ ಎಳೆಯುತ್ತೀರಿ ಪ್ರತಾಪ್‌ ಸಿಂಹ್‌ ಅವರೇ? ಛೀ..ಛೀ.. ಇದು ತುಂಬಾ ದೊಡ್ಡ ತಪ್ಪು, ಈ ತಪ್ಪನ್ನು ಮಾಡಬೇಡಿ” ಎಂದು ಎಚ್ಚರಿಸಿದ್ದಾರೆ.

ಕೇವಲ ಪ್ರಕಾಶ್‌ ರಾಜ್‌ ಮಾತ್ರವಲ್ಲ, ರಾಜ್‌ ಕಟುಂಬದ ಅಭಿಮಾನಿಗಳು ಕೂಡ ಪ್ರತಾಪ್‌ ಸಿಂಹ ಅವರನ್ನು ತರಾಟೆಗೆ ತೆಗದುಕೊಂಡಿದ್ದಾರೆ. ಮುನಿಯಪ್ಪ ಎಂಬುವವರು ಟ್ವೀಟ್‌ ಮಾಡಿ, “ದೊಡ್ಮನೆ ಬಗ್ಗೆ ಮಾತನಾಡುವಾಗ ಹಾಗೂ ಶಿವರಾಜ್ ಕುಮಾರ್ ಅವರ ವಿಚಾರದಲ್ಲಿ ಜವಾಬ್ದಾರಿ ಇರಲಿ. ಇಲ್ಲವಾದರೆ ನಿಮ್ಮ ರಾಜಕೀಯ ಜೀವನ ಕುಂಠಿತವಾಗುತ್ತದೆ. ಆಸ್ಪತ್ರೆ ಕಟ್ಟಿಸಿದ್ದು ಪಕ್ಷದ ಹಣದಲ್ಲಲ್ಲ. ಇದರಲ್ಲಿ ಕಮಿಷನ್ ಎಷ್ಟು ತೆಗೆದುಕೊಂಡರು ಎಂದು ಸಚಿವರನ್ನು ಕೇಳಿ” ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಆಕಾಶ್‌ ಪಾಟೀಲ್‌ ಎಂಬುವವರು ಟ್ವೀಟ್‌ ಮಾಡಿ, “ಅಲ್ರಯ್ಯ ಅಪ್ಪು ಅವರ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿದ್ದು ಈ ರೀತಿ ಚುನಾವಣೆಯ ಸಂದರ್ಭದಲ್ಲಿ ಬಳಸಿಕೊಳ್ಳಲಿಕ್ಕಾ? ನಾಚಿಕೆ ಆಗಬೇಕು ನಿಮ್ಮ ಜನ್ಮಕ್ಕೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರ ರವಿ ಎಂಬುವವರು ಪ್ರತಿಕ್ರಿಯಿಸಿದ್ದು, “ಸೋಮಣ್ಣ ಏನು ಅವರ ಮನೆಯ ದುಡ್ಡಲ್ಲಿ ಆಸ್ಪತ್ರೆ ಕಟ್ಟಿಸಿದ್ದಾರಾ? ನಿಮ್ಮ ಬೇಳೆ ಬೇಯಿಸಿಕೊಳ್ಳಲಿಕ್ಕೆ ಅಣ್ಣ ತಮ್ಮಂದಿರ ಮಧ್ಯೆ ಹುಳಿ ಹಿಂಡುವ ಕೆಲಸ ಯಾಕೆ ಮಾಡ್ತೀರಿ” ಎಂದು ಕಿಡಿ ಕಾರಿದ್ದಾರೆ.

ಕೆಲವರು, “ನಿಮ್ಮ ನೀಚ ರಾಜಕೀಯಕ್ಕೆ ಅಪ್ಪು ಹೆಸರನ್ನು ಬಳಸಬೇಡಿ” ಎಂದರೆ, ಇನ್ನು ಕೆಲವರು, “ಈ ಮಾತನ್ನು ಹೇಳಿ ವರುಣಾದಲ್ಲಿ ಸೋಮಣ್ಣನವರ ಗೆಲುವುವಿಗೆ ಎಳ್ಳುನೀರು ಬಿಟ್ಟ ಪ್ರತಾಪಣ್ಣ” ಎಂದು ವ್ಯಂಗ್ಯಮಯವಾಗಿ ಟ್ವೀಟ್‌ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಸ್ಕರ್ 2026: ಅತ್ಯುತ್ತಮ ಅಂತಾರಾಷ್ಟ್ರೀಯ ಸಿನಿಮಾ ವಿಭಾಗಕ್ಕೆ ಮರಾಠಿಯ ‘ಗೋಂಧಳ್’ ಆಯ್ಕೆ

2026ರಲ್ಲಿ ನಡೆಯಲಿರುವ 99ನೇ ಸಾಲಿನ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿಯ (ಆಸ್ಕರ್) 'ಅತ್ಯುತ್ತಮ...

‘ವೆಟ್ಟುವಂ’ | ಪಾ ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ!

ನಿರ್ದೇಶಕ ಪಾ ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್...

ಸಾಕ್ಷ್ಯ ಚಿತ್ರಗಳಿರದ ದೇಶವು ಚರಿತ್ರೆ ಇರದ ರಾಷ್ಟ್ರದಂತೆ ಎಂದಿದ್ದ ಪ್ಯಾಟ್ರಿಷಿಯೊ ಗುಜ್ಮಾನ್

ಚಿಲಿ ದೇಶದ ಜನರ ಸಾಮಾಜಿಕ ಬದುಕು ಹಾಗೂ ರಾಜಕೀಯ ಬೆಳವಣಿಗೆಗಳು ಹೆಣೆದುಕೊಂಡ...

ಕನ್ನಡದ ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಗರಿ

ಭಾರತೀಯ ಚಿತ್ರರಂಗಕ್ಕೆ ನೀಡಿದ ಅನನ್ಯ ಕೊಡುಗೆಯನ್ನು ಪರಿಗಣಿಸಿ, ಕನ್ನಡದ ಹಿರಿಯ ನಟ...